'ಆಪರೇಷನ್ ಸಿಂಧೂರ್': ಸಿಎಂ ಸಿದ್ದು ಸೇರಿದಂತೆ ರಾಜಕೀಯ ನಾಯಕರಿಂದ ಮೆಚ್ಚುಗೆ!

Published : May 07, 2025, 10:04 AM ISTUpdated : May 07, 2025, 12:48 PM IST
'ಆಪರೇಷನ್ ಸಿಂಧೂರ್': ಸಿಎಂ ಸಿದ್ದು ಸೇರಿದಂತೆ ರಾಜಕೀಯ ನಾಯಕರಿಂದ ಮೆಚ್ಚುಗೆ!

ಸಾರಾಂಶ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ನಾಯಕರು 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.  

ಬೆಂಗಳೂರು (ಮೇ.07): ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ 'ಆಪರೇಷನ್ ಸಿಂಧೂರ್' ಮೂಲಕ ತಿರುಗೇಟು ನೀಡಿದೆ. ಪಾಕಿಸ್ತಾನ ಹಾಗೂ ಪಿಒಕೆ ಒಳಗೆ ಇದ್ದ 9 ಉಗ್ರರ ನೆಲೆಗಳನ್ನು ಸೇನೆ ನಾಶಪಡಿಸಿದೆ. ಸೇನೆ, ನೌಕಾಪಡೆ ಮತ್ತು ವಾಯುಪಡೆ ಜಂಟಿಯಾಗಿ ಕಾರ್ಯಚರಣೆ ನಡೆಸಿದೆ. ಸೇನೆಯ ನಡೆಗೆ ಭಾರತೀಯರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ನಾಯಕರು 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್: ಆಪರೇಷನ್ ಸಿಂಧೂರ್ ಹಿಂದೆ ನಮ್ಮ ಸಶಸ್ತ್ರ ಪಡೆಗಳ ಅಸಾಧಾರಣ ಧೈರ್ಯಕ್ಕೆ ನಾನು ವಂದಿಸುತ್ತೇನೆ. ಅವರ ವೀರೋಚಿತ ಕ್ರಮವು ಭಾರತವು ಯಾವುದೇ ರೀತಿಯ ಭಯೋತ್ಪಾದನೆಯನ್ನು ಎಂದಿಗೂ ಸಹಿಸುವುದಿಲ್ಲ ಎಂದು ಪುನರುಚ್ಚರಿಸುತ್ತದೆ.  ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ದಾಳಿಯು ಕೇವಲ ಮುಗ್ಧ ಜೀವಗಳ ಮೇಲೆ ಅಲ್ಲ, ಇದು ಭಾರತದ ಕನಸುಗಳು ಮತ್ತು ಚೈತನ್ಯದ ಮೇಲಿನ ದಾಳಿಯಾಗಿದೆ. ಕರ್ನಾಟಕವು ನಮ್ಮ ಪಡೆಗಳೊಂದಿಗೆ ಅಚಲವಾದ ಒಗ್ಗಟ್ಟನ್ನು ವ್ಯಕ್ತಪಡಿಸುವಲ್ಲಿ ರಾಷ್ಟ್ರದೊಂದಿಗೆ ಸೇರುತ್ತದೆ. ನಿಮ್ಮ ಶೌರ್ಯ, ತ್ಯಾಗ ಮತ್ತು ನಮ್ಮ ಸಾರ್ವಭೌಮತ್ವವನ್ನು ರಕ್ಷಿಸಲು ನಾವು ಹೆಮ್ಮೆಪಡುತ್ತೇವೆ. ನಮ್ಮ ಭೂಮಿಯಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ. ಭಾರತವು ಶಕ್ತಿ ಮತ್ತು ಏಕತೆಯಿಂದ ಪ್ರತಿಕ್ರಿಯಿಸುತ್ತದೆ.
#ಆಪರೇಷನ್ ಸಿಂಧೂರ್
 


