ಕಾಂಗ್ರೆಸ್‌ನಿಂದ ಮಾತ್ರ ಜನಪರ ಆಡಳಿತ ನೀಡಲು ಸಾಧ್ಯ: ಮಾಜಿ ಸಚಿವ ಎಚ್.ಆಂಜನೇಯ

By Kannadaprabha News  |  First Published Apr 11, 2024, 8:18 PM IST

ಕಾಂಗ್ರೆಸ್‌ನಿಂದ ಮಾತ್ರ ಜನಪರ ಆಡಳಿತ ನೀಡಲು ಸಾಧ್ಯ. ಹಾಗಾಗಿ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಬಲಪಡಿಸುವಂತೆ ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. 


ಹೊಳಲ್ಕೆರೆ (ಏ.11): ಕಾಂಗ್ರೆಸ್‌ನಿಂದ ಮಾತ್ರ ಜನಪರ ಆಡಳಿತ ನೀಡಲು ಸಾಧ್ಯ. ಹಾಗಾಗಿ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಬಲಪಡಿಸುವಂತೆ ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ, ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಬ್ರೀಟಿಷರು ದೋಚಿದ್ದ ಭಾರತವನ್ನು ಮರು ನಿರ್ಮಾಣ ಮಾಡುವಲ್ಲಿ ಕಾಂಗ್ರೆಸ್ ಸಾಧನೆ ಬಹು ದೊಡ್ಡದು ಇದೆ. 

ಡ್ಯಾಂ, ಕೈಗಾರಿಕೆ, ಶಿಕ್ಷಣ ಸಂಸ್ಥೆ, ರೈಲು, ವಿಮಾನ ಎಲ್ಲವೂ ಕಾಂಗ್ರೆಸ್ ಕೊಡುಗೆ ಆಗಿದೆ. ಆದರೆ, ಬಿಜೆಪಿಗರು ಆಡಳಿತದಲ್ಲಿ ಒಂದು ಕೆಲಸ ಮಾಡದೆ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ ಎಂದರು. ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಬಿಸಿಯೂಟ, ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್, ಈಗಿನ ಪಂಚ ಗ್ಯಾರಂಟಿಗಳು ಸಾಮಾನ್ಯ ಜನರ ಆರ್ಥಿಕ ಸ್ಥಿತಿಯನ್ನು ಉತ್ತಮ ಪಡೆಸುತ್ತಿವೆ. ಜನರು ಕೂಡ ಎಲ್ಲೆಡೆಯೂ ಕಾಂಗ್ರೆಸ್ ಆಡಳಿತಕ್ಕೆ ಮೆಚ್ಚುಗೆ ನೀಡುತ್ತಿರುವುದು ಬಿಜೆಪಿಯವರಲ್ಲಿ ನಡುಕು ಉಂಟು ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಸಜ್ಜನ ರಾಜಕಾರಣಿ. 

Tap to resize

Latest Videos

undefined

ಏ.11, 12ರಂದು ತಾಲೂಕಿನ ವಿವಿಧ ಹಳ್ಳಿಗಳಲ್ಲಿ ರೋಡ್ ಶೋ ಹಾಗೂ ಗ್ರಾಪಂ ಕೇಂದ್ರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಜನರು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿದ್ದ 25 ಮಂದಿ ಎಲ್ಲರೂ ಒಗ್ಗಟ್ಟಾಗಿದ್ದು, ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಎರಡು ಲಕ್ಷ ಮತಗಳ ಅಂತರದಲ್ಲಿ ಗೆಲ್ಲಬೇಕಿದೆ. ಡಿ.ಸುಧಾಕರ್, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ, ಪಾವಗಡದ ವೆಂಕಟೇಶ್, ಶಿರಾದ ಟಿ.ಬಿ.ಜಯಚಂದ್ರ ಈಗಾಗಲೇ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದರು..

ಮಾಜಿ ಸಚಿವ ಸಿ.ಟಿ.ರವಿ ಅವರಿಗೆ ಅನ್ಯಾಯವಾಗಿದೆ: ಮರುಗಿದ ಬಿ.ಎಸ್.ಯಡಿಯೂರಪ್ಪ

ತೇಕಲವಟ್ಟಿ, ಎಚ್.ಡಿ.ಪುರ, ಚಿತ್ರಹಳ್ಳಿ, ನುಲೇನೂರು, ಶಿವಗಂಗ, ಮದ್ದೇರು, ತಾಳ್ಯ, ಗುಂಡೇರಿ, ವಿಶ್ವನಾಥನಹಳ್ಳಿ, ತಾಳಿಕಟ್ಟೆ, ರಾಮಗಿರಿ ಸೇರಿ ವಿವಿಧೆಡೆ ಕಾರ್ಯಕರ್ತರ ಸಭೆ ನಡೆಸಿದರು. ಜಿಪಂ ಮಾಜಿ ಅಧ್ಯಕ್ಷ ಶಿವಕುಮಾರ್, ಮಾಜಿ ಸದಸ್ಯರಾದ ಗಂಗಾಧರ, ಡಿ.ಕೆ.ಶಿವಮೂರ್ತಿ, ಇಂದಿರಾ ಕಿರಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಹನುಮಂತಪ್ಪ ಇತರರು ಇದ್ದರು.

click me!