ಕಾಂಗ್ರೆಸಿನ ಸುಳ್ಳು ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ: ಪ್ರಲ್ಹಾದ್ ಜೋಶಿ

By Kannadaprabha News  |  First Published Dec 4, 2023, 11:30 PM IST

ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಪ್ರಧಾನಿ ಮೋದಿ ನೇತೃತ್ವದಲ್ಲಿ ನಾವು ಈ ಚುನಾವಣೆ ಗೆದ್ದಿದ್ದೇವೆ ಎಂದು ಹೇಳಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. 


ಹುಬ್ಬಳ್ಳಿ (ಡಿ.04): ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಪ್ರಧಾನಿ ಮೋದಿ ನೇತೃತ್ವದಲ್ಲಿ ನಾವು ಈ ಚುನಾವಣೆ ಗೆದ್ದಿದ್ದೇವೆ ಎಂದು ಹೇಳಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದಲ್ಲಿ ಜನತೆಯ ಆಶೀರ್ವಾದ ನಮಗೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ನೀಡಿದ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಮತದಾರರು ಮನ್ನಣೆ ನೀಡಿದ್ದಾರೆ. ಈ ಯಶಸ್ಸಿನಿಂದಾಗಿ ಪಕ್ಷದ ಕಾರ್ಯಕರ್ತರ ಆತ್ಮವಿಶ್ವಾಸ ಇಮ್ಮಡಿಯಾಗಿದೆ. 

ಕಾಂಗ್ರೆಸಿನ ಸುಳ್ಳು ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ. ತೆಲಂಗಾಣ ಬಿಟ್ಟು ಉಳಿದ ಕಡೆ ಕಾಂಗ್ರೆಸ್ ನೆಲಕಚ್ಚಿದೆ. ಬಿಆರ್‌ಎಸ್ ದುರಾಡಳಿತದ ಪರಿಣಾಮ ಕಾಂಗ್ರೆಸ್ ಗೆಲ್ಲುವಂತಾಗಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ದುರಾಡಳಿತ ಬಗ್ಗೆ ಜನರಿಗೆ ತಿಳಿಸಿದ್ದೆವು. ಮಧ್ಯಪ್ರದೇಶದಲ್ಲಿ ಡಬಲ್ ಎಂಜಿನ್ ಸರ್ಕಾರ ಕೆಲಸ ಮಾಡಿದೆ ಎಂದಿದ್ದಾರೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ. ರಾಜಸ್ಥಾನದಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಜಯಭೇರಿ ಬಾರಿಸಿದೆ. ಛತ್ತೀಸ್‌ಗಢದಲ್ಲಿ ಕೂಡ ಬಿಜೆಪಿ ಅದ್ಬುತ ಗೆಲುವು ದಾಖಲಿಸಿದೆ. ತೆಲಂಗಾಣದಲ್ಲಿ ಕಳೆದ ಬಾರಿ ಬಿಜೆಪಿ ಕೇವಲ ಒಂದು ಸ್ಥಾನ ಗೆದ್ದಿದೆ. ಆದರೆ, ಈ ಬಾರಿ ಅಲ್ಲಿಂದ ಎರಡಂಕಿಗೆ ಹೋಗಿದ್ದೇವೆ. ಇದರಿಂದ ಪ್ರಧಾನಿ ಮೋದಿ ಮೇಲಿನ ಜನರ ನಂಬಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಸ್ಪಷ್ಟಪಡಿಸುತ್ತದೆ.

Tap to resize

Latest Videos

ಪ್ರಧಾನಿ ಮೋದಿ ತುಂಬಾ ಎತ್ತರದ, ಜಗತ್ತು ಗೌರವಿಸುವ ನಾಯಕ: ಸಿ.ಟಿ.ರವಿ

ಉತ್ತರಾಖಂಡದ ಬಳಿಕ ರಾಜಸ್ಥಾನ ಗೆಲ್ಲಿಸಿದ ಜೋಶಿ: ರಾಜಸ್ಥಾನದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬರುವುದರೊಂದಿಗೆ ಕೇಂದ್ರ ಸಚಿವ, ಧಾರವಾಡ ಸಂಸದ ಪ್ರಹ್ಲಾದ್‌ ಜೋಶಿ ಪಾಲಿಗೆ ಇದೀಗ ಮತ್ತೊಂದು ಗೆಲುವಿನ ಗರಿ ಸಿಕ್ಕಿದೆ. ಕಾರಣ ಈ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೆಲಸ ಮಾಡಿದ್ದು ಪ್ರಹ್ಲಾದ್‌ ಜೋಶಿ. 2022ರಲ್ಲಿ ನಡೆದ ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದ ಬಿಜೆಪಿ, ರಾಜ್ಯದ 70 ಸ್ಥಾನಗಳ ಪೈಕಿ 47ರಲ್ಲಿ ಪಕ್ಷದ ಗೆಲುವಿಗೆ ಕಾರಣಕರ್ತರಾಗಿದ್ದರು.

