‘ಆಪರೇಷನ್‌ ಸಿಂದೂರ’ ಭಯೋತ್ಪಾದನೆ ಬೆಂಬಲಿಸುವ ದೇಶಗಳಿಗೆ ಪಾಠ: ಖಾದರ್‌

Published : May 08, 2025, 05:38 AM IST
‘ಆಪರೇಷನ್‌ ಸಿಂದೂರ’ ಭಯೋತ್ಪಾದನೆ ಬೆಂಬಲಿಸುವ ದೇಶಗಳಿಗೆ ಪಾಠ: ಖಾದರ್‌

ಸಾರಾಂಶ

ಪಹಲ್ಗಾಂ ಭಯೋತ್ಪಾದನಾ ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಹೆಮ್ಮೆ ತರುವಂಥದ್ದು. ಇದು ಭಯೋತ್ಪಾದನೆ ಬೆಂಬಲಿಸುವ ದೇಶಗಳಿಗೆ ಎಚ್ಚರಿಕೆ ಗಂಟೆ ಎಂದು ಸ್ಪೀಕರ್ ಯು.ಟಿ ಖಾದರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.   

ಬೆಂಗಳೂರು (ಮೇ.08): ಪಹಲ್ಗಾಂ ಭಯೋತ್ಪಾದನಾ ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಹೆಮ್ಮೆ ತರುವಂಥದ್ದು. ಇದು ಭಯೋತ್ಪಾದನೆ ಬೆಂಬಲಿಸುವ ದೇಶಗಳಿಗೆ ಎಚ್ಚರಿಕೆ ಗಂಟೆ ಎಂದು ಸ್ಪೀಕರ್ ಯು.ಟಿ ಖಾದರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಭಯೋತ್ಪಾದನೆ ದೇಶಕ್ಕೆ ಮಾರಕ. 

ಭಯೋತ್ಪಾದನೆಯನ್ನು ಬುಡ ಸಮೇತ ಕಿತ್ತು ಹಾಕಬೇಕು. ಅದಕ್ಕೆ ಬೆಂಬಲ ಕೊಡುವವರಿಗೂ ತಕ್ಕ ಪಾಠಕಲಿಸಬೇಕಾಗಿದೆ. ಈ ನಿಟ್ಟಿನಲ್ಲಿ ಭಾರತೀಯ ಸೇನೆಯ ಕಾರ್ಯಾಚರಣೆ ನಡೆಸಿದ್ದು ಸೂಕ್ತವಾಗಿದೆ. ಭಯೋತ್ಪಾದನೆ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಪ್ರತಿಪಕ್ಷ ಒಗ್ಗಟ್ಟು ಪ್ರದರ್ಶಿಸಿವೆ. ಇಡೀ ದೇಶವೇ ಒಗ್ಗಟ್ಟಿನ ಮೂಲಕ ಭಯೋತ್ಪಾದನೆ ವಿರುದ್ಧ ಸಂದೇಶ ಕೊಟ್ಟಿದೆ. ಜೊತೆಗೆ ನಮ್ಮ ಸೈನಿಕರ ಸುರಕ್ಷತೆಗಾಗಿ ನಾವು ಪಾರ್ಥನೆಯನ್ನೂ ಮಾಡಬೇಕಿದೆ ಎಂದರು.

