ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವೆ: ಬಿ.ಎಸ್‌.ಯಡಿಯೂರಪ್ಪ

Published : Feb 24, 2023, 08:44 AM IST
ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವೆ: ಬಿ.ಎಸ್‌.ಯಡಿಯೂರಪ್ಪ

ಸಾರಾಂಶ

ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ. ಆದರೆ, ಇಡೀ ರಾಜ್ಯ ತಿರುಗಾಡಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಘೋಷಿಸಿದರು.

ಸಂಡೂರು (ಫೆ.24): ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ. ಆದರೆ, ಇಡೀ ರಾಜ್ಯ ತಿರುಗಾಡಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಘೋಷಿಸಿದರು. ನಗರದ ಎಸ್‌ಆರ್‌ಎಸ್‌ ಶಾಲಾ ಮೈದಾನದಲ್ಲಿ ನಡೆದ ಬಿಜೆಪಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಸೂರ್ಯ, ಚಂದ್ರರಷ್ಟೇ ಸತ್ಯ, ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ 140 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ನಾನು ಮತ್ತೊಮ್ಮೆ ಸಂಡೂರಿಗೆ ಬರುವೆ ಎಂದರು. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹತ್ತು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. 

ಬಿಜೆಪಿ ಅಧಿಕಾರಕ್ಕೆ ಬಂದರೆ, ಬಳ್ಳಾರಿ ಜಿಲ್ಲೆಯ ಚಿತ್ರಣ ಬದಲಾಗಿದೆ. ಈ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಮಾಡಲಾಗುವುದು ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ ಕಟೀಲ್‌, ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ಸಚಿವರಾದ ಬಿ. ಶ್ರೀರಾಮುಲು, ಆನಂದ ಸಿಂಗ್‌, ಶಶಿಕಲಾ ಜೊಲ್ಲೆ, ಶಾಸಕರಾದ ಎನ್‌.ವೈ. ಗೋಪಾಲಕೃಷ್ಣ, ಸೋಮಶೇಖರ ರೆಡ್ಡಿ, ವೈ.ಎಂ. ಸತೀಶ್‌, ಸಂಸದ ದೇವೇಂದ್ರಪ್ಪ, ಮುಖಂಡ ಕಾರ್ತಿಕೆಯ ಘೋರ್ಪಡೆ, ಜೆ. ಶಾಂತಾ, ಸುರೇಶಬಾಬು, ಸಿದ್ದೇಶ ಯಾದವ್‌, ನಂದೀಶ್‌, ಸಿದ್ದೇಶ, ಬಿಜೆಪಿ ಜಿಲ್ಲಾಧ್ಯಕ್ಷರಾದ ಮುರಾರಿಗೌಡ, ಚನ್ನಬಸವನಗೌಡ ಪಾಟೀಲ ಮತ್ತಿತರರಿದ್ದರು.

ಜನಾ​ರ್ದನ ರೆಡ್ಡಿ ಪಕ್ಷ​ವನ್ನು ನಾನು ನೋಡಿ​ಕೊ​ಳ್ಳು​ತ್ತೇ​ನೆ: ಕೇಂದ್ರ ಸಚಿವ ಅಮಿತ್‌ ಶಾ

ಬಾದಾಮಿ ಬಿಡುವುದು ನಂಬಿಕೆ ದ್ರೋಹ: ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮನ್ನು ಗೆಲ್ಲಿಸಿರುವ ಬಾದಾಮಿ ಕ್ಷೇತ್ರಕ್ಕೆ ಮತ್ತೆ ಹೋಗುವುದಿಲ್ಲ ಎನ್ನುವುದು ಸರಿಯಲ್ಲ. ಇದು ಕಷ್ಟಕಾಲದಲ್ಲಿ ಗೆಲ್ಲಿಸಿದ ಜನರಿಗೆ ಮಾಡುವ ನಂಬಿಕೆ ದ್ರೋಹ, ವಿಶ್ವಾಸ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಬಜೆಟ್‌ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಅವರಿಗೆ ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಕಿವಿ ಮಾತು ಹೇಳಿದರು. 

