
ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸುವ ಶಕ್ತಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗಿಂತ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗಿದೆ.
ಮಲ್ಲಿಕಾರ್ಜುನ ಖರ್ಗೆಗೆ ಈ ದೇಶದ ಪ್ರಧಾನಿಯಾಗುವ ಎಲ್ಲ ಅರ್ಹತೆ ಇದೆ ಎಂದು ದಾವಣಗೆರೆ ಛಲವಾದಿ ಮಹಾಸಭಾ ಕಾರ್ಯಕ್ರಮದಲ್ಲಿ ಶಾಮನೂರು ಶಿವಶಂಕರಪ್ಪ ಹೇಳಿದರು.
ಪ್ರಧಾನಿ ಮೋದಿಯವರನ್ನು ಎದುರಿಸುವ ತಾಕತ್ತು ಖರ್ಗೆ ಅವರಿಗಿದೆ. ರಾಹುಲ್ ಗಾಂಧಿಯಿಂದ ಮೋದಿಯನ್ನು ಎದುರಿಸಲು ಸಾಧ್ಯವಾಗುವುದಿಲ್ಲ. ಅದು ಕೇವಲ ಮಲ್ಲಿಕಾರ್ಜುನ ಖರ್ಗೆಯವರಿಂದ ಮಾತ್ರ ಸಾಧ್ಯ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಮೊದಲ ದಲಿತ ಮುಖಂಡ ದಿ ಕೆ.ಎಚ್.ರಂಗನಾಥ್, ದಿ.ಬಸವಲಿಂಗಪ್ಪ ಮುಖ್ಯಮಂತ್ರಿ ಆಗುವ ಅವಕಾಶ ಇತ್ತು. ಆದರೆ ಆಗಲಿಲ್ಲ ಎಂದರು. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಮಾತ್ರವಲ್ಲ, ಈ ದೇಶದ ಪ್ರಧಾನಿಯಾಗುವ ಅರ್ಹತೆ ಇದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.