ರಿಪಬ್ಲಿಕ್ ಆಫ್ ಕನಕಪುರದಲ್ಲಿ ಜನರು ಬೇಸತ್ತು ಹೋಗಿದ್ದು, ಅವರಿಗೆ ನಿಜವಾದ ಸ್ವಾತಂತ್ರ್ಯ ಬೇಕಾಗಿದೆ. ಡಿಕೆ ಸಹೋದರರಿಗೆ ಎಷ್ಟುವಿರೋಧ ಇದೆ ಎಂಬುದು ಮೇ 13ರ ಫಲಿತಾಂಶದಲ್ಲಿ ಗೊತ್ತಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದರು.
ರಾಮನಗರ (ಏ.20): ರಿಪಬ್ಲಿಕ್ ಆಫ್ ಕನಕಪುರದಲ್ಲಿ ಜನರು ಬೇಸತ್ತು ಹೋಗಿದ್ದು, ಅವರಿಗೆ ನಿಜವಾದ ಸ್ವಾತಂತ್ರ್ಯ ಬೇಕಾಗಿದೆ. ಡಿಕೆ ಸಹೋದರರಿಗೆ ಎಷ್ಟುವಿರೋಧ ಇದೆ ಎಂಬುದು ಮೇ 13ರ ಫಲಿತಾಂಶದಲ್ಲಿ ಗೊತ್ತಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದರು. ರಾಮನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೌತಮ್‌ಗೌಡ ಅವರೊಂದಿಗೆ ನಾಮಪತ್ರ ಸಲ್ಲಿಸಿ ಹೊರ ಬಂದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ಉಳಿಸುವ ಸಲುವಾಗಿಯೇ ಬಿಜೆಪಿ ಕನಕಪುರ ಕ್ಷೇತ್ರದಲ್ಲಿ ಆರ್.ಅಶೋಕ್ ಅವರನ್ನು ಕಣಕ್ಕಿಳಿಸಿದೆ ಎಂದು ಹೇಳಿದರು.
ಪದ್ಮನಾಭನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಯಾರನ್ನು ಸ್ಪರ್ಧೆಗೆ ಇಳಿಸಬೇಕೆಂಬುದು ಆ ಪಕ್ಷಕ್ಕೆ ಬಿಟ್ಟವಿಚಾರ. ಯಾರು ಬೇಕಾದರು ಸ್ಪರ್ಧೆ ಮಾಡಬಹುದು. ಅದನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಅವರಾರಯರಿಗೂ ಬೆಂಬಲ ಸಿಗುವುದಿಲ್ಲ. ಅಶೋಕ್ ಗೆಲುವು ಸಾಧಿಸುತ್ತಾರೆ ಎಂದು ಸಂಸದ ಡಿ.ಕೆ.ಸುರೇಶ್ ಅವರಿಗೆ ಟಾಂಗ್ ನೀಡಿದರು. ರಾಜ್ಯದಲ್ಲಿಯೇ ಕನಕಪುರ ಹಿಂದುಳಿದ ತಾಲೂಕುಗಳ ಪಟ್ಟಿಯಲ್ಲಿದೆ. ಅಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಪ್ರಜಾಪ್ರಭುತ್ವ ಆಶಯಗಳ್ನು ಉಳಿಸಬೇಕಾದರೆ ಜನರಿಗೆ ಕೊಟ್ಟಿರುವ ಆಶೋತ್ತರಗಳ್ನು ಉಳಿಸಿಕೊಳ್ಳಬೇಕು. ರಿಪಬ್ಲಿಕ್ ಆಫ್ ಕನಕಪುರದಿಂದ ಜನರನ್ನು ಹೊರ ತರಬೇಕು. ಆ ಜನರಿಗೆ ಸ್ವಾತಂತ್ರ್ಯ ಸಿಗಬೇಕಿದೆ ಎಂದು ಹೇಳಿದರು.
ಶಿವಮೊಗ್ಗದಲ್ಲಿ ಚನ್ನಬಸಪ್ಪ ಗೆಲುವಿಗೆ ಶ್ರಮಿಸುವೆ: ಕೆ.ಎಸ್.ಈಶ್ವರಪ್ಪ
ಸುದೀಪ್ ಬೆಂಬಲ ಆಶಾದಾಯಕ: ಚಿತ್ರನಟ ಸುದೀಪ್ ಅವರು ಸ್ವ-ಇಚ್ಚೆಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಚುನಾವಣಾ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ. ಅವರ ಬೆಂಬಲ ನಮಗೆ ಆಶಾದಾಯಕವಾಗಿದೆ. ಸುದೀಪ್ ಜೊತೆಗೆ ಅವರ ಬೆಂಬಲಿಗರು ಪಕ್ಷದ ಪರವಾಗಿ ನಿಲ್ಲುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸುದೀಪ್ ಅವರನ್ನು ಯಾರು ಕೂಡ ಟೀಕಿಸಬಾರದು. ಅವರು ಒಪ್ಪಿ ಎಲ್ಲೆಲ್ಲಿ ಪ್ರಚಾರ ಮಾಡಬೇಕು ಅಂದುಕೊಂಡಿದ್ದಾರೊ ಅಲ್ಲೆಲ್ಲ ಪ್ರಚಾರ ಮಾಡುತ್ತಾರೆ. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಇರುವುದರಿಂದ ಅವರ ಬೆಂಬಲ ಸಹಕಾರ ಸಿಗಲಿದೆ ಎಂದು ಹೇಳಿದರು.