ಈ ಹಿನ್ನೆಲೆಯಲ್ಲಿ ಮಾರವಾಡಿ ಸಮುದಾಯವೇ ಹೆಚ್ಚಿನ ಸಂಖ್ಯೆಯಲ್ಲಿರುವ ರಾಜಸ್ಥಾನದಲ್ಲಿ ಜೋಶಿ ಪ್ರಮುಖ ಪಾತ್ರ ವಹಿಸಬಹುದು ಎನ್ನುವ ಕಾರಣಕ್ಕೆ ರಾಜ್ಯದಲ್ಲಿನ ಪಕ್ಷದ ಉಸ್ತುವಾರಿಯನ್ನಾಗಿ ನೇಮಿಸಲಾಗಿತ್ತು. ಈ ಅವಕಾಶವನ್ನು ಬಳಸಿಕೊಂಡ ಜೋಶಿ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಮತ್ತು ಸಚಿನ್‌ ಪೈಲಟ್‌ ನಡುವಿನ ವೈಮನಸ್ಯವನ್ನು ಬಿಜೆಪಿಗೆ ಲಾಭದಾಯಕವನ್ನಾಗಿ ಬಳಸಿಕೊಳ್ಳುವ ತಂತ್ರ ರೂಪಿಸಿದರು. ಜೊತೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯಲ್ಲೂ ಸೂಕ್ತ ನಿರ್ಧಾರಗಳನ್ನು ಕೈಗೊಂಡು ಪಕ್ಷವನ್ನು ಮತ್ತೊಮ್ಮೆ ಅಧಿಕಾರದ ಮೆಟ್ಟಿಲು ಏರಿಸುವಲ್ಲಿ ತಮ್ಮ ಕಾಣಿಕೆ ನೀಡಿದ್ದಾರೆ.

ಗ್ಯಾರಂಟಿಗಳ ಕಾಂಗ್ರೆಸ್‌ಗೆ ಮತದಾರರಿಂದ ತಪರಾಕಿ: ಶಾಸಕ ಆರಗ ಜ್ಞಾನೇಂದ್ರ

ಮೋದಿಗೆ ರಾಜಸ್ಥಾನ ಜನರ ಜೈ!: ಛತ್ತೀಸ್‌ಗಢ, ರಾಜಸ್ಥಾನ, ಮತ್ತು ಮಧ್ಯ ಪ್ರದೇಶದ ಜನರು ಪ್ರಧಾನಿ ನರೇಂದ್ರ ಮೋದಿ ಅವರ ಭರವಸೆ ಮತ್ತು ನಾಯಕತ್ವವನ್ನು ಜನರು ಒಪ್ಪಿಕೊಂಡಿದ್ದಾರೆ ಎಂದು ಫಲಿತಾಂಶ ತೋರಿಸುತ್ತಿದೆ. ಕಾಂಗ್ರೆಸ್‌ನ ಸುಳ್ಳು ಭರವಸೆಗಳನ್ನು ಜನರು ತಿರಸ್ಕರಿಸಿದ್ದಾರೆ. ತೆಲಂಗಾಣದಲ್ಲಿ ಬಿಆರ್‌ಎಸ್‌ಗೆ ಆಡಳಿತ ವಿರೋಧಿ ಅಲೆ ಇದ್ದದ್ದಕ್ಕೆ ಅಲ್ಲಿ ಕಾಂಗ್ರೆಸ್‌ಗೆ ಲಾಭವಾಗಿದೆ. ಬಿಜೆಪಿ ಅಲ್ಲಿ ಇನ್ನೂ ಬೆಳೆಯಬೇಕಿದೆ. ಸೋಮವಾರದಿಂದ ಪ್ರಾರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಪ್ರತಿಪಕ್ಷಗಳು ಅಡ್ಡಿಪಡಿಸಿದರೆ, ಅವು ಇಂದು ಬಂದಿರುವುದಕ್ಕಿಂತ ಕೆಟ್ಟ ಫಲಿತಾಂಶ ಎದುರಿಸಬೇಕಾಗುತ್ತದೆ.

click me!