
ದಾವಣಗೆರೆ (ಸೆ.20): ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ವಹಿಸಲಾಗಿದೆ.
ನಗರದ ತ್ರಿಶೂಲ ಕಲಾ ಭವನದಲ್ಲಿ ಭಾನುವಾರ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಅಧ್ಯಕ್ಷತೆಯ ಸಭೆಯಲ್ಲಿ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಜವಾಬ್ದಾರಿಯನ್ನು ಸಚಿವ ಈಶ್ವರಪ್ಪನವರಿಗೆ ನೀಡಿ ಅಭಿನಂದಿಸಲಾಯಿತು.
ಕಾಂಗ್ರೆಸ್ ಹೇಳಿದ್ದು ಸತ್ಯ: ಸ್ವಪಕ್ಷದ ವಿರುದ್ಧವೇ ಈಶ್ವರಪ್ಪ ಅಸಮಾಧಾನ
ಪಕ್ಷ ತನಗೆ ವಹಿಸಿರುವ ಜವಾಬ್ದಾರಿಗೆ ಈಶ್ವರಪ್ಪ ಅವರು ವರಿಷ್ಠರಿಗೆ ಧನ್ಯವಾದ ತಿಳಿಸಿದ್ದಾರೆ. ಒಬಿಸಿ ಮೋರ್ಚಾದ ನೇತೃತ್ವ ವಹಿಸುವ ಗುರುತರ ಜವಾಬ್ದಾರಿಯನ್ನು ತಮಗೆ ವಹಿಸಿದ ಪಕ್ಷದ ವರಿಷ್ಠರಿಗೆ ಆಭಾರಿಯಾಗಿರುತ್ತೇನೆ. ಪಕ್ಷ ಸಂಘಟನೆ, ಬಲವರ್ಧನೆಯೇ ತಮ್ಮ ಪ್ರಮುಖ ಆದ್ಯತೆ ಎಂಬುದಾಗಿ ನಂಬಿದ್ದೇನೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.