
ಬೆಂಗಳೂರು (ಸೆ.26) : ಪ್ರತಿಪಕ್ಷ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ನಡೆಸುತ್ತಿರುವ ಅಭಿಯಾನಕ್ಕೆ ತಿರುಗೇಟು ನೀಡುವ ಸಂಬಂಧ ಆಡಳಿತಾರೂಢ ಬಿಜೆಪಿ ಏಕಕಾಲದಲ್ಲಿ ಮೂರು ರೀತಿಯ ತಂತ್ರಗಳನ್ನು ಹೆಣೆಯುತ್ತಿದೆ.
ನಾನು ಲಾ ಓದಿದ್ದೇನೆ, ಬೊಮ್ಮಾಯಿ ಲಾ ಓದಿಲ್ಲ, ಬೆದರಿಕೆಗೆ ಬಗ್ಗಲ್ಲ: ಸಿದ್ದರಾಮಯ್ಯ
ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಅಭಿಯಾನದಿಂದ ಬಿಜೆಪಿ ನಾಯಕರಿಗೆ ತೀವ್ರ ಇರುಸು ಮುರುಸಾಗಿದೆ. ಪಕ್ಷದ ವರಿಷ್ಠರು ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಹೀಗಾಗಿಯೇ ರಾಜ್ಯ ನಾಯಕರೊಂದಿಗೆ ಮಾತನಾಡಿ ಕಾಂಗ್ರೆಸ್ ಅಭಿಯಾನಕ್ಕೆ ಪ್ರತಿತಂತ್ರ ರೂಪಿಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ವರಿಷ್ಠರ ಸೂಚನೆ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕರು ಕಾರ್ಯಪ್ರವೃತ್ತವಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಎದಿರೇಟು ನೀಡಲು ಸಜ್ಜಾಗುತ್ತಿದ್ದಾರೆ. ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಆಗಮಿಸುವ ವೇಳೆ ರಾಜ್ಯ ಕಾಂಗ್ರೆಸ್ ನಾಯಕರು ಮಾಡಿದ ರೀತಿಯಲ್ಲೇ ಪೋಸ್ಟರ್‌ಗಳು, ಹೋರ್ಡಿಂಗ್‌್ಸ, ಮಾಧ್ಯಮಗಳಲ್ಲಿ ಜಾಹೀರಾತು ನೀಡುವ ಬಗ್ಗೆ ಬಿಜೆಪಿ ನಾಯಕರು ಚಿಂತನೆ ಮಾಡುತ್ತಿದ್ದಾರೆ ಎನ್ನಲಾಗಿದೆ.
ಕಳೆದ ಹಲವು ದಿನಗಳಿಂದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿರುವುದರಿಂದ ಅವರ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳಿಗೆ ತನಿಖೆಯ ಬಿಸಿ ಮುಟ್ಟಿಸಲು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುಂದಾಳತ್ವದಲ್ಲಿ ಕಸರತ್ತು ನಡೆದಿದೆ. ಅದರಲ್ಲೂ ಬೊಮ್ಮಾಯಿ ಅವರು ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಪ್ರಸ್ತಾಪಿಸಿದ್ದ ಅರ್ಕಾವತಿ ಬಡಾವಣೆಯ ರೀಡೂ ಹಗರಣದ ವಿಚಾರಣೆ ಮಾಡಿ ನ್ಯಾಯಮೂರ್ತಿ ಕೆಂಪಣ್ಣ ಆಯೋಗ ನೀಡಿರುವ ವರದಿಯನ್ನು ಮುಂದಿಟ್ಟುಕೊಂಡು ತನಿಖೆಗೆ ಆದೇಶಿಸುವ ಬಗ್ಗೆ ಪಕ್ಷದ ಮುಖಂಡರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದರ ಜೊತೆಗೆ ಕಾಂಗ್ರೆಸ್ಸಿನ ಪೋಸ್ಟರ್ ಅಭಿಯಾನಕ್ಕೆ ಅಭಿವೃದ್ಧಿ ರಾಜಕಾರಣದ ಮೂಲಕವೂ ತಿರುಗೇಟು ನೀಡಲು ಬಿಜೆಪಿ ನಾಯಕರು ಮುಂದಾಗುತ್ತಿದ್ದಾರೆ. ಪಕ್ಷದ ನಾಯಕರು ಸಭೆ- ಸಮಾರಂಭಗಳಲ್ಲಿ ಹಾಗೂ ಸಮಾವೇಶಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಹೆಚ್ಚು ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಪೇಸಿಎಂ ಪೋಸ್ಟರ್: ಸಿಸಿಟೀವಿ ದೃಶ್ಯ ಆಧರಿಸಿ ಐವರು ಕಾಂಗ್ರೆಸ್ ಕಾರ‍್ಯಕರ್ತರ ಸೆರೆ
ಏನಿದು ತ್ರಿವಳಿ ಅಸ್ತ್ರ?
ಕಾಂಗ್ರೆಸ್ ವಿರುದ್ಧ ಕಾನೂನು ಕ್ರಮ
‘ಪೇ-ಸಿಎಂ’ ಎಂಬುದು ಕಾಂಗ್ರೆಸ್ಸಿನ ಕೊಳಕು ರಾಜಕಾರಣದ ಭಾಗ. ಇದು ಕಾಂಗ್ರೆಸ್ಸಿನ ನೈತಿಕತೆಯ ಅಧಃಪತನ. ಭ್ರಷ್ಟಾಚಾರದ ಆರೋಪ ಮಾಡುವುದಾದರೆ ದಾಖಲೆ ಕೊಡಬೇಕು. ನೇರಾನೇರ ಮಾತನಾಡಬೇಕು. ತನಿಖೆ ಆಗಬೇಕು. ಸುಮ್ಮನೆ ಏನೇನೋ ಮಾತನಾಡುವುದು ಹತಾಶೆಯ ಗುಣ. ಈ ಅಭಿಯಾನದ ಸಂಬಂಧ ಕಾನೂನು ಕ್ರಮ ಕೈಗೊಳ್ಳಲಾಗುವುದು.
- ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ
ನನಗೆ ಲಾ ಗೊತ್ತು, ಸಿಎಂಗೆ ಗೊತ್ತಿಲ್ಲ
ನಾನು ಕಾನೂನು ಓದಿದ್ದೇನೆ. ಬೊಮ್ಮಾಯಿ ಎಂಜಿನಿಯರಿಂಗ್ ವಿದ್ಯಾರ್ಥಿ, ಅವರು ಕಾನೂನು ಓದಿಲ್ಲ. ಹಾಗೆಲ್ಲಾ ಕ್ರಮ ಕೈಗೊಳ್ಳಲು ಬರುವುದಿಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯ, ಪ್ರತಿಭಟನೆ, ಚಳವಳಿ ಮಾಡುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಇಂತಹ ಬೆದರಿಕೆಗೆ ಹೆದರಲ್ಲ. ಕಾನೂನು ನಮಗೂ ಗೊತ್ತಿದೆ. ಕ್ರಮ ತೆಗೆದುಕೊಂಡರೆ ನಾವು ಸುಮ್ಮನೆ ಇರುತ್ತೀವಾ?
- - ಸಿದ್ದರಾಮಯ್ಯ ಪ್ರತಿಪಕ್ಷ ನಾಯಕ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.