ಮಹಾರಾಷ್ಟ್ರ ಮತ್ತು ಪಂಜಾಬ್‌ನಲ್ಲಿ ಕಾಂಗ್ರೆಸ್ ಪಕ್ಷ ದಲಿತ ನಾಯಕರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತು. ಕರ್ನಾಟಕದಲ್ಲಿ ದಲಿತರೊಬ್ಬರಿಗೆ ಮುಂದೊಂದು ದಿನ ಮುಖ್ಯಮಂತ್ರಿ ಅವಕಾಶ ಕಲ್ಪಿಸುವುದು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಸಂಸದ ಡಿ.ಕೆ.ಸುರೇಶ್ ಪ್ರತಿಪಾದಿಸಿದರು.
ರಾಮನಗರ (ಡಿ.04): ಮಹಾರಾಷ್ಟ್ರ ಮತ್ತು ಪಂಜಾಬ್‌ನಲ್ಲಿ ಕಾಂಗ್ರೆಸ್ ಪಕ್ಷ ದಲಿತ ನಾಯಕರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತು. ಕರ್ನಾಟಕದಲ್ಲಿ ದಲಿತರೊಬ್ಬರಿಗೆ ಮುಂದೊಂದು ದಿನ ಮುಖ್ಯಮಂತ್ರಿ ಅವಕಾಶ ಕಲ್ಪಿಸುವುದು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಸಂಸದ ಡಿ.ಕೆ.ಸುರೇಶ್ ಪ್ರತಿಪಾದಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟಜಾತಿ ವಿಭಾಗದ ಜಿಲ್ಲಾ ಪದಾಧಿಕಾರಿಗಳು ಮತ್ತು ಬ್ಲಾಕ್ ಅಧ್ಯಕ್ಷರಿಗೆ ಪದವಿ ಪ್ರಮಾಣ ಪತ್ರ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮಹಾರಾಷ್ಟ್ರ ಮತ್ತು ಪಂಜಾಬ್‌ನಲ್ಲಿ ದಲಿತರನ್ನು ಮುಖ್ಯಮಂತ್ರಿಯನ್ನಾಗಿ ಕಾಂಗ್ರೆಸ್ ಮಾಡಿತು.
ಆನಂತರ ಆ ರಾಜ್ಯಗಳಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿಲ್ಲ. ಕಾಂಗ್ರೆಸ್ ಗೆ ಅಧಿಕಾರ ಮುಖ್ಯವಲ್ಲ, ಶೋಷಿತ ವರ್ಗಗಳಿಗೆ ರಾಜಕೀಯ ಅವಕಾಶ ಕಲ್ಪಿಸಿಕೊಡುವುದೇ ಮುಖ್ಯ. ರಾಜ್ಯದಲ್ಲಿಯೂ ಮುಂದೊಂದು ದಿನ ದಲಿತರೊಬ್ಬರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಕಲ್ಪಿಸಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂದರು. ಕಾಂಗ್ರೆಸ್ ಪಕ್ಷ ತನ್ನ ಆಡಳಿತದ ಅವಧಿಯಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳಿಸುವುದರ ಜತೆಗೆ ಜಾತ್ಯತೀತ ಕಾರ್ಯಕ್ರಮಗಳನ್ನು ನೀಡಿತು. ಅಧಿಕಾರ ವಿಕೇಂದ್ರೀಕರಣ ಮಾಡಿತು. ಪ್ರತಿಯೊಂದು ನಿರ್ಣಯಗಳು, ನಿಲುವುಗಳು ಶೋಷಿತರು ಮತ್ತು ಬಡವರ ಪರವಾಗಿದ್ದವು.
ನಾವು ಜಾತಿ, ಧರ್ಮಕ್ಕೆ ಸೀಮಿತವಲ್ಲ: ನಿಖಿಲ್ ಕುಮಾರಸ್ವಾಮಿ
ಆದರೆ, ಇಂದು ಬಿಜೆಪಿಯೊಂದಿಗೆ ಕೈ ಜೋಡಿಸಿರುವ ಬಂಡವಾಳ ಶಾಹಿಗಳು ಬಂಡವಾಳ ಹೂಡಿ ಕಾಂಗ್ರೆಸ್ ಅನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದೆ. ಭಾವಾನಾತ್ಮಕವಾಗಿ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಕಿಡಿಕಾರಿದರು. ಕಾಂಗ್ರೆಸ್ ನ ಉಳಿವಿಗಾಗಿ ಬೆಂಬಲ ಬೇಕಿಲ್ಲ. ಪ್ರಜಾಪ್ರಭುತ್ವ ಉಳಿಸಲು ಹೋರಾಟ ಮಾಡಬೇಕಿದೆ. ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಪ್ರಜಾಪ್ರಭುತ್ವದ ರಕ್ಷಣೆ, ಉತ್ತಮ ಆಡಳಿತ , ಬಲಿಷ್ಠರ ಕೈಗೆ ಎಲ್ಲಾ ವ್ಯವಸ್ಥೆಗಳು ಸಿಗದಿರಲು, ಜಾತ್ಯಾತೀತ ತತ್ವಗಳ ಪ್ರತಿಪಾದನೆ ಹಾಗೂ ಸಮಾಜದಲ್ಲಿ ಸಮಾನತೆ ಕಾಣಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಂತೆ ಕರೆ ನೀಡಿದರು.
