ಅರಮನೆ ಮೈದಾನದ ಬಳಕೆ ಅಧಿನಿಯಮ ರೂಪಿಸಿದ್ದು ದೇವೇಗೌಡರ ಸರ್ಕಾರ: ಲಕ್ಷ್ಮಣ

Published : Jan 29, 2025, 04:27 AM IST
ಅರಮನೆ ಮೈದಾನದ ಬಳಕೆ ಅಧಿನಿಯಮ ರೂಪಿಸಿದ್ದು ದೇವೇಗೌಡರ ಸರ್ಕಾರ: ಲಕ್ಷ್ಮಣ

ಸಾರಾಂಶ

ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಯಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ. ಇದಕ್ಕೆ ಬೇಕಾದ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ನೀಡಿ ದೆ. ಈ ಕೆಲಸವನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಲು ಸಿಎಂ ಸಹ ವಿಮಾನಯಾನ ಸಚಿವರಿಗೆ ಪತ್ರ ಬರೆದಿದ್ದಾರೆ. ಹೀಗಿದ್ದರೂ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ 

ಮೈಸೂರು(ಜ.29):  ಬೆಂಗಳೂರು ಅರಮನೆ ಮೈದಾನದ ಬಳಕೆ ಮತ್ತು ನಿಯಂತ್ರಣಕ್ಕಾಗಿ ಅಧಿನಿಯಮ ರೂಪಿಸಿದ್ದು ಸಿದ್ದರಾಮಯ್ಯ ಸರ್ಕಾರವಲ್ಲ. ಎಚ್.ಡಿ. ದೇವೇಗೌಡ ಅವರ ಸರ್ಕಾರ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ತಿಳಿಸಿದರು.

ಎಚ್.ಡಿ. ದೇವೇಗೌಡ ಮುಖ್ಯಮಂತ್ರಿ ಆಗಿದ್ದಾಗ 1996 ರಲ್ಲಿ ಜಾರಿಗೆ ಬಂದಿದೆ. ಇದನ್ನು ಪ್ರಶ್ನಿಸಿ ಜಯಚಾಮರಾಜ ಒಡೆ ಯರ್ ಅವರ 5 ಜನ ವಾರಸುದಾರರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದರು. ಸರ್ಕಾರ ಕ್ರಮವನ್ನು ಹೈಕೋರ್ಟ್ ಸಹ ಎತ್ತಿ ಹಿಡಿದಿತ್ತು. ಬಳಿಕ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಕಾಯ್ದು ಕೊಳ್ಳಲು ಸೂಚಿಸಿದೆ ಎಂದು ಅವರು ಭಾನು ವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮುಡಾ ಹಗರಣ: ಇ.ಡಿ ವಿರುದ್ಧ ರಾಷ್ಟ್ರಪತಿಗಳಿಗೆ ದೂರು, ಎಂ.ಲಕ್ಷ್ಮಣ

2013 ರಿಂದ 2018, ಈಗಿನ ಒಂದು ಮುಕ್ಕಾಲು ವರ್ಷ ಸಿಎಂ ಆಗಿ ಅಧಿಕಾರದ ಲ್ಲಿರುವ ಸಿದ್ದರಾಮಯ್ಯ ಅವರು, ಅರ ಮನೆ, ಅದರ ಆಸ್ತಿ, ರಾಜವಂಸ್ಥರ ಕುರಿತು ಒಂದೇ ಒಂದು ತೀರ್ಮಾನ ತೆಗೆದು ಕೊಂಡಿಲ್ಲ. ಆದಾಗ್ಯೂ, ಅವರ ವಿರುದ್ದ ಅಪಪ್ರಚಾರ ಮಾಡಲಾಗುತ್ತಿದೆ. ಹಾಗೆಯೇ, ನಮ್ಮನ್ನು ಗುರಿಯಾಗಿಸಿಕೊಂಡು ತೊಂದರೆ ನೀಡಲಾಗುತ್ತಿದೆ ಎಂಬ ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿಕೆ ಆಧಾರ ರಹಿತ ಎಂದರು.

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾ ಗಲೆಲ್ಲ ಅರಮನೆಗೆ ತೊಂದರೆ ನೀಡಲಾ ಗುತ್ತಿದೆ ಎಂಬ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದ 2, 1996, 2012, 2021, 202250 ಕಾಂಗ್ರೆಸ್ ಸರ್ಕಾರವೇ ಇರಲಿಲ್ಲ. ಯಾವ ರೀತಿ ತೊಂದರೆ ಕೊಡಲಾಗಿದೆ ಎಂಬುದನ್ನ ತಿಳಿಸಬೇಕು ಎಂದು ಆಗ್ರಹಿಸಿದರು. 25.2. ಕುಮಾರ ಸ್ವಾಮಿ ಸುಳ್ಳು ಹೇಳುವ ಮೂಲಕ ಸಿದ್ದರಾಮಯ್ಯ ಅವರನ್ನು ಖಳನಾಯಕನ ರೀತಿ ಬಿಂಬಿಸಲು ಹುನ್ನಾರ ನಡೆಸಿದ್ದಾರೆ ಎಂದು ಅವರು ಆರೋಪಿಸಿದರು.

ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಯಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ. ಇದಕ್ಕೆ ಬೇಕಾದ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ನೀಡಿ ದೆ. ಈ ಕೆಲಸವನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಲು ಸಿಎಂ ಸಹ ವಿಮಾನಯಾನ ಸಚಿವರಿಗೆ ಪತ್ರ ಬರೆದಿದ್ದಾರೆ. ಹೀಗಿದ್ದರೂ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