ಯಾವುದೇ ಗಂಭೀರ ಪ್ರಕರಣಗಳು ಎದುರಾದಾಗ ನಮ್ಮ ಅಧಿಕಾರಿಗಳು ತನಿಖೆ ನಡೆಸಲು ಸೂಕ್ತರಲ್ಲ ಎನ್ನುವ ಅಭಿಪ್ರಾಯ ಬಂದಾಗ ಮಾತ್ರ ಸಿಬಿಐಗೆ ಆ ಪ್ರಕರಣವನ್ನು ವರ್ಗಾಯಿಸುವ ಬಗ್ಗೆ ಚಿಂತನೆ ಮಾಡುತ್ತೇವೆ. ಸಿಬಿಐಗಿರುವ ಮುಕ್ತ ಅನುಮತಿ ಅಧಿಕಾರದಿಂದ ದ್ವೇಷದ ರಾಜಕಾರಣ ನಡೆಯಬಾರದು ಎಂಬ ಕಾರಣಕ್ಕಾಗಿ ಅದನ್ನು ಮೊಟಕುಗೊಳಿಸಲಾಗಿದೆ: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಬೆಂಗಳೂರು(ಸೆ.28): ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಎಫ್‌ಐಆರ್ ದಾಖಲಾದರೆ ಪಕ್ಷಕ್ಕೆ ಮುಜುಗರವಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ದ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಚುಟುಕಾಗಿ ಉತ್ತರಿಸಿದ ಅವರು, 'ಎಫ್ ಐಆರ್ ದಾಖಲಾದರೆ ಪಕ್ಷಕ್ಕೆ ಮುಜುಗರವಿಲ್ಲ' ಎಂದರು.
undefined
ಸಿಎಂ ಸಿದ್ದರಾಮಯ್ಯಗೆ ಬೆಂಬಲ ಸೂಚಿಸುತ್ತಾ ಕಿವಿ ಹಿಂಡಿದ್ರಾ ಖರ್ಗೆ?
ಸಿಬಿಐಗೆ ನೀಡಿದ್ದ ಅನುಮತಿ ವಾಪಸ್:
ದ್ವೇಷದ ರಾಜಕಾರಣಕ್ಕೆ ದಾರಿಯಾಗಬಾರದು ಎಂಬ ಕಾರಣಕ್ಕಾಗಿ ಸಿಬಿಐಗೆ ನೀಡಿದ್ದ ಮುಕ್ತ ಅನುಮತಿ ಅಧಿಕಾರ ಹಿಂದಕ್ಕೆ ಪಡೆಯಲಾಗಿದೆ ಎಂದು ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಗಂಭೀರ ಪ್ರಕರಣಗಳು ಎದುರಾದಾಗ ನಮ್ಮ ಅಧಿಕಾರಿಗಳು ತನಿಖೆ ನಡೆಸಲು ಸೂಕ್ತರಲ್ಲ ಎನ್ನುವ ಅಭಿಪ್ರಾಯ ಬಂದಾಗ ಮಾತ್ರ ಸಿಬಿಐಗೆ ಆ ಪ್ರಕರಣವನ್ನು ವರ್ಗಾಯಿಸುವ ಬಗ್ಗೆ ಚಿಂತನೆ ಮಾಡುತ್ತೇವೆ. ಸಿಬಿಐಗಿರುವ ಮುಕ್ತ ಅನುಮತಿ ಅಧಿಕಾರದಿಂದ ದ್ವೇಷದ ರಾಜಕಾರಣ ನಡೆಯಬಾರದು ಎಂಬ ಕಾರಣಕ್ಕಾಗಿ ಅದನ್ನು ಮೊಟಕುಗೊಳಿಸಲಾಗಿದೆ ಎಂದರು.
ಈ ಹಿಂದೆ ದೇವೇಗೌಡ ಮತ್ತು ಕುಮಾರಸ್ವಾಮಿ ಅವರು ಸಿಬಿಐ ಬಗ್ಗೆ ಏನೇನು ಮಾತನಾಡಿದ್ದರು ಎಂಬುದು ಎಲ್ಲರಿಗೂ ತಿಳಿದಿದೆ. ಬಿಜೆಪಿ ಅವರಂತೂ ಕಾಂಗ್ರೆಸ್ ಬ್ಯೂರ ರೋ ಆಫ್ ಏಜೆನ್ಸಿ ಎಂದಿದ್ದರು. ಆದರೆ, ಈಗ ಸಿಬಿಐಗೆ ಯಾವ್ಯಾವ ಪ್ರಕರಣಗಳನ್ನು ನೀಡಲಾಗಿತ್ತು, ಅವುಗಳು ಏನಾಗಿವೆ ಎಂಬುದನ್ನು ನಾನು ಚರ್ಚಿಸಲ್ಲ ಎಂದರು.