ಪವಾರ್‌ ವಿಮಾನ ದುರಂತ : ಸುಪ್ರೀಂ ನಿಗಾದಲ್ಲಿ ತನಿಖೆಗೆ ಮಮತಾ, ಖರ್ಗೆ ಆಗ್ರಹ

Kannadaprabha News   | Kannada Prabha
Published : Jan 29, 2026, 04:52 AM IST
mamata banerjee

ಸಾರಾಂಶ

ಅಜಿತ್‌ ಪವಾರ್‌ ವಿಮಾನ ದುರಂತದ ತನಿಖೆಯನ್ನು ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ನಡೆಸಬೇಕು. ಏಕೆಂದರೆ ಈ ದೇಶಲ್ಲಿ ಯಾರೂ ಸೇಫ್‌ ಅಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ. ಇದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ.

ಕೋಲ್ಕತಾ: ‘ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ವಿಮಾನ ದುರಂತದ ತನಿಖೆಯನ್ನು ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ನಡೆಸಬೇಕು. ಏಕೆಂದರೆ ಈ ದೇಶಲ್ಲಿ ಯಾರೂ ಸೇಫ್‌ ಅಲ್ಲ, ಅದರಲ್ಲೂ ವಿಶೇಷವಾಗಿ ರಾಜಕಾರಣಿಗಳು’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಒತ್ತಾಯಿಸಿದ್ದಾರೆ. ಇದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಮಮತಾ, ‘ನಾವು ಸುಪ್ರೀಂ ಕೋರ್ಟನ್ನು ಮಾತ್ರ ನಂಬುತ್ತೇವೆ. ಇತರ ಎಲ್ಲಾ ಸಂಸ್ಥೆಗಳು ಸಂಪೂರ್ಣವಾಗಿ ರಾಜಿ ಮಾಡಿಕೊಂಡಿವೆ. ಅಜಿತ್‌ ಪವಾರ್ ವಿಮಾನ ಪತನದ ತನಿಖೆಯನ್ನು ಸುಪ್ರೀಂ ಮೇಲ್ವಿಚಾರಣೆಯಲ್ಲಿ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಎಲ್ಲ ನಾಯಕರೂ ತುರ್ತು ಕೆಲಸಗಳಿಗಾಗಿ ಪ್ರಯಾಣ ಮಾಡುತ್ತಲೇ ಇರುತ್ತಾರೆ. ಅಹಮದಾಬಾದ್‌ನಲ್ಲಿ ಪತನವಾದ ವಿಮಾನ ದೊಡ್ಡದಾಗಿತ್ತು. ಆದರೆ ಇದು ಚಿಕ್ಕದು. ಇದು ಏಕೆ ಸಂಭವಿಸಿತು? ಈ ಬಗ್ಗೆ ತನಿಖೆಯಾಗಬೇಕು’ ಎಂದು ಖರ್ಗೆ ಒತ್ತಾಯಿಸಿದ್ದಾರೆ.

ರಾಜಕೀಯ ಬೇಡ: ದೀದಿಗೆ ಶರದ್, ಫಡ್ನವೀಸ್‌ ತಿರುಗೇಟು

ಬಾರಾಮತಿ: ‘ಮಮತಾ ಬ್ಯಾನರ್ಜಿ ತುಂಬಾ ಕೆಳಮಟ್ಟಕ್ಕಿಳಿದು ಆರೋಪ ಮಾಡುತ್ತಿದ್ದಾರೆ. ಅನಗತ್ಯವಾಗಿ ರಾಜಕೀಯ ಮಾಡುತ್ತಿದ್ದಾರೆ’ ಎಂದು ಅಜಿತ್‌ ಪವಾರ್‌ ಸಾವಿನ ತನಿಖೆಗೆ ಆಗ್ರಹಿಸಿದ್ದ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್‌ ತಿರುಗೇಟು ನೀಡಿದ್ದಾರೆ.ಇದೇ ವೇಳೆ, ‘ಇದು ಸಂಪೂರ್ಣವಾಗಿ ಆಕಸ್ಮಿಕ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ರಾಜ್ಯವು ಅಪಾರ ನಷ್ಟವನ್ನು ಅನುಭವಿಸಿದೆ ಮತ್ತು ಅದನ್ನು ತುಂಬಲು ಸಾಧ್ಯವಿಲ್ಲ’ ಎಂದು ಎನ್‌ಸಿಪಿ (ಎಸ್‌ಪಿ) ನಾಯಕ ಶರದ್ ಪವಾರ್ ಹೇಳಿದ್ದಾರೆ.

ದೀದಿ ಹೇಳಿಕೆ ತುಂಬಾ ದುರದೃಷ್ಟಕರ

ಫಡ್ನವೀಸ್ ಮಾತನಾಡಿ, ‘ದೀದಿ ಹೇಳಿಕೆ ತುಂಬಾ ದುರದೃಷ್ಟಕರ. ಹಿರಿಯ ನಾಯಕ ಶರದ್ ಪವಾರ್ ಅವರೇ ರಾಜಕೀಯ ಮಾಡಬಾರದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಸಾವಿನ ಮೇಲೂ ಇಂತಹ ಕೊಳಕು ಮತ್ತು ಹೇಯ ರಾಜಕೀಯ ನಡೆಯುತ್ತಿರುವ ಹಂತವನ್ನು ನಾವು ತಲುಪಿದ್ದೇವೆ ಎಂದು ನನಗೆ ತುಂಬಾ ದುಃಖವಾಗಿದೆ. ಮಮತಾ ದೀದಿ ರಾಜಕೀಯದಲ್ಲಿ ಇಷ್ಟು ಕೀಳು ಮಟ್ಟಕ್ಕೆ ಇಳಿದಿರುವುದು ನನಗೆ ತುಂಬಾ ದುಃಖ ತಂದಿದೆ; ಇದು ತುಂಬಾ ದುರದೃಷ್ಟಕರ ಮತ್ತು ಸಂಪೂರ್ಣವಾಗಿ ತಪ್ಪು. ಅವರು ಅಂತಹ ಹೇಳಿಕೆ ನೀಡಬಾರದಿತ್ತು. ಮಹಾರಾಷ್ಟ್ರದ ಅತ್ಯಂತ ಆಪ್ತ ಮತ್ತು ಪ್ರೀತಿಯ ನಾಯಕನ ಸಾವನ್ನು ಈ ರೀತಿ ರಾಜಕೀಯಗೊಳಿಸುವ ಮೂಲಕ ಅವಮಾನಿಸುವುದು ಸಂಪೂರ್ಣವಾಗಿ ತಪ್ಪು’ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಜಿತ್‌ ಅಗಲಿಕೆಯಿಂದ ಎನ್‌ಸಿಪಿ ಅತಂತ್ರ
ರಾಜ್ಯದ 25 ಶಾಸಕರಿಗೆ ಗುಡ್ ನ್ಯೂಸ್: ನಿಗಮ-ಮಂಡಳಿಗಳ ಅಧ್ಯಕ್ಷರ ಅವಧಿ ವಿಸ್ತರಿಸಿ ಸರ್ಕಾರ ಆದೇಶ