ಪ್ರಬಲರನ್ನು ಹತ್ತಿಕ್ಕುವ ಕೆಲಸವನ್ನು ಬಿಜೆಪಿ ಪಕ್ಷ ಮಾಡುತ್ತಿದೆ. ಉತ್ತರ ಪ್ರದೇಶದಲ್ಲಿ ಮಾಜಿ ಸಿಎಂ ಮಾಯಾವತಿ ಅವರನ್ನು ಇಡಿ, ಐಟಿಯವರು ಬಿಡಲಿಲ್ಲ. ಆದರೆ, ಇಡಿ, ಐಟಿ, ಸಿಬಿಐ ಪ್ರಕರಣಗಳಿಗೆಲ್ಲ ಡಿಕೆ ಸಹೋದರರ ಜಗ್ಗುವುದಿಲ್ಲ ಎಂದು ಸುರೇಶ್ ಹೇಳಿದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಶಕ್ತಿಯುತವಾಗಿದೆ. ಆದರೂ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಕನಕಪುರದಲ್ಲಿ ಮಾತ್ರ ಕಾಂಗ್ರೆಸ್ ಶಾಸಕರಿದ್ದಾರೆ. ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳು, ಸಂಕುಚಿತ ಮನೋಭಾವಗಳ ಕಾರಣ ಉಳಿದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಸೋಲಿಗೆ ಕಾರಣವಾಗಿದೆ. ಕಾರ್ಯಕರ್ತರು ಬಿಜೆಪಿ ದುರಾಡಳಿತ ಹಾಗೂ ಕಾಂಗ್ರೆಸ್ ಕೊಡುಗೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು.
ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಮಾತನಾಡಿ, ಪ.ಜಾತಿ ಮತ್ತು ಪ.ಪಂಗಡದವರು ದೂರ ಸರಿಯುತ್ತಿರುವ ಕಾರಣದಿಂದಲೇ ಕಾಂಗ್ರೆಸ್ ಗೆ ಹಿನ್ನಡೆಗೆ ಕಾರಣವಾಗುತ್ತಿದೆ. ಈ ಹಿಂದೆ ಆ ಸಮುದಾಯದ ಜನರು ಪಕ್ಷದ ಮೇಲೆ ಇಟ್ಟಿದ್ದ ಪ್ರೀತಿ ಭರವಸೆ ಈಗ ಕಾಣುತ್ತಿಲ್ಲ. ಅವರನ್ನು ಮತ್ತೆ ಕಾಂಗ್ರೆಸ್ ನತ್ತ ಸೆಳೆಯುವ ಕೆಲಸ ಆಗಬೇಕಿದೆ ಎಂದರು. ಕಾಂಗ್ರೆಸ್ ಅಧಿಕಾರದಲ್ಲಿ ದೀನ ದಲಿತರು, ಶೋಷಿತರು ಸೇರಿದಂತೆ ಎಲ್ಲ ವರ್ಗದ ಜನರಿಗೂ ಅನುಕೂಲ ಮಾಡಿಕೊಟ್ಟಿತು. ಕಾಂಗ್ರೆಸ್ ಸರ್ಕಾರ ನೀಡಿದ ಕಾರ್ಯಕ್ರಮಗಳ ಫಲಾನುಭವಿಗಳಾದವರು ಇಂದು ಬೇರೆ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ.
Ramanagara: ಪಂಚರತ್ನ ಯೋಜನೆ ಅನುಷ್ಠಾನದ ಗುರಿ: ನಿಖಿಲ್ ಕುಮಾರಸ್ವಾಮಿ
ಅದರಲ್ಲೂ ಯುವಕರು ಹೆಚ್ಚಿನ ಪ್ರಮಾಣದಲ್ಲಿ ಕೋಮುವಾದಿ ಬಿಜೆಪಿ ಪಕ್ಷದತ್ತ ವಾಲುತ್ತಿರುವುದು ಆತಂಕಕಾರಿ ಸಂಗತಿ. ಆ ಯುವಕರಿಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಬಗ್ಗೆ ಮನವರಿಕೆ ಮಾಡಿಕೊಡಬೇಕಿದೆ ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯರಾದ ಸಿ.ಎಂ.ಲಿಂಗಪ್ಪ, ಎಸ್.ರವಿ, ಮಾಜಿ ಶಾಸಕ ಕೆ.ರಾಜು, ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ, ಜಿಪಂ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೀಪಾ ಮುನಿರಾಜು, ಮುಖಂಡರಾದ ಪ್ರಸನ್ನ ಪಿ.ಗೌಡ, ಕೆ.ಶೇಷಾದ್ರಿ, ಗಾಣಕಲ್ ನಟರಾಜ್, ಎಲ್.ಎನ್.ಸ್ವಾಮಿ, ಬಿಡದಿ ಪುರಸಭೆ ಸದಸ್ಯ ರಾಮಚಂದ್ರಯ್ಯ ಮತ್ತಿತರರು ಉಪಸ್ಥಿತರಿದ್ದರು.