ಬಾದಾಮಿಯಲ್ಲಿ ನಿಮ್ಮನ್ನು ಗೆಲ್ಲಿಸಿದ ಜನರ ಪರವಾಗಿ ಐದು ವರ್ಷ ಕೆಲಸ ಮಾಡಿದ್ದೀರಿ. ಇದೀಗ ಕ್ಷೇತ್ರ ತೊರೆಯುವ ಮಾತನ್ನಾಡುತ್ತಿದ್ದೀರಿ. ಇದು ಕ್ಷೇತ್ರದಲ್ಲಿ ನಿಮಗೆ ಗೆಲ್ಲುವ ವಿಶ್ವಾಸವಿಲ್ಲ ಎಂಬುದನ್ನು ತೋರಿಸುತ್ತದೆ. ತವರು ಜಿಲ್ಲೆಯಲ್ಲಿ ಸೋಲುತ್ತಿರುವಾಗ ನಿಮ್ಮನ್ನು ಗೆಲ್ಲಿಸಿದ ಆ ಭಾಗದ ಜನರಿಗೆ ನಂಬಿಕೆ ದ್ರೋಹ, ವಿಶ್ವಾಸದ್ರೋಹ ಮಾಡುತ್ತಿದ್ದೀರಿ ಎಂದು ಹೇಳಿದರು. ಗೆದ್ದು ಬಂದ ಕ್ಷೇತ್ರಕ್ಕೆ ವಾಪಸು ಹೋಗುವುದಿಲ್ಲ ಎಂದರೆ ಏನರ್ಥ? ಏನೇ ಆಗಲಿ ಅದೇ ಕ್ಷೇತ್ರದಲ್ಲಿ ನಿಂತು ಜನರ ಋುಣ ತೀರಿಸುವ ಪ್ರಯತ್ನ ಮಾಡಬೇಕು. ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾಯಿಸಲು ಹೋಗಬಾರದು. ಬಾದಾಮಿ ಜನರ ಋುಣ ಅವರ ಮೇಲಿದೆ ಎಂದು ಹೇಳಿದರು.

ಚುನಾ​ವ​ಣೆ ಗೆಲ್ಲಲು ಅಮಿತ್‌ ಶಾ ಪಂಚ​ಸೂ​ತ್ರ: ಮೋದಿ, ಪಕ್ಷದ ಹೆಸ​ರಲ್ಲಿ ಚುನಾವಣಾ ಪ್ರಚಾರ ನಡೆ​ಸಿ

ಈ ವೇಳೆ ಮಧ್ಯಪ್ರವೇಶಿಸಿದ ಕಾಂಗ್ರೆಸ್‌ನ ಯು.ಟಿ. ಖಾದರ್‌, ರಾಜ್ಯದ 224 ಕ್ಷೇತ್ರಗಳಲ್ಲಿ ಎಲ್ಲೇ ನಿಂತರೂ ಸಿದ್ದರಾಮಯ್ಯ ಗೆಲ್ಲುತ್ತಾರೆ. ಬಾದಾಮಿ ಬೆಂಗಳೂರಿನಿಂದ ದೂರ ಇರುವುದರಿಂದ ನಿರಂತರವಾಗಿ ಓಡಾಡಿ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕಾಗಿ ಅವರು ಕ್ಷೇತ್ರ ಬದಲಿಸುತ್ತಿದ್ದಾರೆ. ಯಾವ ಕ್ಷೇತ್ರದಿಂದ ಸ್ಪರ್ಧಿಸಿದರೂ ಬಾದಾಮಿಯನ್ನು ತನ್ನದೇ ಕ್ಷೇತ್ರ ಎಂದು ತಿಳಿದು ಅಭಿವೃದ್ಧಿ ಮಾಡುತ್ತೇನೆ ಎಂದಿದ್ದಾರೆ ಎಂದು ಸಮರ್ಥಿಸಿಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