
ಬೆಂಗಳೂರು (ಸೆ.11): ನಾವು ಸಚಿವರಾಗಲು 14 ತಿಂಗಳು ಕಾದಿದ್ದೆವು. ಹೀಗಾಗಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಹ ಸ್ವಲ್ಪ ದಿನ ಸಹನೆಯಿಂದ ಕಾಯಬೇಕು. ಹೀಗೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಲಹೆ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪಕ್ಷದ ವರಿಷ್ಠರು ಶೀಘ್ರವೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 14 ತಿಂಗಳ ಕಾಲ ಕಾನೂನು ಹೋರಾಟ ನಡೆಸಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿ ಸಚಿವರಾಗಿದ್ದೇವೆ. ಎಲ್ಲದಕ್ಕೂ ಕಾಲ ಬರಬೇಕು. ಇದಕ್ಕಾಗಿ ಸಹನೆಯಿಂದ ಕಾಯಬೇಕು. ಆತುರ ಪಡುವುದರಿಂದ ಪ್ರಯೋಜನವಾಗುವುದಿಲ್ಲ. ಪರಿಷತ್ ಸದಸ್ಯರಾಗಿರುವ ಎಚ್.ವಿಶ್ವನಾಥ್, ಆರ್.ಶಂಕರ್, ಎಂ.ಟಿ.ಬಿ.ನಾಗರಾಜ್ ಅವರಿಗೆ ಸೂಕ್ತ ಸ್ಥಾನಮಾನ ಸಿಗಲಿದೆ ಎಂದು ಹೇಳಿದರು.
ಜಿಲ್ಲಾಸ್ಪತ್ರೆಯಲ್ಲಿ ಇನ್ಮುಂದೆ ಬೇರೆ ರೋಗಿಗಳಿಗೂ ಚಿಕಿತ್ಸೆ: ಸಚಿವ ಜಾರಕಿಹೊಳಿ
ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವುದು ಸತ್ಯಕ್ಕೆ ದೂರವಾದುದು. ಅವರು ಯುವ ನಾಯಕರಾಗಿದ್ದು, ಅವರಿಗೆ ಪಕ್ಷದಲ್ಲಿ ಭವಿಷ್ಯ ಇದೆ. ಯಡಿಯೂರಪ್ಪ ಅವರು ಜನನಾಯಕರಾಗಿ ಬೆಳೆದಂತೆ ವಿಜಯೇಂದ್ರ ಸಹ ಬೆಳೆಯಲಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.