ರೈತರಿಗೆ ಮೊದಲು ವಿಮೆ ಜಾರಿ ಮಾಡಿದ್ದು ನಮ್ಮ ಸರ್ಕಾರ: ಬಿ.ಎಸ್‌.ಯಡಿಯೂರಪ್ಪ

By Kannadaprabha News  |  First Published Mar 16, 2023, 2:40 AM IST

ಮುಂಗಾರು ಬಿತ್ತನೆ ಬೀಜಕ್ಕಾಗಿ .10 ಸಾವಿರ ಕೋಟಿ ಮೀಸಲು ಮತ್ತು ದೇಶದಲ್ಲಿಯೇ ಮೊದಲ ಬಾರಿಗೆ ರೈತರನ್ನು ವಿಮೆ ವ್ಯಾಪ್ತಿಗೆ ಒಳಪಡಿಸಿದ್ದು ನಮ್ಮ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್‌.ಯಡಿಯೂರಪ್ಪ ಹೇಳಿದರು.


ಗದಗ (ಮಾ.16): ಮುಂಗಾರು ಬಿತ್ತನೆ ಬೀಜಕ್ಕಾಗಿ .10 ಸಾವಿರ ಕೋಟಿ ಮೀಸಲು ಮತ್ತು ದೇಶದಲ್ಲಿಯೇ ಮೊದಲ ಬಾರಿಗೆ ರೈತರನ್ನು ವಿಮೆ ವ್ಯಾಪ್ತಿಗೆ ಒಳಪಡಿಸಿದ್ದು ನಮ್ಮ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಅವರು ಬುಧವಾರ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಜರುಗಿದ ವಿಜಯ ಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳೆಯರಿಗೆ ಪ್ರತಿ ತಿಂಗಳು .1 ಸಾವಿರ ನೀಡುವ ಯೋಜನೆಯನ್ನು ಬಿಜೆಪಿ ಸರ್ಕಾರ ಘೋಷಿಸಿದ್ದು, ಈ ಹಿಂದೆಯೂ ಹತ್ತಾರು ಮಹಿಳೆ ಪರ ಯೋಜನೆಗಳನ್ನು ಜಾರಿಗೆ ತಂದಿದೆ. 

ತಮ್ಮ ಭಾಷಣದುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರಗಳ ಸಾಧನೆಗಳನ್ನು ತಿಳಿಸಿದರು. ಶಾಸಕ ಕಳಕಪ್ಪ ಬಂಡಿ ಮಾತನಾಡಿ, ಕ್ಷೇತ್ರದಲ್ಲಿ ಈ ಮೊದಲು ಮರಳು ಸಮಸ್ಯೆ ಇತ್ತು. ಆದರೆ ನಾನು ಶಾಸಕನಾದ ನಂತರ ಇಲ್ಲಿನ ಮರಳು ಸಮಸ್ಯೆ ಬಗೆಹರಿಸಿ ಬಡವರು ಮನೆ ಕಟ್ಟಿಕೊಳ್ಳುಲು ಅನುಕೂಲ ಮಾಡಿದ್ದೇನೆ. ಕ್ಷೇತ್ರದಲ್ಲಿ 700 ಕೋಟಿಗೂ ಅಧಿಕ ರಸ್ತೆ ಅಭಿವೃದ್ಧಿ ಕೆಲಸವಾಗಿದೆ. ರೋಣ ಭಾಗದಲ್ಲಿ ನೆಲ್ಲೂರು, ಶಾಂತಗೇರಿ ಗ್ರಾಮಗಳಲ್ಲಿ ನೀರು ತುಂಬುವ ಕೆಲಸ ಪ್ರಗತಿಯಲ್ಲಿದೆ ಎಂದರು. ಸಂಸದ ಸಿಎಂ ಉದಾಸಿ ಮಾತನಾಡಿದರು.

Tap to resize

Latest Videos

undefined

ಮಾ.16ರಂದು ಮೂಡಿಗೆರೆಯಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಯಾತ್ರೆ: ಕಾರ್ಯಕ್ರಮದ ಮೇಲೆ ಬಂಡಾಯದ ಕಾರ್ಮೋಡ