ಸ್ಪಷ್ಟೀಕರಣ: ಹಿಂದೂ ಕಾರ್ಯಕರ್ತ ಸುಹಾಸ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆ ಮೇಲಿನ ಟೀಕೆಗಳಿಗೆ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್‌ ಸ್ಪಷ್ಟೀಕರಣ ನೀಡಿದ್ದಾರೆ. ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವು ಕೊಲೆಯ ಹಿಂದೆ ಮತೀಯ ಕಾರಣವಿದೆ ಎಂಬ ವದಂತಿಗಳಿಂದ ಸ್ಥಳೀಯ ಮಟ್ಟದಲ್ಲಿ ಉದ್ವಿಗ್ನ ಪರಿಸ್ಥಿತಿ. ಆಗ ನಾನು ಮಾಧ್ಯಮದ ಪ್ರಶ್ನೆಗೆ ಉತ್ತರಿಸುವ ಸಂದರ್ಭದಲ್ಲಿ, ಈ ಘಟನೆ ರೌಡಿಗಳ ನಡುವಿನ ಗ್ಯಾಂಗ್ ವಾರ್ ಆಗಿರಬಹುದೆಂಬ ಶಂಕೆಯನ್ನು ವ್ಯಕ್ತಪಡಿಸಿದ್ದೇನೆ. ಜತೆಗೆ, ಆರೋಪಿಗಳ ಬಂಧನದ ನಂತರವೇ ಈ ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ಬೆಳಕಿಗೆ ಬರುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದೆ.

ರಾಜಧಾನಿಯಲ್ಲಿ ಯುದ್ಧ ರಕ್ಷಣೆ ತಾಲೀಮು: ‘ಆಪರೇಷನ್‌ ಅಭ್ಯಾಸ್‌’ ಮಾಕ್‌ ಡ್ರಿಲ್‌

ಘಟನೆ ನಡೆದ ಕೂಡಲೆ ಅದು ‘ಫಾಝಿಲ್ ಹತ್ಯೆಗೆ ಪ್ರತೀಕಾರ’ ಎಂಬ ಸುದ್ದಿ ಹಬ್ಬುತ್ತಿದ್ದಂತೆ, ಫಾಝಿಲ್ ತಂದೆ ಮತ್ತು ಸಹೋದರರು ನನಗೆ ಕರೆ ಮಾಡಿ, ಈ ಘಟನೆಯಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ ಎಂದು ಹೇಳಿಕೊಂಡಿದ್ದನ್ನು ನಾನು ಮಾಧ್ಯಮದೊಂದಿಗೆ ಉಲ್ಲೇಖ ಮಾಡಿದ್ದೆನೇ ಹೊರತು, ಈ ಕೃತ್ಯದಲ್ಲಿ ಅವರ ಪಾತ್ರವಿಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಜತೆಗೆ, ಅದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಹಂತಕರ ಬಂಧನಕ್ಕೆ ಪ್ರಯತ್ನಿಸುತ್ತಿದ್ದು, ಬಂಧನದ ನಂತರ ವಿಚಾರಣೆಯ ಮೂಲಕ ಈ ಕೃತ್ಯದಲ್ಲಿ ಯಾರೆಲ್ಲ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಶಾಮೀಲಾಗಿದ್ದಾರೆ ಎಂದು ತಿಳಿದುಬರಲಿದೆ ಹಾಗೂ ಅಪರಾಧಿಗಳಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ನೀಡಲಾಗುವುದು ಎಂಬುದನ್ನೂ ಸ್ಪಷ್ಟಪಡಿಸಿದ್ದೆ. ಅಂತಹ ಸಮಯದಲ್ಲಿ ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಲು ನಾನು ಪ್ರಯತ್ನಿಸಿದ್ದೇನೆಯೇ ಹೊರತು, ಯಾರ ಪರವಾಗಿಯೂ ಆಗಲಿ, ಯಾರ ವಿರೋಧವಾಗಿಯೂ ಆಗಲಿ ಮಾತನಾಡುವ ಉದ್ದೇಶ ನನ್ನದಾಗಿರಲಿಲ್ಲ. ಜಿಲ್ಲೆಯ ಶಾಂತಿ ಹಾಗೂ ಅಭಿವೃದ್ದಿ ಬಯಸುವ ಜನರಿಗೆ ಈ ಸ್ಪಷ್ಟೀಕರಣ ನೀಡುತ್ತಿರುವುದಾಗಿ ಯು.ಟಿ. ಖಾದರ್‌ ಫರೀದ್‌ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ
ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