ಅತ್ಯುತ್ತಮ ಮೀಸಲಾತಿ ನೀತಿ ನೀಡಿದೆ: ಸಂವಿಧಾನದಲ್ಲಿ ಧರ್ಮ ಆಧಾರಿತವಾಗಿ ಮೀಸಲಾತಿ ನೀಡಲು ಅವಕಾಶ ಇಲ್ಲ. ಅಲ್ಲಿ ಕಿತ್ತು, ಇಲ್ಲಿ ಕಿತ್ತು ಮೀಸಲಾತಿ ನೀಡಲು ಆಗುವುದಿಲ್ಲ. ಕಾಂಗ್ರೆಸ್‌ನವರು ಮೀಸಲಾತಿ ವಿಚಾರವಾಗಿ ಪೊಳ್ಳು ಭರವಸೆ ನೀಡುತ್ತಿದೆ. ಎಲ್ಲ ವರ್ಗದವರಿಗೂ ಸಮಾನವಾಗಿ ಮೀಸಲಾತಿ ಹಂಚಿಕೆ ಮಾಡಿರುವ ಬಿಜೆಪಿ ಸರ್ಕಾರ ಅತ್ಯುತ್ತಮ ಮೀಸಲಾತಿ ನೀತಿ ನೀಡಿದೆ. ರಾಮನಗರ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆಯ ವಾತಾವರಣವಿದ್ದು, ಬಿಜೆಪಿ ಅಭ್ಯರ್ಥಿ ಗೌತಮ್ ಗೌಡ ಗೆಲುವು ಸಾಧಿಸುತ್ತಾರೆಂಬ ವಿಶ್ವಾಸವಿದೆ. ಸ್ಥಳೀಯ ಅಭ್ಯರ್ಥಿಯಾಗಿರುವ ಗೌತಮ್‌ಗೌಡ ಯುವಕರ ಕಣ್ಮಣಿ, ಭರವಸೆ ನಾಯಕರಾಗಿ ಬೆಳೆಯುತ್ತಿದ್ದಾರೆ. ಜನರು ಆಶೀರ್ವಾದ ಮಾಡುತ್ತಾರೆಂಬ ವಿಶ್ವಾಸವಿದೆ ಎಂದರು.
ಜಿಲ್ಲೆಯ ಸರ್ವಾಂಗೀಣವಾಗಿ ಅಭಿವೃದ್ಧಿ ಹೊಂದಬೇಕಾಗಿದೆ. ಅಭಿವೃದ್ಧಿ ಮಾಡಲು ಸಾಕಷ್ಟುಅವಕಾಶವಿದ್ದು, ಜನರಿಗೆ ಅನುಕೂಲತೆಗಳು ತಲುಪಬೇಕಿದೆ. ಕೈಗಾರಿಕೆ, ಶಿಕ್ಷಣ,ಆರೋಗ್ಯ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮಾಡಲು ಬಿಜೆಪಿ ಪಣತೊಟ್ಟು ಕೆಲಸ ಮಾಡಲಿದೆ. ಬಿಜೆಪಿ ಸ್ಪಷ್ಟಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಅಶ್ವತ್ಥ ನಾರಾಯಣ ಹೇಳಿದರು. ಬಿಜೆಪಿ ಅಭ್ಯರ್ಥಿ ಗೌತಮ್‌ಗೌಡ ಮಾತನಾಡಿ, ರಾಮನಗರ ಕ್ಷೇತ್ರವನ್ನು ಅವರ ಭದ್ರಕೋಟೆ, ಇವರ ಭದ್ರಕೋಟೆ ಎಂದೆಲ್ಲ ಹೇಳುತ್ತಾರೆ. ಆದರೀಗ ನಾಮಪತ್ರ ಸಲ್ಲಿಸುವ ಕಾರ್ಯಕ್ಕೆ ಸಾವಿರಾರು ಜನರು ಬಂದಿದ್ದಾರೆ ಎಂದರೆ ಈ ಕ್ಷೇತ್ರ ಯಾರ ಭದ್ರಕೋಟೆಯೂ ಅಲ್ಲ ಎಂಬುದು ಸಾಬೀತಾಗಿದೆ. ಈ ಕ್ಷೇತ್ರದಲ್ಲಿ ಇಲ್ಲಿವರೆಗೆ ಜನರು ಒಂದೆರೆಡು ಪಕ್ಷದವರನ್ನೇ ಗೆಲ್ಲಿಸಿಕೊಂಡು ಬಂದಿದ್ದಾರೆ.
ಜನಾರ್ದನ ರೆಡ್ಡಿ ಬಳ್ಳಾರಿ ಭೇಟಿಗೆ ಸುಪ್ರೀಂಕೋರ್ಟ್ ನಿರಾಕರಣೆ
ಈಗಲೂ ಮೂಲಸೌಲಭ್ಯಗಳ ಬಗ್ಗೆಯೇ ಚರ್ಚೆ ಮಾಡುತ್ತಿದ್ದೇವೆ. ಬಿಜೆಪಿ ಸರ್ಕಾರ ಮೂರುವರೆ ವರ್ಷಗಳಲ್ಲಿ ಜಿಲ್ಲೆಗೆ ಅಪಾರವಾದ ಕೊಡುಗೆ ನೀಡಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಜನರ ಬಳಿಗೆ ತೆರಳುತ್ತೇವೆ. ಮನೆ ಮಗನಿಗೆ ಕ್ಷೇತ್ರದ ಜನರು ಆಶೀರ್ವಾದ ಮಾಡುತ್ತಾರೆಂಬ ನಂಬಿಕೆ ಇದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ ಗೌಡ, ಮುಖಂಡ ಪದ್ಮನಾಭ ಮತ್ತಿತರರು ಹಾಜರಿದ್ದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.