ಪೆನ್‌ಡ್ರೈವ್‌ ಕೇಸ್‌ ಲೋಕಸಭಾ ಚುನಾವಣೆ ಮೇಲೆ ಪ್ರಭಾವ ಬೀರಿಲ್ಲ: ಆರ್‌.ಅಶೋಕ್‌

Published : May 12, 2024, 07:47 AM IST
ಪೆನ್‌ಡ್ರೈವ್‌ ಕೇಸ್‌ ಲೋಕಸಭಾ ಚುನಾವಣೆ ಮೇಲೆ ಪ್ರಭಾವ ಬೀರಿಲ್ಲ: ಆರ್‌.ಅಶೋಕ್‌

ಸಾರಾಂಶ

ಲೋಕಸಭಾ ಚುನಾವಣೆಯ ಎರಡನೇ ಹಂತವು ಉತ್ತರ ಕರ್ನಾಟಕದಲ್ಲಿ ನಡೆದಿರುವುದರಿಂದ ಪೆನ್‌ಡ್ರೈವ್‌ ಪ್ರಕರಣವು ಯಾವುದೇ ಪ್ರಭಾವ ಬೀರಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. 

ಬೆಂಗಳೂರು (ಮೇ.12): ಲೋಕಸಭಾ ಚುನಾವಣೆಯ ಎರಡನೇ ಹಂತವು ಉತ್ತರ ಕರ್ನಾಟಕದಲ್ಲಿ ನಡೆದಿರುವುದರಿಂದ ಪೆನ್‌ಡ್ರೈವ್‌ ಪ್ರಕರಣವು ಯಾವುದೇ ಪ್ರಭಾವ ಬೀರಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, 2ನೇ ಹಂತದ ಚುನಾವಣೆಯಲ್ಲಿ ಉತ್ತಮ ಮತದಾನವಾಗಿದ್ದು, ಬಿಜೆಪಿ ಹೆಚ್ಚಿನ ಸ್ಥಾನದಲ್ಲಿ ಗೆಲುವು ಸಾಧಿಸುವ ವಿಶ್ವಾಸ ಇದೆ. ಪೆನ್‌ಡ್ರೈವ್‌ ಪ್ರಕರಣ ಎರಡನೇ ಹಂತದ ಚುನಾವಣೆಯಲ್ಲಿ ಪ್ರಭಾವ ಬೀರಿಲ್ಲ ಎಂದರು. ಪ್ರಕರಣದ ಸಂಬಂಧ ವಕೀಲ ದೇವರಾಜೇಗೌಡ ಅವರನ್ನು ಬಂಧಿಸಿದ್ದು ಸರಿಯಲ್ಲ. 

ಸಾಕ್ಷಿಯನ್ನು ಸಿಬಿಐಗೆ ನೀಡುವುದಾಗಿ ದೇವರಾಜೇಗೌಡ ಹೇಳಿದ್ದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಹೆಸರು ಹೇಳದಂತೆ ಬೆದರಿಕೆ ಹಾಕಲಾಗಿದೆ. ಪ್ರಕರಣದಲ್ಲಿ ಸರ್ಕಾರವು ಎಸ್ಐಟಿ ಅನ್ನು ತನ್ನ ಲಾಭಕ್ಕಾಗಿ ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದರು. ಸರ್ಕಾರವು ಬರಗಾಲ, ಬಿತ್ತನೆ ಬೀಜ ವಿತರಣೆ ಕುರಿತು ಯೋಚನೆ ಮಾಡುತ್ತಿಲ್ಲ. ಮಳೆ ಬಂದಿದ್ದು, ರೈತರ ಕಡೆ ಗಮನ ಹರಿಸಬೇಕು. ರಸಗೊಬ್ಬರ ಸೇರಿದ ಇತರ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕು ಎಂದು ಒತ್ತಾಯಿಸಿದರು.

ನೇಹಾ ಹತ್ಯೆ ಪ್ರಕರಣ ಮುಚ್ಚಿಹಾಕಲು ಹುನ್ನಾರ: ನೇಹಾ ಕೊಲೆ ಪ್ರಕರಣವನ್ನು ವಿಳಂಬ ಮಾಡುವ ಮೂಲಕ ರಾಜ್ಯ ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಆರೋಪಿಸಿದರು. ನೇಹಾಳ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ಒಂದು ಕೊಲೆ ಅಥವಾ ದುರ್ಘಟನೆ ನಡೆದಾಗ 24 ಗಂಟೆಯೊಳಗಾಗಿ ಘಟನೆ ನಡೆದ ಸ್ಥಳದಲ್ಲಿ ಸೂಕ್ತ ಸಾಕ್ಷಾಧಾರಗಳನ್ನು ಪೊಲೀಸರು ಸಂಗ್ರಹಿಸಬೇಕು. ಆದರೆ, ನೇಹಾ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದ್ದು ಬಿಟ್ಟರೆ ಮತ್ಯಾವ ಪ್ರಕ್ರಿಯೆಯೂ ನಡೆದಿಲ್ಲ ಎಂದರು.

ಬಿಜೆಪಿ ಗೆದ್ದರೆ ವಿಪಕ್ಷ ನಾಯಕರು ಜೈಲಿಗೆ: ಅರವಿಂದ ಕೇಜ್ರಿವಾಲ್‌ ಭವಿಷ್ಯ

ಘಟನೆ ನೋಡಿದರೆ ಲವ್ ಜಿಹಾದ್ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಇದು ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಅದನ್ನು ಮರೆಮಾಚಲು ಸುಖಾಸುಮ್ಮನೆ ವಿಳಂಬ ಮಾಡುವ ಕಾರ್ಯ ನಡೆದಿದೆ. ಪೊಲೀಸರೇ ಆರೋಪಿಯನ್ನು ರಕ್ಷಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ತಮ್ಮ ಭಾಷೆಯಲ್ಲಿ ವಿಚಾರಣೆ ನಡೆಸಿದ್ದರೆ ಅವನು ಕೊಲೆಗೆ ಸಂಬಂಧಿಸಿದ ಎಲ್ಲ ವಿಷಯ ಹೇಳುತ್ತಿದ್ದ. ಅವನನ್ನು ನೋಡಿದರೆ ಸಮಾಜ ವಿರೋಧಿ ಸಂಘಟನೆಯವರೊಂದಿಗೆ ಸಂಬಂಧ ಹೊಂದಿರಬಹುದು ಎಂಬ ಅನುಮಾನವಿದೆ. ಈ ಕುರಿತು ಸರ್ಕಾರ ಸೂಕ್ತ ತನಿಖೆ ನಡೆಸುವ ಅವಶ್ಯಕತೆ ಇದೆ. ಪ್ರಕರಣ ಮುಚ್ಚಿ ಹಾಕಲು ಕೆಲ ಕಾಣದ ಕೈಗಳು ಕೆಲಸ ಮಾಡುತ್ತಿವೆಯಾ ಎಂಬ ಅನುಮಾನ ಮೂಡುತ್ತಿದೆ ಎಂದು ಹರಿಹಾಯ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