ಸಮಸ್ಯೆಗಳಿಗೆ ಸ್ಪಂದನೆ ಮಾಡುವುದು ನಮ್ಮ ಗುರಿ: ಬಾಲಚಂದ್ರ ಜಾರಕಿಹೊಳಿ

By Kannadaprabha News  |  First Published Apr 20, 2023, 1:40 PM IST

ಮೇ.10ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾವು ಯಾರನ್ನೂ ಟೀಕಿಸಿ ಪ್ರಚಾರ ಮಾಡುವುದು ಬೇಡ. ಕೇವಲ ಅಭಿವೃದ್ಧಿಯೊಂದೇ ನಮ್ಮ ಅಝೇಂಡಾ ಆಗಲಿ. ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಹೇಳಿದರು. 


ಮೂಡಲಗಿ (ಏ.20): ಮೇ.10ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾವು ಯಾರನ್ನೂ ಟೀಕಿಸಿ ಪ್ರಚಾರ ಮಾಡುವುದು ಬೇಡ. ಕೇವಲ ಅಭಿವೃದ್ಧಿಯೊಂದೇ ನಮ್ಮ ಅಝೇಂಡಾ ಆಗಲಿ. ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರ ತಮ್ಮ ನಾಮಪತ್ರ ಸಲ್ಲಿಸಿದ ಬಳಿಕ ಪಟ್ಟಣದ ಶಿವಬೋಧರಂಗ ಬ್ಯಾಂಕ್‌ನ ಸಭಾಗೃಹದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನರ ಆಶೀರ್ವಾದದಿಂದ ಈ ಚುನಾವಣೆಯಲ್ಲಿ ನಮ್ಮ ಗೆಲುವು ಖಚಿತ ಎಂದು ತಿಳಿಸಿದರು.

ಬೇಸಿಗೆಯ ಅರ್ಭಟಕ್ಕೆ ಜನರು ಮನೆಯಿಂದ ಹೊರಗೆ ಬರಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣದಿಂದ ಜನರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಇಂದು ಬಿಜೆಪಿಯಿಂದ ನಾಮಪತ್ರವನ್ನು ಸರಳವಾಗಿ ಸಲ್ಲಿಸಿದ್ದೇನೆ. ಕೇವಲ 5 ಜನರನ್ನು ಸೇರಿಸಿಕೊಂಡು ನಾಮಪತ್ರ ಸಲ್ಲಿಸಿದ್ದೇನೆ. ಏ.21 ರಿಂದ ಅರಭಾವಿ ಕ್ಷೇತ್ರಾದ್ಯಂತ ಪ್ರಚಾರ ಕಾರ್ಯವನ್ನು ಆರಂಭಿಸಲಾಗುವುದು. ಪ್ರತಿ ಮತಗಟ್ಟೆಗಳಿಂದ ಚುನಾವಣಾ ಪ್ರಚಾರವನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

Tap to resize

Latest Videos

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ: ನಳಿನ್‌ ಕುಮಾರ್ ಕಟೀಲ್‌

ಜನರಿಗೆ ಏನು ಬೇಕು ಅದನ್ನು ನಾವು ಮಾಡೋಣ. ಸಮಸ್ಯೆಗಳ ಪರಿಹಾರಕ್ಕೆ ಯತ್ನಿಸೋಣ. ಅದನ್ನು ಬಿಟ್ಟು ವಿರೋಧಿಗಳು ನಮ್ಮ ಬಗ್ಗೆ ಅಪಪ್ರಚಾರ ಮಾಡುತ್ತಿದ್ದರೂ ಅವುಗಳಿಗೆ ಪ್ರತಿಕ್ರಿಯೆ ನೀಡಬೇಡಿ. ನಮ್ಮ ಕೆಲಸ ಏನಿದ್ದರೂ ಅದು ಅಭಿವೃದ್ಧಿಯೊಂದೇ. ಅರಭಾವಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಮುಂದೆಯೂ ಸಹ ಜನರ ಆಶೀರ್ವಾದದಿಂದ ಬಿಜೆಪಿ ಮತ್ತೇ ಅಧಿಕಾರಕ್ಕೆ ಬರಲಿದೆ. ಮತ್ತಷ್ಟುಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಪರಸ್ಪರ ಕುಶಲೋಪಚಾರಿ ಗಡಾದ ಹಾಗೂ ಬಾಲಚಂದ್ರ: ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೊರಬರುತ್ತಿದ್ದಂತೆಯೇ ಪಕ್ಷೇತರ ಅಭ್ಯರ್ಥಿ ಭೀಮಪ್ಪ ಗಡಾದ ಅವರು ಪರಸ್ಪರ ಕುಶಲೋಪಚಾರಿ ವಿಚಾರಿಸಿದರು. ಪರಸ್ಪರ ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ ಹಾಗೂ ಭೀಮಪ್ಪ ಗಡಾದ ಅವರು ತಮ್ಮ ರಾಜಕೀಯ ಮರೆತು ಪರಸ್ಪರ ಕೈ ಮುಗಿಯುವ ಮೂಲಕ ಕುಶಲೋಪಚಾರಿ ವಿಚಾರಿಸಿದರು. ನಗುಮುಖದಿಂದಲೇ ಬಾಲಚಂದ್ರ ಜಾರಕಿಹೊಳಿ ಅವರಿಗೆ ಗಡಾದ ಎದುರಾದಾಗ ನಮಗೂ ಒಳ್ಳೆಯದಾಗಲಿ. ನಿಮಗೂ ಒಳ್ಳೆಯದಾಗಲಿ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬಾಲಚಂದ್ರ ಜಾರಕಿಹೊಳಿ ಅವರು ಇದೇ ಸಂದರ್ಭದಲ್ಲಿ ಶುಭ ಹಾರೈಸಿದರು. ಈ ಅಪರೂಪದ ಘಟನೆಗೆ ಶಾಸಕರ ಕಾರ್ಯಕರ್ತರು ಸಾಕ್ಷಿಯಾದರು.

