ತೊಗರಿ ರೈತರ ಹಿತಾಸಕ್ತಿ ಕಾಪಾಡಲು ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್‌

Published : Mar 09, 2025, 07:59 PM ISTUpdated : Mar 09, 2025, 08:19 PM IST
ತೊಗರಿ ರೈತರ ಹಿತಾಸಕ್ತಿ ಕಾಪಾಡಲು ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸಾರಾಂಶ

ತುಂಗಭದ್ರಾದಲ್ಲಿ ಪೋಲಾಗುತ್ತಿರುವ 25 ಟಿಎಂಸಿ ನೀರನ್ನು ಉಳಿಸಿಕೊಳ್ಳಲು ಹಾಗೂ ತೊಗರಿ ರೈತರ ಹಿತಾಸಕ್ತಿ ಕಾಪಾಡಲು ತಾವು ಬದ್ಧರೆಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು. 

ಕಲಬುರಗಿ (ಮಾ.09): ತುಂಗಭದ್ರಾದಲ್ಲಿ ಪೋಲಾಗುತ್ತಿರುವ 25 ಟಿಎಂಸಿ ನೀರನ್ನು ಉಳಿಸಿಕೊಳ್ಳಲು ಹಾಗೂ ತೊಗರಿ ರೈತರ ಹಿತಾಸಕ್ತಿ ಕಾಪಾಡಲು ತಾವು ಬದ್ಧರೆಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೊಗರಿ ವಿಚಾರವಾಗಿ ಅರ್ಜಿ ಸಲ್ಲಿಸಿ ಸರ್ಕಾರದ ಗಮನ ಸೆಳೆದಿದ್ದಾರೆ. ನಾವು ತಾಂತ್ರಿಕ ಸಮಿತಿ, ಸಂಶೋಧನಾ ಕೇಂದ್ರದ ಬಗ್ಗೆ ಚರ್ಚೆ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಈ ವಿಚಾರವಾಗಿ ಜಾಗೃತರಾಗಿ ಈ ವಿಚಾರ ನೋಡಿಕೊಳ್ಳುತ್ತಿದ್ದಾರೆ. ನಮ್ಮ ಸರ್ಕಾರಕ್ಕೆ ರೈತರ ಬಗ್ಗೆ ವಿಶೇಷವಾದ ಕಾಳಜಿ ಇದೆ. ರೈತರ ಬದುಕನ್ನು ಉಳಿಸುತ್ತೇವೆ. ಅವರಿಗೆ ಬೆಂಬಲವಾಗಿ ನಿಲ್ಲುತ್ತೇವೆ. ತೊಗರಿ ಬೆಳೆಯ ಸಮಸ್ಯೆ ಬಗ್ಗೆ ಸಂಶೋಧನೆ ನಡೆಸಲಾಗುತ್ತಿದೆ ಎಂದರು.

ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದಂತೆ ತುಂಗಭದ್ರಾ ಅಣೆಕಟ್ಟಿನಿಂದ ವ್ಯರ್ಥವಾಗುತ್ತಿರುವ 25-30 ಟಿಎಂಸಿ ನೀರನ್ನು ಉಳಿಸಿಕೊಳ್ಳಲು ಯೋಜನೆ ರೂಪಿಸುವ ಬಗ್ಗೆ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಸಿಎಂ ರೇವಂತ ರೆಡ್ಡಿಯವರ ಸಮಯ ಕೇಳಿದ್ದೇನೆ. ನವಲಿ ಅಣೆಕಟ್ಟು ಹಾಗೂ ಇದಕ್ಕೆ ಪರ್ಯಾಯವಾಗಿ ಮತ್ತೊಂದು ಯೋಜನೆಯನ್ನು ಪ್ರಸ್ತಾಪಿಸಲಾಗಿದೆ. ಇನ್ನು ಸಿಎಂ ತಾಂತ್ರಿಕ ಸಲಹೆಗಾರರಾದ ಕನ್ಹಯ್ಯ ನಾಯ್ಡು ಬಳಿಯು ನಮ್ಮ ಅಧಿಕಾರಿಗಳು ಚರ್ಚೆ ಮಾಡಲು ಸೂಚಿಸಿದ್ದೇವೆ ಎಂದರು. ಹೆಣ್ಣು ಕುಟುಂಬದ ಕಣ್ಣು ಎಂದು ಭಾವಿಸಿ ಮಹಿಳೆಯರಿಗೆ ಹೆಚ್ಚು ಶಕ್ತಿ ತುಂಬಬೇಕು ಎಂಬ ಉದ್ದೇಶದಿಂದ ನಾವು ಅನೇಕ ಕಾರ್ಯಕ್ರಮಗಳನ್ನು ನೋಡಿದ್ದೇವೆ. 

