ರಾಜ್ಯದಲ್ಲಿ ಆನ್‌ಲೈನ್‌ ಗೇಮ್‌, ಬೆಟ್ಟಿಂಗ್‌ ನಿಷೇಧ ಚಿಂತನೆ: ಸಿಎಂ ಸಿದ್ದರಾಮಯ್ಯ

By Kannadaprabha NewsFirst Published Aug 2, 2023, 5:23 AM IST
Highlights

ರಾಜ್ಯದಲ್ಲಿ ಆನ್‌ಲೈನ್‌ ಗೇಮ್‌, ಆನ್‌ಲೈನ್‌ ಬೆಟ್ಟಿಂಗ್‌ ನಿಷೇಧಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಜಿ.ಪಂ.ನಲ್ಲಿ ಮಂಗಳವಾರ ದ.ಕ. ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಂಗಳೂರು (ಆ.02): ರಾಜ್ಯದಲ್ಲಿ ಆನ್‌ಲೈನ್‌ ಗೇಮ್‌, ಆನ್‌ಲೈನ್‌ ಬೆಟ್ಟಿಂಗ್‌ ನಿಷೇಧಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಜಿ.ಪಂ.ನಲ್ಲಿ ಮಂಗಳವಾರ ದ.ಕ. ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆನ್‌ಲೈನ್‌ ಗೇಮ್‌, ಬೆಟ್ಟಿಂಗ್‌ನಿಂದಾಗಿ ಸಮಾಜ ಹಾಳಾಗುತ್ತಿದ್ದು, ಇವೆಲ್ಲವುಗಳನ್ನು ಬ್ಯಾನ್‌ ಮಾಡುವ ಚಿಂತನೆ ಇದೆ ಎಂದ ಅವರು, ಸೈಬರ್‌ ಕ್ರೈಮ್‌ ಮೇಲೆ ಪೊಲೀಸ್‌ ಇಲಾಖೆ ತೀವ್ರ ನಿಗಾ ಇಡಬೇಕು ಎಂದು ನಿರ್ದೇಶ ನೀಡಿದರು.

ಡ್ರಗ್ಸ್‌ ಪೆಡ್ಲರ್‌ಗಳ ಗಡೀಪಾರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದಕ ವಸ್ತು ಹಾವಳಿ ವಿಪರೀತ ಹೆಚ್ಚಿದೆ. ಡ್ರಗ್‌್ಸ ಪೆಡ್ಲರ್‌ಗಳು ಯಾರೇ ಆಗಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಗೂಂಡಾ ಕಾಯ್ದೆ ದಾಖಲಿಸಿ, ಕೆಲವರನ್ನು ಗಡೀಪಾರು ಮಾಡಬೇಕು ಎಂದು ಪೊಲೀಸ್‌ ಇಲಾಖೆಗೆ ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ತಾಕೀತು ಮಾಡಿದರು.

ಅ.15ಕ್ಕೆ ಮೈಸೂರು ದಸರಾ; ಏರ್ ಶೋ ನಡೆಸಲು ಚಿಂತನೆ: ಸಿಎಂ ಸಿದ್ದು

ಡ್ರಗ್ಸ್‌ ಹಾವಳಿ ಮಟ್ಟ ಹಾಕದಿದ್ದರೆ ಸಮಾಜ ಹಾಳಾಗುತ್ತದೆ. ಇದರ ವಿರುದ್ಧ ಕಟ್ಟುನಿಟ್ಟು ಕ್ರಮ ಜಾರಿಗೊಳಿಸುವ ಜತೆಗೆ ಸಾರ್ವಜನಿಕ ಜಾಗದಲ್ಲಿ ಸಾರ್ವಜನಿಕರು ಡ್ರಗ್‌್ಸ ಕುರಿತು ಮಾಹಿತಿ ನೀಡಲು ಅನುಕೂಲವಾಗುವಂತೆ ಸಲಹಾ ಬಾಕ್ಸ್‌ ಇಡುವಂತೆಯೂ ಮುಖ್ಯಮಂತ್ರಿ ಸೂಚಿಸಿದರು. ನೈತಿಕ ಪೊಲೀಸ್‌ಗಿರಿ ಯಾರೇ ಮಾಡಲಿ, ಗಂಭೀರ ಕ್ರಮ ಕೈಗೊಳ್ಳಬೇಕು. ಯಾರೂ ಕಾನೂನು ಕೈಗೆತ್ತಿಕೊಳ್ಳದಂತೆ ನೋಡಿಕೊಳ್ಳುವ ಜವಾಬ್ದಾರಿ ಪೊಲೀಸ್‌ ಇಲಾಖೆ ಮೇಲಿದೆ. ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿದ್ದರಾಮಯ್ಯ ಇದೇ ವೇಳೆ ನಿರ್ದೇಶನ ನೀಡಿದರು.

