
ಉತ್ತರಕನ್ನಡ(ಸೆ.08): ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವಾರ್ಷಿಕೋತ್ಸವದ ಅಂಗವಾಗಿ ಹಳಿಯಾಳ ಶಾಸಕ ಆರ್. ವಿ. ದೇಶಪಾಂಡೆ ನೇತೃತ್ವದಲ್ಲಿ ಇಂದು(ಶುಕ್ರವಾರ) ಸಂಜೆ ಹಳಿಯಾಳದ ವಿವಿಧೆಡೆ ಪಾದಯಾತ್ರೆ ನಡೆಯಿತು.
ಹಳಿಯಾಳದ ತೇರಗಾಂವ ಗ್ರಾಮದಿಂದ ಪಾದಯಾತ್ರೆಗೆ ಚಾಲನೆ ದೊರಕಿದ್ದು, ಹವಗಿ ಗ್ರಾಮದ ಮೂಲಕ ಸಾಗಿ, ವನಶ್ರೀ ವೃತ್ತ ರಸ್ತೆಯಲ್ಲಿ ಸಂಚರಿಸಿ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಯಾತ್ರೆ ಸಮಾಪನಗೊಂಡಿತು. ಈ ಪಾದಯಾತ್ರೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿ ಗಾಂವಕರ್, ಇತರ ಕಾಂಗ್ರೆಸ್ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.
ವನ್ಯಪ್ರಾಣಿಗಳ ಮೇಲೂ ಬರದ ನೆರಳು: ನೀರು ಅರಸಿ ನಾಡಿಗೆ ಬರುವ ಕಾಡುಪ್ರಾಣಿಗಳು
ನಂತರ ತನ್ನ ಕಚೇರಿಯ ಮುಂಭಾಗದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕ ಆರ್. ವಿ. ದೇಶಪಾಂಡೆ, ಬಿಜೆಪಿಯ ದ್ವೇಷ ರಾಜಕಾರಣದ ವಿರುದ್ಧ ರಾಹುಲ್ ಗಾಂಧಿ ನಡೆಸಿದ ಐತಿಹಾಸಿಕ ಭಾರತ್ ಜೋಡೋ ಯಾತ್ರೆ ರಾಜ್ಯದಲ್ಲಿ ದೊಡ್ಡ ಬದಲಾವಣೆ ತಂದಿದೆ. 4,470ಕಿ.ಮೀ. ಹೆಚ್ಚು ದೂರ ಪಾದಯಾತ್ರೆ ಮಾಡುವ ಮೂಲಕ ರಾಹುಲ್ ಗಾಂಧಿ ದಾಖಲೆ ನಿರ್ಮಾಣ ಮಾಡಿದ್ದಾರೆ. ಅವರ ಪ್ರಯತ್ನದ ಫಲವಾಗಿ ಬಿಜೆಪಿಯ ಆಪರೇಷನ್ ಕಮಲಕ್ಕೆ ಬದಲಾಗಿ, ಮತದಾರರು ಕಾಂಗ್ರೆಸ್‌ನೊಂದಿಗೆ ಕೈಜೋಡಿಸುವಂತೆ ಮಾಡಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.