
ಹುಬ್ಬಳ್ಳಿ(ನ.07): ರಾಜ್ಯದಲ್ಲಿ ಈಗ ಪೇ ಡಬಲ್ ಸಿಎಂ ಆಗಿದೆ. ಭ್ರಷ್ಟಾಚಾರದಲ್ಲಿ ಇಡೀ ಸರ್ಕಾರವೇ ಮುಳುಗಿ ಹೋಗಿದ್ದು, ಮಂತ್ರಿಗಳಿಗೆ ಒಂದು ಪಾಲು, ಸಿಎಂಗೆ ಒಂದು ಪಾಲು ಪೇಮೆಂಟ್ ಹೋಗುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿ, ಹಿಂದೆ ನಮ್ಮ ವಿರುದ್ಧ ಯಾವುದೇ ದಾಖಲೆ ಇಲ್ಲದೇ ವಿನಾಕಾರಣ ಕಮಿಷನ್ ಆರೋಪ ಮಾಡಿದರು. ಈಗ ಅಬಕಾರಿ ಇಲಾಖೆಯಲ್ಲಿ ಕಮಿಷನ್ ಆರೋಪ ಕೇಳಿ ಬಂದಿದೆ. ಹಣಕಾಸು ಇಲಾಖೆ ನೇರವಾಗಿ ಮುಖ್ಯಮಂತ್ರಿಗಳ ಕೈಯಲ್ಲಿಯೇ ಇದೆ. ಒಂದೊಂದು ಪರವಾನಗಿ ನೀಡಲು ಎಷ್ಟು ಕಮಿಷನ್ ಪಡೆಯುತ್ತಿದ್ದಾರೆ ಎನ್ನುವುದನ್ನು ಅವರೇ ತನಿಖೆ ನಡೆಸಲಿ ಎಂದರು.
ಬೊಮ್ಮಾಯಿ ಕಾಲದಲ್ಲೇ 40 ಪರ್ಸೆಂಟ್ ಕಮಿಷನ್ ಬಂದದ್ದು: ಸಿದ್ದರಾಮಯ್ಯ
ಇಡೀ ಸರ್ಕಾರ ಭ್ರಷ್ಟಾಚಾರದಲ್ಲಿ ಸಂಪೂರ್ಣ ಮುಳುಗಿದ್ದು, ಯಾವ ಇಲಾಖೆಯಲ್ಲಿ ಹೋದರೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ರಾಜ್ಯದ ಪ್ರತಿ ಇಲಾಖೆಯಲ್ಲಿಯೂ ಭ್ರಷ್ಟಾಚಾರ ಯಾವ ಹಂತಕ್ಕೆ ತಲುಪಿದೆ ಎಂದು ಊಹಿಸಿ ಎಂದರು.
ಬೆಂಗಳೂರಿಗಿಂತ ಉತ್ತಮ ರಸ್ತೆ ಶಿಗ್ಗಾಂವಿಯಲ್ಲಿದೆ
ಶಿಗ್ಗಾಂವಿ-ಸವಣೂರು ಕ್ಷೇತ್ರದಲ್ಲಿ ಅಭಿವೃದ್ದಿಯೇ ಆಗಿಲ್ಲ ಎಂಬ ಕಾಂ ಗ್ರೆಸ್ ನಾಯಕರು ಆರೋಪಕ್ಕೆ ತಿರುಗೇಟು ನೀಡಿದ ಅವರು, ಕಾಂಗ್ರೆಸ್‌ನವರ ಆಲೋಚನೆ ಗಳಿಗೂ ಶಿಗ್ಗಾಂವಿ ಜನರ ಆಲೋಚನೆಗಳಿಗೂ ಬಹಳ ವ್ಯತ್ಯಾಸ ಇದೆ. ಸರ್ಕಾರ ಅವರದೇ ಇದೆ. ಶಿಗ್ಗಾಂವಿಯಲ್ಲಿ ತಾಲೂಕು ಮಟ್ಟದಲ್ಲಿ 200 ಬೆಡ್ ಆಸ್ಪತ್ರೆ, ಟೆಕ್ಸ್‌ಟೈಲ್ ಪಾರ್ಕ್, ಸವಣೂರಿನಲ್ಲಿ ಆಯುರ್ವೇದ ಕಾಲೇಜ್, ಐಟಿಐ ಕಾಲೇಜ್, ಪ್ರವಾಹ ಸಂದರ್ಭದಲ್ಲಿ 12,000ಕ್ಕಿಂತ ಹೆಚ್ಚು ಮನೆ ನಿರ್ಮಾಣ, ಬೆಂಗಳೂರಿಗಿಂತ ಒಳ್ಳೆಯ ರಸ್ತೆ ಇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.