ಮುಂದಿನ ಚುನಾವಣೆಗಳಿಗೆ ಸ್ಪರ್ಧಿಸಲು ಸಜ್ಜಾಗಿ: ಡಿಸಿಎಂ ಡಿ.ಕೆ.ಶಿವಕುಮಾರ್

ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರ ಬದುಕಿನಲ್ಲಿ ಪ್ರೋತ್ಸಾಹ ನೀಡುವ ಪ್ರಯತ್ನ ಮಾಡಿದ್ದೇವೆ. ನೀರಾವರಿ ಯೋಜನೆ ಮೂಲಕ ಶಕ್ತಿ ತುಂಬಲು 27 ಸಾವಿರ ಕೋಟಿ ಹಣವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು. ಆರೋಗ್ಯ ಇಲಾಖೆಯಿಂದ ಈ ಭಾಗದಲ್ಲಿ ಅನೇಕ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಕಟ್ಟಲು ಮುಂದಾಗಿದ್ದೇವೆ. ಇನ್ನು ದೇವಾಲಯದ ಅರ್ಚಕರಿಗೆ ನೀಡುವ ವೇತನ ಹೆಚ್ಚಿಸಿದ್ದೇವೆ. ಆದರೂ ಬಿಜೆಪಿಯವರು ಟೀಕೆ ಮಾಡುತ್ತಾರೆ. ಗ್ರಾಮೀಣ ಭಾಗದಲ್ಲಿ ಹೊಸ ಆಸ್ಪತ್ರೆ ನಿರ್ಮಾಣಕ್ಕೆ ಆದ್ಯತೆ ನೀಡಿದ್ದೇವೆ. ಎಲ್ಲಾ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ನಾವು ಬಜೆಟ್ ಮಂಡಿಸಿದ್ದೇವೆ ಎಂದು ಹೇಳಿದರು.

ಗುತ್ತಿಗೆಯಲ್ಲಿ ಮುಸಲ್ಮಾನರಿಗೂ ಶೇ.4ರಷ್ಟು ಮೀಸಲಾತಿ: ಮುಸಲ್ಮಾನರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಿರುವ ಬಗ್ಗೆ ಕೇಳಿದಾಗ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮುಸಲ್ಮಾನರಿಗೆ ಎದೆ ಸೀಳಿದರೆ ನಾಲ್ಕು ಅಕ್ಷರ ಇಲ್ಲ. ಪಂಚರ್ ಹಾಕಿಕೊಂಡು ಇರುತ್ತಾರೆ ಎಂದು ಹೇಳಿದ್ದರು. ಮುಸಲ್ಮಾನರಲ್ಲಿ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು ಇದ್ದಾರೆ ಎಂದು ಅವರಿಗೂ ಅರ್ಥವಾಗಬೇಕಲ್ಲವೇ. ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡಿರುವಂತೆ ಮುಸಲ್ಮಾನರಿಗೂ ಶೇ.4ರಷ್ಟು ಮೀಸಲಾತಿ ನೀಡಲಾಗಿದೆ. ಅವರಿಗೂ ಆದ್ಯತೆ ನೀಡಿ ಆರ್ಥಿಕ ಶಕ್ತಿ ತುಂಬಲು ಈ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.

ಸಿಎಂ ಆಗಲು 2 ವರ್ಷದಿಂದ ಡಿಕೆಶಿ ಕಾಯ್ತಿದ್ದಾರೆ: ಸಂಸದ ಗೋವಿಂದ ಕಾರಜೋಳ

ಮುಸಲ್ಮಾನರಿಗೆ ಬೈಯೋದೆ ಪ್ರಹ್ಲಾದ್ ಜೋಶಿ ಕೆಲಸ: ರಾಜ್ಯ ಬಜೆಟ್ ಮುಸಲ್ಮಾನರ ಬಜೆಟ್ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿರುವ ಬಗ್ಗೆ ಕೇಳಿದಾಗ, ಜೋಶಿಯವರಿಗೆ ಮುಸಲ್ಮಾನರನ್ನು ಬೈಯೋದೆ ಕೆಲಸ. ಅವರಿಗೆ ಇನ್ನೇನು ಮಾಡಲು ಸಾಧ್ಯ? ಬಿಜೆಪಿಯವರು ತಾವು ಹಿಂದೂ ತಾವು ಮಾತ್ರ ಮುಂದು ಎನ್ನುತ್ತಾರೆ. ಆದರೆ ನಾವುಗಳು ಆಗಲ್ಲ, ಹಿಂದೂ, ಮುಸ್ಲಿಂ, ಕ್ರೈಸ್ತ, ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟರು ಎಲ್ಲರೂ ಒಂದು ಎನ್ನುತ್ತೇವೆ. ಅವರಿಗೆ ಒಂದು ವರ್ಗದ ಜನ ಮಾತ್ರ ಬೇಕು. ನಮಗೆ ಎಲ್ಲ ವರ್ಗದ ಜನರೂ ಬೇಕು ಎಂದು ತಿರುಗೇಟು ನೀಡಿದರು. ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕವಾಗಿ 5 ಸಾವಿರ ಕೋಟಿ ನೀಡಬೇಕಿತ್ತು. ಬೇರೆ ಯೋಜನೆಗಳನ್ನು ಕೆಕೆಆರ್‌ಡಿಬಿಗೆ ಸೇರಿಸಲಾಗುತ್ತಿದೆ ಎಂದು ಕೇಳಿದಾಗ, 5 ಸಾವಿರ ಕೋಟಿ ನೀಡುತ್ತಿರುವುದು ಹೆಚ್ಚಿನ ಅನುದಾನ. ಇದರ ಜತೆಗೆ ಬೇರೆ ಯೋಜನೆಗಳಿಂದ ಏನು ಬರಬೇಕೋ ಅದು ಬರಲಿದೆ. ನಮ್ಮಲ್ಲಿ ಶಾಸಕರಿಗೆ ಶೇ.25 ಹಣ ಸಿಕ್ಕರೆ ಉಳಿದ ಶೇ.75ರಷ್ಟು ಹಣ ಈ ಭಾಗದ ಶಾಸಕರಿಗೆ ಸಿಗುತ್ತಿದೆ ಎಂದು ವಿವರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ: ಕೆ.ಎಸ್.ಈಶ್ವರಪ್ಪ
ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