ಜೆಡಿಎಸ್ ಎನ್ ಡಿಎ ಮೈತ್ರಿಕೂಟದಲ್ಲಿ ಸೇರಿಕೊಂಡಿರುವ ಪಕ್ಷ, ಹೀಗಾಗಿ ನಮ್ಮ ಪಕ್ಷದ ಹೈಕಮಾಂಡ್ ಸೂಚನೆಯಂತೆ ಕಾರ್ಯ ನಿರ್ವಹಿಸುವುದು ನಮ್ಮ ಕೆಲಸ. ಹಾಗಾಗಿ ನಮ್ಮ ಸಮಸ್ಯೆಯನ್ನು ನಾವೇ ಪರಿಹರಿಸಿಕೊಳ್ಳುತ್ತೇವೆ ಎಂದು ರಾಜ್ಯ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಬಂಟ್ವಾಳ (ಆ.01): ಜೆಡಿಎಸ್ ಎನ್ ಡಿಎ ಮೈತ್ರಿಕೂಟದಲ್ಲಿ ಸೇರಿಕೊಂಡಿರುವ ಪಕ್ಷ, ಹೀಗಾಗಿ ನಮ್ಮ ಪಕ್ಷದ ಹೈಕಮಾಂಡ್ ಸೂಚನೆಯಂತೆ ಕಾರ್ಯ ನಿರ್ವಹಿಸುವುದು ನಮ್ಮ ಕೆಲಸ. ಹಾಗಾಗಿ ನಮ್ಮ ಸಮಸ್ಯೆಯನ್ನು ನಾವೇ ಪರಿಹರಿಸಿಕೊಳ್ಳುತ್ತೇವೆ ಎಂದು ರಾಜ್ಯ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಬಿಜೆಪಿ ಪಾದಯಾತ್ರೆ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಪಸ್ವರ ವಿಚಾರಕ್ಕೆ ಸಂಬಂಧಿಸಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ಜಿ.ಟಿ.ದೇವೇಗೌಡರು ಪಾದಯಾತ್ರೆಗೆ ವಿರೋಧ ಮಾಡಿದ್ದಾರೆ. ಕೃಷಿ, ಮಳೆ ವಿಚಾರ ಇಟ್ಟುಕೊಂಡು ಪಾದಯಾತ್ರೆ ಮುಂದೂಡಿ ಅಂದಿದ್ದಾರೆ.
ನಾವು ಕೂಡ ಕೇಂದ್ರದ ನಾಯಕರ ಜೊತೆ ಈ ಬಗ್ಗೆ ಮಾತನಾಡ್ತೀವಿ ಎಂದರು. ಸಾವಿರಾರು ಕೋಟಿಯ ಭ್ರಷ್ಟಾಚಾರ ಆಗಿದೆ, ಸಂವಿಧಾನ ಕಾಪಾಡೋ ಸ್ಥಾನದಲ್ಲಿ ಸಿಎಂ ಇದಾರೆ, ನಾವು ಅನ್ಯಾಯ ಮಾಡಲ್ಲ ಅಂತೆಲ್ಲಾ ಪ್ರಮಾಣ ವಚನ ಸ್ವೀಕರಿಸ್ತಾರೆ, ಆದರೆ ಇಷ್ಟು ದೊಡ್ಡ ಹಗರಣ ಮಾಡಿ ಜನರ ಹಣ ಲೂಟಿ ಮಾಡಿದ್ದಾರೆ. ಸದನದ ಒಳಗೂ ಎಲ್ಲರ ಜೊತೆಗೂ ಮಾತನಾಡಿ, ಕಾಂಗ್ರೆಸ್ ನವರು ಬಾಯಿ ಮುಚ್ಚೋ ರೀತಿಯಲ್ಲಿ ಹೋರಾಟ ಆಗಿದೆ, ಇದೇ ಬಿಸಿಯಲ್ಲೇ ಹೋರಾಟ ಆಗಬೇಕು, ಜೆಡಿಎಸ್ ಕೂಡ ಎನ್‌ಡಿಎ ಭಾಗ.
ಹೀಗಾಗಿ ಅವರು ಹೋರಾಟದಲ್ಲಿ ಒಟ್ಟಿಗೆ ಇರಬೇಕು ಅನ್ನೋದು ನಮ್ಮ ಆಸೆ, ನಾನು ಕುಮಾರಸ್ವಾಮಿ ಜೊತೆ ಮಾತನಾಡಿ ನಿರ್ಧಾರಕ್ಕೆ ಬರ್ತೇವೆ. ಕಾಂಗ್ರೆಸ್ ನಾಯಕ ಬಿ.ಕೆ.ಹರಿ ಪ್ರಸಾದ್ ಕೂಡ ಸಿದ್ದರಾಮಯ್ಯ ಲೂಟಿ ಮಾಡಿದ್ದಾರೆಂದು ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡ್ತಾ ಇದಾರೆ, ಮೊದಲು ಇವರ ಸರ್ಕಾರ ಉಳಿಯುತ್ತೋ ನೋಡುವ ಇವರು ತಪ್ಪು ಮಾಡದೇ ದೆಹಲಿಗೆ ಹೋಗಿದಾರಾ? ಭಿನ್ನಮತ ಇರೋದಕ್ಕೆ ದೆಹಲಿಗೆ ಹೋಗಿದ್ದಾರೆ. ಯತ್ನಾಳ್ ಮತ್ತು ಜಾರಕಿಹೊಳಿ ಹೈಕಮಾಂಡ್ ಒಕೆ ಅಂದ್ರೆ ಪಾದಯಾತ್ರೆ ಅಂದಿದ್ದಾರೆ,
ಹೈಕಮಾಂಡ್ ಓಕೆ ಅಂದ್ರೆ ನಾವು ಮತ್ತೆ ನೋಡೋಣ ಎಂದ ಅವರು, ಪ್ರೀತಂ ಗೌಡ ಬಗ್ಗೆ ಜೆಡಿ ಎಸ್ ಗೆ ಯಾಕೆ ವಿರೋಧ ಇದೆ ನನಗೆ ಗೊತ್ತಿಲ್ಲ ಈ ಬಗ್ಗೆ ದೆಹಲಿ ಮಟ್ಟದ ನಾಯಕರು ನೋಡಿಕೊಳ್ತಾರೆ ಎಂದರು. ಇವತ್ತು ಸಂಜೆಯ ಒಳಗೆ ಪಾದಯಾತ್ರೆ ಬಗ್ಗೆ ನಿರ್ಧಾರ ಆಗುತ್ತೆ, ಪಾದಯಾತ್ರೆ ಆಗುತ್ತೆ, ಇದರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಆದರೆ ಯಾವಾಗ ಪಾದಯಾತ್ರೆ ಆಗುತ್ತೆ ಅನ್ನೋದಷ್ಟೇ ಈಗ ಇರುವ ವಿಚಾರ ಎಂದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ರಾಜೇಶ್ ನಾಯ್ಕ್, ಪ್ರತಾಪ ಸಿಂಹ ನಾಯ್ಕ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಪ್ರಮುಖರಾದ ಚೆನ್ನಪ್ಪ ಕೋಟ್ಯಾನ್, ಪೂಜಾ ಪೈ, ಸುಲೋಚನಾ ಭಟ್, ಹರಿಕೃಷ್ಣ ಬಂಟ್ವಾಳ್, ಜೆಡಿಎಸ್ ಮುಖಂಡ ರಕ್ಷಿತ್ ಸುವರ್ಣ ಮೊದಲಾದವರಿದ್ದರು.