ಬಿಜೆಪಿ ಸಂಕಲ್ಪ ಯಾತ್ರೆ ವಿಫಲವಾಗಿದ್ದು, ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆದು ಕಾಂಗ್ರೆಸ್ಸಿನ್ನು ಅಧಿಕಾರಕ್ಕೆ ತರಲು ಜನರು ಸಂಕಲ್ಪ ಮಾಡಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಹುಬ್ಬಳ್ಳಿ (ನ.9) : ಬಿಜೆಪಿ ಸಂಕಲ್ಪ ಯಾತ್ರೆ ವಿಫಲವಾಗಿದ್ದು, ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆದು ಕಾಂಗ್ರೆಸ್ಸಿನ್ನು ಅಧಿಕಾರಕ್ಕೆ ತರಲು ಜನರು ಸಂಕಲ್ಪ ಮಾಡಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಬಿಜೆಪಿ ಸೋಲಿಸಿ ಮಲ್ಲಿಕಾರ್ಜುನ ಖರ್ಗೆಗೆ ಅಭಿನಂದನೆ: ಸಿದ್ದರಾಮಯ್ಯ
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಂಕಲ್ಪ ಯಾತ್ರೆಗೆ ಜನರೇ ಸೇರುತ್ತಿಲ್ಲ. ಅವರನ್ನು ಹಿಡಿದಿಡಲು ಕಾರ್ಯಕ್ರಮದ ಮುಂಭಾಗದ ಗೇಟ್‌ಗೆ ಬೀಗ ಹಾಕಿ ಜನರನ್ನು ಕಟ್ಟಿಹಾಕಲು ಬಿಜೆಪಿ ವಿಫಲ ಯತ್ನ ಮಾಡುತ್ತಿದೆ. ಹಾಗಾಗಿ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರಲು ಜನರು ಸಂಕಲ್ಪ ಮಾಡಿದ್ದಾರೆ ಎಂದರು.
ಆರ್ಥಿಕವಾಗಿ ಹಿಂದುಳಿವರಿಗೆ ಶೇ. 10ರಷ್ಟುಮೀಸಲಾತಿ ಕುರಿತು ಸುಪ್ರೀಂಕೋರ್ಚ್ ತೀರ್ಪಿಗೆ ಪ್ರತಿಕ್ರಿಯಿಸಿದ ಅವರು, ತೀರ್ಪನ್ನು ಇನ್ನೂ ನಾನು ನೋಡಿಲ್ಲ. ಆದರೆ ಸಂವಿಧಾನದ ಆರ್ಟಿಕಲ್ 15, 16ರ ಅಡಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸಲು ಅವಕಾಶವಿಲ್ಲ. ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಮಾತ್ರ ಮೀಸಲಾತಿ ನೀಡಬೇಕು ಎಂಬುದನ್ನು ಸಂವಿಧಾನ ಹೇಳುತ್ತದೆ ಎಂದು ತಿಳಿಸಿದರು.
ಹಿಂದು ಪದಕ್ಕೆ ಅಶ್ಲೀಲ ಎಂಬ ಅರ್ಥವಿದೆ ಎಂದು ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾತಿಗೆ ಪ್ರತಿಕ್ರಿಯಿದ ಅವರು, ಜಾರಕಿಹೊಳಿ ಹೇಳಿಕೆ ಕುರಿತು ಈಗಾಗಲೇ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಪ್ರತಿಕ್ರಿಯೆ ನೀಡಿದ್ದಾರೆ. ಅದೇ ನಮ್ಮ ನಿಲುವಾಗಿದೆ ಎಂದರು.
ಧಾರವಾಡದ ಐಐಟಿಗೆ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ವಿತರಿಸುವಲ್ಲಿ ಕೆಐಎಡಿಬಿ ಅವ್ಯವಹಾರ ನಡೆಸಿರುವ ಕುರಿತು ಕೇಳಿದ ಪ್ರಶ್ನೆಗೆ, ಇದೀಗ ನÜಮ್ಮ ಗಮನಕ್ಕೆ ಬಂದಿದೆ. ಕೆಲವರು ಮನವಿ ಸಲ್ಲಿಸಿದ್ದಾರೆ. ಅದನ್ನು ನೋಡಿ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ಟಿಪ್ಪು ಜಯಂತಿ ಮಾಡುವುದು ತಪ್ಪಲ್ಲ, ಆದರೆ ಈ ಸರ್ಕಾರ ಜಯಂತಿ ನಿಷೇಧಿಸಿದೆ. ಹೀಗಾಗಿ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸುವ ಕುರಿತು ಸಲ್ಲಿಕೆಯಾಗಿರುವ ಮನವಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎಂದರು.
ಬಿಜೆಪಿಗೆ ಸವಾಲು ಹಾಕಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ: ಮತ್ತೆ ‘ಕೈ’ ಹೊಗಳಿದ Ghulam Nabi Azad..!
ಮೊಳಗಿದ ಸಿದ್ದು ಸಿಎಂ ಘೋಷಣೆ: ಗದರಿದ ಸಿದ್ದು
ನಗರದ ಖಾಸಗಿ ಹೋಟೆಲ್‌ನಿಂದ ಸುದ್ದಿಗಾರರೊಂದಿಗೆ ಮಾತನಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಬರುತ್ತಿದ್ದಂತೆ ಸಿದ್ದರಾಮಯ್ಯ ಅಭಿಮಾನಿ ಸಂಘದ ಅಧ್ಯಕ್ಷ ಗಿರೀಶ ಗದಿಗೆಪ್ಪಗೌಡ ಹಾಗೂ ಕಾರ್ಯಕರ್ತರು ‘ಮುಂದಿನ ಸಿಎಂ ಸಿದ್ದರಾಮಯ್ಯ’ ಎಂದು ಘೋಷಣೆ ಕೂಗಿದರು. ಇದಕ್ಕೆ ಗದರಿಸಿದ ಸಿದ್ದರಾಮಯ್ಯ ಸುಮ್ಮನಿರುವಂತೆ ತಿಳಿಸಿದರು. ಕಾರು ಹತ್ತುವಾಗಲೂ ಕಾರ್ಯಕರ್ತರು ಮತ್ತೆ ‘ಹೌದು ಹುಲಿಯಾ, ಮುಂದಿನ ಸಿಎಂ ಸಿದ್ದರಾಮಯ್ಯಗೆ ಜೈ’ ಎಂದು ಘೋಷಣೆ ಕೂಗಿದರು. ಇದಕ್ಕೂ ಸಿದ್ದರಾಮಯ್ಯ ಗದರಿ ಸುಮ್ಮನಿರುವಂತೆ ಕಾರ್ಯಕರ್ತರಿಗೆ ಹೇಳಿದರು.