'ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಆಪರೇಷನ್ ಕಮಲ ಪ್ರಯೋಗ'

By Suvarna News  |  First Published Nov 8, 2020, 6:40 PM IST

ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಗಂಭೀರ ಆರೋಪ ಮಾಡಿದ್ದಾರೆ.


ಶಿವಮೊಗ್ಗ, (ನ.08): ರಾಜ್ಯದಲ್ಲಿ ನಡೆಸಿದ ಆಪರೇಷನ್ ಕಮಲದ ಪ್ರಯೋಗವನ್ನು ಈಗ ಸ್ಥಳೀಯ ಸಂಸ್ಥೆಗಳಲ್ಲೂ ಅನುಸರಿಸುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿ ಭಾನುವಾರ ಅವರು ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪರೇಷನ್ ಕಮಲದ ಜನಕ. ಅವರ ತವರು ಕ್ಷೇತ್ರ ಶಿಕಾರಿಪುರ ಪುರಸಭೆಯನ್ನೂ ಬಿಟ್ಟಿಲ್ಲ. ಯಡಿಯೂರಪ್ಪ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tap to resize

Latest Videos

'ಚುನಾವಣೆ ಸಮೀಕ್ಷೆಗಳು ಉಲ್ಟಾ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ'

ರಾಜ್ಯ ಬಿಜೆಪಿಯಲ್ಲಿ ಸದ್ಯ ಮೂರು ಬಣಗಳಿವೆ. ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲೂ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ. ಈ ಕುರಿತು ತಮಗೆ ಖಚಿತ ಮಾಹಿತಿ ದೊರೆತಿದೆ ಮತ್ತೊಮ್ಮೆ ಹೇಳಿದರು.

ಶಿರಾ ಮತ್ತು ಆರ್‌ಆರ್ ನಗರ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಚುನಾವಣಾ ಸಮೀಕ್ಷೆಗಳು ಉಲ್ಟಾ ಆಗಲಿವೆ. ನಾಲ್ಕು ದಿನಗಳು ಪ್ರಚಾರದಲ್ಲಿ ಭಾಗವಿಸಿದ್ದೆ.ಮತದಾರರು ಕಾಂಗ್ರೆಸ್ ಪರ ಇದ್ದಾರೆ ಎನ್ನುವುದು ಖಚಿತವಾಗಿದೆ ಎಂದರು.

ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನದ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೈವಾಡವಿದೆ. ಕೇಂದ್ರ ಸರ್ಕಾರ ಸಿಬಿಐ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

click me!