ಗ್ಯಾರಂಟಿ ನಾಶವೇ ವಿಪಕ್ಷ ಗುರಿ: ಸುರ್ಜೇವಾಲಾ

By Kannadaprabha News  |  First Published Aug 10, 2024, 6:30 AM IST

ಬಿಜೆಪಿ-ಜೆಡಿಎಸ್ ಪಕ್ಷಗಳು ಪಾದಯಾತ್ರೆ ಮಾಡಿ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುವ ಮೂಲಕ ಗ್ಯಾರಂಟಿ ಯೋಜನೆಗಳನ್ನು ನಾಶಗೊಳಿಸಲು ಹೊರಟಿವೆ. ಆದರೆ, ಈ ಸಮಾವೇಶ ಮೂಲಕ ಅವರ ಕತೆ ಮುಗಿಯುವ ಗ್ಯಾರಂಟಿಯನ್ನು ಜನ ತೋರಿಸಿದ್ದಾರೆ ಎಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ
 


ಮೈಸೂರು(ಆ.10):  ಕಾಂಗ್ರೆಸ್‌ ಜನಾಂದೋಲನ ಸಮಾವೇಶದೊಂದಿಗೆ ಬಿಜೆಪಿ ಹಾಗೂ ಜೆಡಿಎಸ್ ಕತೆ ಮುಗಿಯುವುದು ಗ್ಯಾರಂಟಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದರು.

ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿ, ಬಿಜೆಪಿ-ಜೆಡಿಎಸ್ ಪಕ್ಷಗಳು ಪಾದಯಾತ್ರೆ ಮಾಡಿ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುವ ಮೂಲಕ ಗ್ಯಾರಂಟಿ ಯೋಜನೆಗಳನ್ನು ನಾಶಗೊಳಿಸಲು ಹೊರಟಿವೆ. ಆದರೆ, ಈ ಸಮಾವೇಶ ಮೂಲಕ ಅವರ ಕತೆ ಮುಗಿಯುವ ಗ್ಯಾರಂಟಿಯನ್ನು ಜನ ತೋರಿಸಿದ್ದಾರೆ ಎಂದರು.

Latest Videos

undefined

ರಾಜೀನಾಮೆ ಕೇಳಲು ಬಿಎಸ್‌ವೈಗೆ ನಾಚಿಕೆ ಆಗಲ್ವಾ?: ಸಿದ್ದರಾಮಯ್ಯ

ಬ್ರಿಟಿಷರನ್ನು ಭಾರತದಿಂದ ತೊಲಗಿಸಲು ಗಾಂಧೀಜಿಯವರ ಕ್ವಿಟ್ ಇಂಡಿಯಾ ಚಳವಳಿ, ಸಮಗ್ರ ಭಾರತವನ್ನು ಬೆಸೆಯಲು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಬಳಿಕ, ಇದೀಗ ಕರ್ನಾಟಕವನ್ನು ಸ್ವಚ್ಛಗೊಳಿಸಲು ದೊಡ್ಡಮಟ್ಟದ ಜನಾಂದೋಲನ ರೂಪಿಸಲಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅನುದಾನ ನೀಡುವ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ಬಜೆಟ್‌ನಲ್ಲಿ ಅನ್ಯಾಯ ಮಾಡಲಾಗುತ್ತಿದೆ. ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾಗಿರುವ ಜಿಎಸ್ಟಿ ಪಾಲು ನೀಡುತ್ತಿಲ್ಲ.15ನೇ ಹಣಕಾಸು ಆಯೋಗದಂತೆ ಅನುದಾನ ನೀಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಹಣವನ್ನೇ ಬಿಡುಗಡೆ ಮಾಡುತ್ತಿಲ್ಲ. ರಾಜ್ಯದ ರೈತರ ಕೃಷಿ ಚಟುವಟಿಕೆಗಳಿಗೆ ನೆರವಾಗುವ ಮೇಕೆದಾಟು, ಮಹದಾಯಿ ಯೋಜನೆಗಳಿಗೆ ಅನುಮತಿ ನೀಡದೆ ದ್ರೋಹ ಬಗೆದಿದೆ ಎಂದು ಅವರು ಆರೋಪಿಸಿದರು.

click me!