ಗದಗ ನಗರದ ವರ್ತುಲ ರಸ್ತೆಗೆ .210 ಕೋಟಿ ಮಂಜೂರು ನೀಡುವ ಕೆಲಸವನ್ನು ಸಿ.ಸಿ. ಪಾಟೀಲ ಮಾಡಿದ್ದಾರೆ. ದೇಶದಲ್ಲಿ ಇಂಧನ ವಿತರಣಾ ಕ್ಷಮತೆ ಹೆಚ್ಚಿಸಲು ಕ್ರಮ ತೆಗೆದುಕೊಳ್ಳಲಾಗಿದ್ದು, ಇದಕ್ಕಾಗಿ ಗದಗ ಜಿಲ್ಲೆಗೆ .100 ಕೋಟಿಗೂ ಹೆಚ್ಚಿನ ಅನುದಾನ ನೀಡಲಾಗಿದೆ ಎಂದರು. ಸಚಿವ ಸಿ.ಸಿ. ಪಾಟೀಲ, ಸಿದ್ದಪ್ಪ ಬಂಡಿ, ರವಿ ದಂಡಿನ, ಹೇಮಗಿರಿಶ್‌ ಹಾವನಾಳ, ಅಂದಪ್ಪ ಸಂಕನೂರು, ಎಸ್‌.ವಿ. ಸಂಕನೂರ, ಅಶೋಕ ವನ್ನಾಲ, ಬಿ.ಎಂ. ಸಜ್ಜನರ, ರಾಜೇಂದ್ರ ಘೋರ್ಪಡೆ, ವೀರಪ್ಪ ಪಟ್ಟಣಶೆಟ್ಟಿ, ಉಮೇಶ ಮಲ್ಲಾಪುರ ಇತರರು ಇದ್ದರು. ಗಜೇಂದ್ರಗಡ ತಾಲೂಕಿನ ಹಾಲಕೇರಿ ಗ್ರಾಮಸ್ಥರು ಶಾಸಕ ಕಳಕಪ್ಪ ಬಂಡಿ 210 ಕ್ವಿಂಟಿಲ್‌ ಕಡಲೆ ದಾನ ಮಾಡಿ ಹೊಸತನ ಪ್ರದರ್ಶಿಸಿದರು.

ಸೋಮಣ್ಣ ಎಲ್ಲೂ ಹೋಗಲ್ಲ ಇಲ್ಲೇ ಇರ್ತಾರೆ: ಸಚಿವ ಸೋಮಣ್ಣ ಎಲ್ಲಿಯೂ ಹೋಗಲ್ಲ, ಇಲ್ಲೇ ಇರುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ದೆಹಲಿಗೆ ಹೋಗಿದ್ದಾರೆ. ಎಲ್ಲರ ಜೊತೆ ಒಳ್ಳೆ ಸಂಬಂಧ ಇಟ್ಟುಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ ಎಂದರು. ರೋಣ ಟಿಕೆಟ್‌ ವಿಷಯವಾಗಿ ಕೇಳಿದ ಪ್ರಶ್ನೆಗೆ, ಅದನ್ನು ಪಕ್ಷದ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ. ರೋಣ ಶಾಸಕ ಕಳಕಪ್ಪ ಬಂಡಿ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದಷ್ಟೇ ಹೇಳಿದರು. ಇನ್ನು ಗಜೇಂದ್ರಗಡದಲ್ಲಿ ಆಯೋಜನೆ ಮಾಡಲಾಗಿದ್ದ ವಿಜಯ ಸಂಕಲ್ಪ ಯಾತ್ರೆಯನ್ನು ತರಾತುರಿಯಲ್ಲಿ ಉದ್ಘಾಟಿಸಿದ ಬಿಎಸ್‌ವೈ ಅತಿ ಕಡಿಮೆ ಸಮಯದಲ್ಲಿಯೇ ತಮ್ಮ ಭಾಷಣ ಮುಗಿಸಿ ಹೊರಟು ಹೋಗಿದ್ದು ಆಶ್ಚರ್ಯಕ್ಕೆ ಕಾರಣವಾಯಿತು.

ದಾವಣಗೆರೆ ಜಿಲ್ಲೆಯಲ್ಲಿ ನರೇಗಾ ಕಾಮಗಾರಿಯನ್ನು ಹೆಚ್ಚಿಸಿ: ಸಂಸದ ಜಿ.ಎಂ.ಸಿದ್ದೇಶ್ವರ

ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಹಾಗೂ ಜನಪರ ಕಾರ್ಯಕ್ರಮಗಳು ಜನರ ಮೆಚ್ಚುಗೆಗೆ ಪಾತ್ರವಾಗಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಸಹಕಾರಿ ಎಂದು ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು. ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜೇಂದ್ರ ಘೋರ್ಪಡೆ ಮಾತನಾಡಿ, ಮತಕ್ಷೇತ್ರದಲ್ಲಿ ಶಾಸಕ ಕಳಕಪ್ಪ ಬಂಡಿ ಸಾಕಷ್ಟುಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರದ ಜನಪರ, ರೈತಪರ ಕಾರ್ಯಕ್ರಮಗಳು ಹಾಗೂ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಜನತೆಯ ಮುಂದಿಟ್ಟು ಶಾಸಕರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುತ್ತೇವೆ ಎಂದರು.

click me!