
ಬೆಂಗಳೂರು (ಫೆ.02): ಕೇಂದ್ರದ ಮಹತ್ವಾಕಾಂಕ್ಷೆ ಕಾರ್ಯಕ್ರಮವಾದ ‘ಒಂದು ದೇಶ ಒಂದು ಚುನಾವಣೆ’ ಸಂಬಂಧ ಚರ್ಚೆ ನಡೆಸುವ ವಿಚಾರವನ್ನು ಮುಂದಿನ ಅಧಿವೇಶನಕ್ಕೆ ಮುಂದೂಡಿ ಕಾರ್ಯ ಕಲಾಪ ಸಲಹಾ ಸಭೆ ನಿರ್ಧಾರ ಕೈಗೊಂಡಿದೆ.
ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಈ ಬಾರಿಯ ಅಧಿವೇಶನದ ಬದಲು ಮುಂದಿನ ಬಜೆಟ್ ಅಧಿವೇಶನದಲ್ಲಿ ‘ಒಂದು ದೇಶ ಒಂದು ಚುನಾವಣೆ’ ಕುರಿತು ಚರ್ಚೆ ನಡೆಸಲು ತೀರ್ಮಾನಿಸಲಾಗಿದೆ.
ಲೋಕಸಭಾ ಚುನಾವಣೆ : ಬೆಳಗಾವಿ ಸ್ಪರ್ಧೆಗೆ ಈ ಮುಖಂಡಗೆ ಕರೆ..?
ಮಾಚ್‌ರ್ ತಿಂಗಳಲ್ಲಿ ಬಜೆಟ್ ಅಧಿವೇಶನ ನಡೆಯಲಿದೆ. ಬಜೆಟ್ ಮಂಡನೆಗೂ ಮುನ್ನ ಎರಡು ದಿನಗಳ ಕಾಲ ಈ ವಿಚಾರಕ್ಕಾಗಿ ಮೀಸಲಿಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರಸಕ್ತ ಅಧಿವೇಶನವನ್ನು ಶುಕ್ರವಾರದವರೆಗೆ ನಡೆಸಲು ತೀರ್ಮಾನಿಸಲಾಗಿದೆ.
ರಾಜ್ಯಪಾಲರ ಭಾಷಣದ ಮೇಲಿನ ವಂದನಾರ್ಪಣ ಚರ್ಚೆಯನ್ನು ಬುಧವಾರದವರೆಗೆ ನಡೆಸಲಾಗುವುದು. ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತರ ನೀಡಲಿದ್ದಾರೆ. ಮಂಗಳವಾರದಿಂದ ಸದನವನ್ನು ಬೆಳಗ್ಗೆ 10.30ಕ್ಕೆ ಆರಂಭಿಸುವ ಬಗ್ಗೆ ನಿರ್ಧರಿಸಲಾಯಿತು. ಇದರಿಂದ ರಾಜ್ಯಪಾಲರ ಭಾಷಣದ ಮೇಲೆ ಹೆಚ್ಚಿನ ಜನ ಚರ್ಚೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿದೆ. ವಿಧೇಯಕಗಳನ್ನು ಎಲ್ಲವೂ ಒಟ್ಟಿಗೆ ತೆಗೆದುಕೊಳ್ಳುವ ಬದಲು ಪ್ರತಿದಿನ ಮೂರ್ನಾಲ್ಕು ಮಾತ್ರ ತೆಗೆದುಕೊಳ್ಳುವ ಕುರಿತು ಸಭೆಯಲ್ಲಿ ಚರ್ಚೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.