ಆಸ್ತಿ ಮೌಲ್ಯ .16,34,21,207 ಹೆಚ್ಚಿಸಿಕೊಂಡ ಬಾಲಚಂದ್ರ: ಅರಭಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಸಲ್ಲಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಒಟ್ಟು .35,69,92,186 ಗಳ ಒಡೆಯರಾಗಿದ್ದು, ಇವರ ಹೆಸರಿನಲ್ಲಿ ಯಾವುದೇ ಸಾಲವಿಲ್ಲ. ಬಾಲಚಂದ್ರ ಜಾಕಿಹೊಳಿ ಬಳಿ .8,55,777 ನಗದು ಹಣ ಇದೆ. .1.50 ಕೋಟಿಗಳ ಎಫ್‌ಡಿ ಇದೆ. ಉಳಿತಾಯ ಖಾತೆಗಳಲ್ಲಿ .62,15,688 ಜಮಾ ಇದೆ. .34,45,541 ಎನ್‌ಎಸ್‌ಎಸ್‌ ಪೋಸ್ಟಲ್‌ ಸೇವಿಂಗ್‌್ಸ ಇನ್ಸೂರನ್ಸ್‌ ಇದ್ದು, .10,97,862 ಮೌಲ್ಯದ ಹುಂಡೈ ಐ20 ಅಸ್ಟಾಕಾರ್‌ ಹೊಂದಿದ್ದಾರೆ. .92,57,810 ಮೌಲ್ಯದ 1,510 ಗ್ರಾಂ ಚಿನ್ನವಿದ್ದರೆ, .8,14,100 ಮೌಲ್ಯದ 10 ಕೆಜಿ ಬೆಳ್ಳಿ ಇದೆ. .31,13,85,052 ಮೌಲ್ಯದ ಕೃಷಿ, ಕೃಷಿಯೇತರ ಭೂಮಿ ಹಾಗೂ ವಾಸಿಸುವ ಮನೆ ಸೇರಿದೆ. ಬಾಲಚಂದ್ರ ಜಾರಕಿಹೊಳಿ ಅವರು .1,29,30,703 ಗಳನ್ನು ಬೇರೆಯವರಿಗೆ ಸಾಲವನ್ನಾಗಿ ನೀಡಿದ್ದಾರೆ.

ಕನ​ಕ​ಪು​ರ​ದ ಜನರಿಗೆ ಸ್ವಾತಂತ್ರ್ಯ ಸಿಗಬೇಕಿದೆ: ಸಚಿವ ಅಶ್ವತ್ಥ ನಾರಾ​ಯಣ

ಕಳೆದ 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾಧಿಕಾರಿಗಳಿಗೆ ಸಲ್ಲಿಸಿದ ಆಸ್ತಿ ವಿವರ ಗಮನಿಸಿದರೆ ಈ ಬಾರಿ ಬಾಲಚಂದ್ರ ಜಾರಕಿಹೊಳಿ ಅವರ ಆಸ್ತಿಯಲ್ಲಿ ಏರಿಕೆ ಕಂಡುಬಂದಿದೆ. ಕಳೆದ ಚುನಾವಣೆಯಲ್ಲಿ .19,35,70,979 ಗಳ ಆಸ್ತಿಯನ್ನು ತೋರಿಸಿದ್ದು, ಈ ಸಲ .35,69,92,186 ರೂ. ಸಲ್ಲಿಸಿದ್ದಾರೆ. ಚರಾಸ್ತಿ ಮತ್ತು ಸ್ಥಿರಾಸ್ತಿಯಲ್ಲಿ ಯಾವುದೇ ಬದಲಾವಣೆಯಾಗದಿದ್ದರೂ, ಈಗಿನ ಮಾರುಕಟ್ಟೆಬೆಲೆ ಹೆಚ್ಚಳವಾಗಿದ್ದರಿಂದ ಇವರ ಆಸ್ತಿ ಮೌಲ್ಯ .16,34,21,207 ಹೆಚ್ಚಳವಾದಂತಾಗಿದೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

click me!