ಸುನೀಲ್ ಕುಮಾರ್ ಕಾರ್ಕಳ ಟ್ವೀಟ್: ಕಾಂಗ್ರೆಸ್ ಪ್ರಯೋಗಿಸಿದ ಮನುಕುಲದ ಅತ್ಯಂತ ಪ್ರಬಲ ಅಸ್ತ್ರ "ಶಾಂತಿ"ಯ ಫಲವಾಗಿಯೇ ಉಗ್ರರು ದೇಶದ ಒಳಗೆ ಬಂದಿದ್ದು.ಈ ಅಸ್ತ್ರದ ಫಲವಾಗಿಯೇ ಮುಂಬಯಿ ದಾಳಿ ನಡೆದಿದ್ದು,ಇದರ ಫಲವಾಗಿಯೇ ದೇಶದ ವಿರುದ್ಧ ಪಾಕಿಸ್ತಾನ ನಿರಂತರ ಉಗ್ರ ಚಟುವಟಿಕೆ ನಡಿಸಿದ್ದು ಈ ಅಸ್ತ್ರದ ಫಲವಾಗಿಯೇ ದೇಶದೊಳಗೆ ಪಾಕಿಸ್ತಾನ ಜಿಂದಾಬಾದ್ ಎನ್ನುವವರ ಸಂಖ್ಯೆ ಹೆಚ್ಚಿದ್ದು  ಉಗ್ರ ರಾಷ್ಟ್ರದ ವಿರುದ್ಧ ಭಾರತ ನಡೆಸಿದ ನಿರ್ದಿಷ್ಟ ದಾಳಿಯನ್ನು ಅಣುಕಿಸುವ ರೀತಿಯಲ್ಲಿ ರಾಜ್ಯ‌ ಕಾಂಗ್ರೆಸ್ ಘಟಕ ಮಾಡಿರುವ ಈ ಪೋಸ್ಟ್ ಕೀಳು ಅಭಿರುಚಿಯಿಂದ ಕೂಡಿದೆ. ಯುದ್ಧ ಬೇಡ ಎಂದ @siddaramaiah ನವರ ಮನಸ್ಥಿತಿಯನ್ನು ಆ ಪಕ್ಷದ ಸಾಮಾಜಿಕ ಜಾಲತಾಣ ಖಾತೆಯೂ ಅನಾವರಣ ಮಾಡಿದೆ. ಯಥಾ ರಾಜಾ
 


ನಿಖಿಲ್ ಕುಮಾರಸ್ವಾಮಿ ಟ್ವೀಟ್: ಆಪರೇಷನ್ ಸಿಂಧೂರ್ ಕೇವಲ ಒಂದು ದಾಳಿಯಲ್ಲ, ಇದು ಹಣೆಯ ಮೇಲೆ ಹಚ್ಚಿದ ರಾಷ್ಟ್ರೀಯ ಸಿಂಧೂರ. ಭಾರತ ಹೊಡೆದಾಗ ಜಗತ್ತು ನೋಡುತ್ತದೆ... ಮತ್ತು ಸ್ವಲ್ಪ ನಡುಗುತ್ತದೆ.  ಆಪರೇಷನ್ ಸಿಂಧೂರ ಕೇವಲ ದಾಳಿಯಲ್ಲ, ಇದು ಭಾರತದ ಸಾರ್ವಭೌಮತ್ವದ ಸಂಕೇತ. ಭಾರತೀಯ ಸೇನೆಯ ಧೈರ್ಯ ಮತ್ತು ಪ್ರಧಾನಿ ಶ್ರೀ @narendramodi ಜಿ ಅವರ ನಿರ್ಭೀತ ನಾಯಕತ್ವಕ್ಕೆ ನನ್ನ ನಮನಗಳು. ನವಭಾರತವು ಎಚ್ಚರಿಸುವುದಷ್ಟೇ ಅಲ್ಲ, ಅದು ತನ್ನ ಕರ್ತವ್ಯ ನಿರ್ವಹಿಸುತ್ತದೆ.
 


ಜನತಾದಳ ಟ್ವೀಟ್: 'ಆಪರೇಷನ್ ಸಿಂಧೂರ'ಕ್ಕೆ ಜಯವಾಗಲಿ. ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ಕೈಗೊಂಡಿರುವ 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ಯಶಸ್ವಿಯಾಗಲಿ. ಉಗ್ರ ಪೋಷಕ ರಾಷ್ಟ್ರ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಕಾಶ್ಮೀರದಲ್ಲಿನ ಭಯೋತ್ಪಾದಕರ ಅಡಗು ತಾಣ ಮತ್ತು ಶಿಬಿರಗಳ ಮೇಲೆ  ಭಾರತೀಯ ಸೇನೆ ನಿಖರ ದಾಳಿ ಮಾಡಿ ಧ್ವಂಸ ಗೊಳಿಸಿದೆ. ಪಾಕಿಸ್ತಾನದ ಉಗ್ರರ ಸಂಹಾರಕ್ಕಾಗಿ ಕೈಗೊಂಡಿರುವ “ಆಪರೇಷನ್ ಸಿಂಧೂರ್” ಸೇನಾ ಕಾರ್ಯಾಚರಣೆ‌”ಯನ್ನು @JanataDal_S ಪಕ್ಷವು ಬೆಂಬಲಿಸುತ್ತದೆ ಮತ್ತು ಸ್ವಾಗತಿಸುತ್ತದೆ. ಭಯೋತ್ಪಾದಕರ ವಿರುದ್ಧದ  ಹೋರಾಟದಲ್ಲಿ ಭಾರತೀಯ ಸೇನೆ ಯಶಸ್ವಿಯಾಗಲಿ. ದೇಶದ ಸಮಸ್ತ ನಾಗರಿಕರ ಬೆಂಬಲವೂ ದೊರಕಿದ್ದು, ಇಡೀ ವಿಶ್ವವೇ ಭಾರತದ ಪರವಾಗಿ ಬೆಂಬಲಕ್ಕೆ ನಿಂತಿದೆ. Wishing Our Forces Safety and Success. 
 