ಉಡುಪಿ ವಿಡಿಯೋಗೆ ಎಸ್‌ಐಟಿ ತನಿಖೆ ಇಲ್ಲ: ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಬಗ್ಗೆ ಪೊಲೀಸರು ಸ್ವಯಂ ಪ್ರೇರಣೆಯಿಂದ ಎಫ್‌ಐಆರ್‌ ದಾಖಲಿಸಿದ್ದಾರೆ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆಯೂ ನಡೆಯುತ್ತಿದೆ. ಹೀಗಾಗಿ ಎಸ್‌ಐಟಿ ತನಿಖೆ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟಿರಲಿಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗವೇ ಹೇಳಿದೆ ಎಂದೂ ತಿಳಿಸಿದ್ದಾರೆ.

ಉಡುಪಿಯ ಹಾಸ್ಟೆಲ್‌ಗೆ ದಿಢೀರ್‌ ಭೇಟಿ ನೀಡಿದ ಸಿಎಂ: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ನಗರದ ಬನ್ನಂಜೆಯಲ್ಲಿರುವ ದೇವರಾಜ ಅರಸು ಬಾಲಕಿಯರ ಹಾಸ್ಟೆಲ್‌ಗೆ ದಿಢೀರನೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು. ಈ ಸಂದರ್ಭ ಹಾಸ್ಟೆಲ್‌ನ ವಿದ್ಯಾರ್ಥಿಗಳು, ಆಡಳಿತ ಸಿಬ್ಬಂದಿ ಜೊತೆ ಚರ್ಚೆ ನಡೆಸಿದರು. ಮಕ್ಕಳು ಮೊಟ್ಟೆ, ಚಿಕನ್‌, ಮೀನು ಎಲ್ಲ ನೀಡುತ್ತಾರೆ, ಎಲ್ಲವೂ ಸರಿಯಾಗಿದೆ, ಯಾವುದೇ ತೊಂದರೆ ಇಲ್ಲ ಎಂದಾಗ ಸಂತಸ ವ್ಯಕ್ತಪಡಿಸಿದರು.

ಸಿದ್ದುಗೆ ಪತ್ರ ಬರೆದಿದ್ದಕ್ಕೆ ಕ್ಷಮೆ ಕೇಳಿಲ್ಲ: ಶಾಸಕ ಬಿ.ಆರ್‌.ಪಾಟೀಲ್‌

ಚೆನ್ನಾಗಿ ಓದಬೇಕು, ಪದವಿ ಮುಗಿದ ಮೇಲೆ ಕೆಲಸ ಸಿಗುವವರೆಗೂ ನಿಮಗೆ ‘ಯುವನಿಧಿ’ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರು. ನೀಡುತ್ತೇವೆ. ಕೌಶಲ್ಯ ತರಬೇತಿಯನ್ನೂ ನೀಡುತ್ತೇವೆ. ಮನೆಯಲ್ಲಿ ನಿಮ್ಮ ತಾಯಂದಿರಿಗೆ ‘ಗೃಹಲಕ್ಷ್ಮೀ’ ಯೋಜನೆಯ ಪ್ರಯೋಜನ ಪಡೆಯುವಂತೆ ಹೇಳಿ. ಆದರೆ, ನಿಮ್ಮ ತಾಯಿಯೇ ಮನೆಯ ಯಜಮಾನಿಯಾಗಿರಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿನಿಯರು ತಮಗೆ ಲ್ಯಾಪ್‌ಟಾಪ್‌ ಕೊಡಿ ಎಂದಾಗ, ಅವಕಾಶವಿದ್ದರೆ ಪರಿಶೀಲನೆ ಮಾಡುವಂತೆ ಉಸ್ತುವಾರಿ ಸಚಿವೆ ಲಕ್ಷ್ಮೇ ಹೆಬ್ಬಾಳ್ಕರ್‌ಗೆ ಸೂಚಿಸಿದರು. ನಂತರ, ವಿದ್ಯಾರ್ಥಿನಿಯರೊಂದಿಗೆ ಫೋಟೋ ಕೂಡ ತೆಗೆಸಿಕೊಂಡರು.

click me!