
ಬೆಂಗಳೂರು, [ಅ.28]: ಹವಾಲಾ ಹಣ ಪ್ರಕರಣದಲ್ಲಿ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಬೆಂಗಳೂರಿಗೆ ಬಂದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬೆಂಬಲಿಗರ ಜತೆ ನಡೆಸಿದ ರ್ಯಾಲಿಯಲ್ಲಿ ಜೆಡಿಎಸ್ ಬಾವುಟ ಹಿಡಿದಿದ್ದು ಈಗ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಈ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಆಪ್ತರೊಡನೆ ಸಭೆ ನಡೆಸುತ್ತಿರುವ ವೇಳೆ ಅಸಮಾಧಾನ ತೋಡಿಕೊಂಡಿದ್ದಾರೆ. ಈ ದೃಶ್ಯ ವೈರಲ್ ಆಗಿದ್ದು, ಇದು ಸಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ.
ಸಿದ್ದರಾಮಯ್ಯ, ಪರಮೇಶ್ವರ್, ಡಿಕೆಶಿ 'ಜೊತೆ ಜೊತೆಯಲಿ'
ಅಷ್ಟೇ ಅಲ್ಲದೇ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇದಕ್ಕೆ ಸಿದ್ದರಾಮಯ್ಯ ಟ್ವಿಟರ್ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಜಾತಿ ಮಾಡುತ್ತಾರೆ ಎಂದು ಹೇಳಿರುವವರಿಗೆ ಸವಾಲು ಹಾಕಿದ್ದಾರೆ.
ಇನ್ನು ಈ ಬಗ್ಗೆ ಈ ಗ್ಗೆ ಸಿದ್ದರಾಮಯ್ಯ ಟ್ವಿಟರ್ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ನನ್ನ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋದ ತಪ್ಪು ವ್ಯಾಖ್ಯಾನವನ್ನು ಬಿಜೆಪಿ ನಾಯಕರು ಪ್ರಚಾರ ಮಾಡುತ್ತಾ ವಿಕೃತ ಆನಂದ ಪಡುತ್ತಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, ಅನುಷ್ಕಾ ಬಿಟ್ಟು ಕಾಜಲ್ ಕೈಹಿಡಿದ ನಟ; ಅ.28ರ ಟಾಪ್ 10 ಸುದ್ದಿ!
ಇದು ನನಗೆ ಹೊಸತಲ್ಲ. ಈ ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತೆ. ನನ್ನ ರಾಜಕೀಯ ವಿರೋಧಿಗಳಿಗೆ ಇದೇ ನನ್ನ ದೀಪಾವಳಿ ಸಂದೇಶ’ ಎಂದು ಹೇಳಿದ್ದಾರೆ.
ನಾನು ಜಾತಿ ರಾಜಕೀಯ ಮಾಡುತ್ತಿದ್ದೇನೆ ಎಂದು ಆರೋಪಿಸುವವರು ಅವರ ಪಕ್ಷಗಳ ನೀತಿ ಮತ್ತು ಕಾರ್ಯಕ್ರಮಗಳಲ್ಲಿ ಗಾಂಧಿ ಅಂಬೇಡ್ಕರ್, ಬಸವಣ್ಣ ಮತ್ತು ಕುವೆಂಪು ವಿಚಾರಧಾರೆಗಳೆಷ್ಟು ಇವೆ ಎನ್ನುವುದನ್ನು ಬಹಿರಂಗಪಡಿಸಲಿ. ಇದರ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧ. ಇದು ನನ್ನ ಸವಾಲು ಕೂಡಾ ಹೌದು ಎಂದು ಚಾಲೆಂಜ್ ಮಾಡಿದ್ದಾರೆ.
ಇಷ್ಟು ಮಾತ್ರವಲ್ಲದೇ ಸರಣಿ ಟ್ವೀಟ್ ಮೂಲಕ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಇನ್ನೂ ಏನೆಲ್ಲ ಹೇಳಿದ್ದಾರೆ ಎನ್ನುವುದನ್ನು ಅವರು ಮಾಡಿರುವ ಟ್ವೀಟ್ ನಲ್ಲಿ ನೋಡಿ.
ಅಕ್ಟೋಬರ್ 29ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.