ಕರ್ನಾಟಕ ಕಾಂಗ್ರೆಸ್ ಟ್ವೀಟ್: ಭಯೋತ್ಪಾದಕರು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಎಸಗಿದ ಹೇಡಿತನದ ಪೈಶಾಚಿಕ ಕೃತ್ಯಕ್ಕೆ ನಮ್ಮ ಹೆಮ್ಮೆಯ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಭಯೋತ್ಪಾದನೆಯ ಮೂಲೋತ್ಪಾಟನೆಗೆ ಈ  ದಿಟ್ಟ ಕ್ರಮ ಮುನ್ನುಡಿಯಾಗಲಿ. ಭಾರತೀಯ ಸೇನೆಯ ಪರಾಕ್ರಮ, ಶೌರ್ಯ, ನಿಖರತೆ ಶ್ಲಾಘನೀಯ. ಭಯೋತ್ಪಾದನೆಯ ವಿರುದ್ಧ, ದೇಶದ ಐಕ್ಯತೆ, ಸಮಗ್ರತೆ, ಸುರಕ್ಷತೆಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಎಲ್ಲ ಕ್ರಮಗಳನ್ನೂ ನಾವು ಬೆಂಬಲಿಸುತ್ತೇವೆ.
 


ರವಿಶಂಕರ್ ಗುರೂಜಿ ಟ್ವೀಟ್: ಭಯೋತ್ಪಾದಕರು ಆಧುನಿಕ ರಾಕ್ಷಸರು. ಅವರನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಆಗ ಮಾತ್ರ ಧರ್ಮ, ಶಾಂತಿ ಮತ್ತು ಸೌಹಾರ್ದತೆ ವೃದ್ಧಿಯಾಗಲು ಸಾಧ್ಯ.
 


ಶಾಸಕ ಯತ್ನಾಳ ಟ್ವೀಟ್: ಪ್ರಧಾನಿ ನರೇಂದ್ರ ಮೋದಿ ಜಿ ಅವರ ನೇತೃತ್ವದಲ್ಲಿ ಭಾರತದ ಸೇನೆ, ನೌಕಾ ಪಡೆ ಹಾಗೂ ವಾಯು ಪಡೆ ಉಗ್ರರ ನೆಲೆಯ ಮೇಲೆ ದಾಳಿ ಮಾಡಿ ಪಹಲ್ಲಾಮ್ ನಲ್ಲಿ ನಡೆದ ಅಮಾಯಕ ಪ್ರವಾಸಿಗರ ಹತ್ಯೆಯ ಪ್ರತೀಕಾರ ತೆಗೆದುಕೊಂಡಿದೆ. ಇದು ಪ್ರಾರಂಭವಷ್ಟೇ. ಉಗ್ರ ಪೋಷಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸುತ್ತದೆ. ಸಮಸ್ತ ಭಾರತೀಯರ ಪರವಾಗಿ ಈ ದಾಳಿಯನ್ನು ಸ್ವಾಗತಿಸುತ್ತೇನೆ.ಸೇನೆ ಮತ್ತು ಸರ್ಕಾರದ ಜೊತೆ ನಾವೆಲ್ಲರೂ ನಿಲ್ಲೋಣ.ಭಾರತ ಮಾತೆಗೆ ಜಯವಾಗಲಿ ಜೈ ಹಿಂದ್.
 


ಡಿಕೆ ಶಿವಕುಮಾರ್ ಟ್ವೀಟ್: ಆಪರೇಷನ್ ಸಿಂಧೂರ್ ರಣಹೇಡಿ ಪಾಕಿಸ್ತಾನಕ್ಕೆ ತಕ್ಕ ಉತ್ತರ. ಪಹಲ್ಗಾಮ್ ಅಟ್ಯಾಕ್ ಗೆ ಸರಿಯಾದ ಉತ್ತರ.  ನಾವು ಕೇಂದ್ರ ಸರ್ಕಾರದ ಜೊತೆ ನಿಲ್ತೇವೆ. ನಮ್ಮ ಭದ್ರತಾ ಪಡೆಗಳ ಜೊತೆ ನಿಲ್ತೇವೆ.  ಜೈ ಹಿಂದ್ ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