ಚುನಾವಣೆ ಅಕ್ರಮ ಆರೋಪ; ಎಚ್‌ಡಿ ರೇವಣ್ಣ ಆಯ್ಕೆ ರದ್ದತಿಗೆ ಕೋರಿ ಹೈಕೋರ್ಟ್‌ಗೆ ಅರ್ಜಿ

Published : Aug 03, 2023, 08:49 AM IST
ಚುನಾವಣೆ ಅಕ್ರಮ ಆರೋಪ; ಎಚ್‌ಡಿ ರೇವಣ್ಣ ಆಯ್ಕೆ ರದ್ದತಿಗೆ ಕೋರಿ ಹೈಕೋರ್ಟ್‌ಗೆ ಅರ್ಜಿ

ಸಾರಾಂಶ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿ ಹೊಳೆನರಸೀಪುರದಿಂದ ಜೆಡಿಎಸ್‌ ಅಭ್ಯರ್ಥಿ ಎಚ್‌.ಡಿ.ರೇವಣ್ಣ ಜಯಗಳಿಸಿದ್ದು, ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಹೈಕೋರ್ಟ್‌ನಲ್ಲಿ  ಅರ್ಜಿ ಸಲ್ಲಿಸಲಾಗಿದೆ.

ಬೆಂಗಳೂರು ಆ.3): ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿ ಹೊಳೆನರಸೀಪುರದಿಂದ ಜೆಡಿಎಸ್‌ ಅಭ್ಯರ್ಥಿ ಎಚ್‌.ಡಿ.ರೇವಣ್ಣ ಜಯಗಳಿಸಿದ್ದು, ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಹೈಕೋರ್ಟ್‌ನಲ್ಲಿ  ಅರ್ಜಿ ಸಲ್ಲಿಸಲಾಗಿದೆ. ಈ ಕುರಿತಂತೆ ಚುನಾವಣೆಯಲ್ಲಿ ರೇವಣ್ಣ(HD Revanna) ಅವರ ಎದುರು ಸೋತ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಚುನಾವಣಾ ತಕರಾರು ಸಲ್ಲಿಸಿದ್ದಾರೆ.

ಅರ್ಜಿ ಸಂಬಂಧ ಬುಧವಾರ ಕೆಲ ಕಾಲ ವಾದ ಆಲಿಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ಪೀಠ, ಎಚ್‌.ಡಿ.ರೇವಣ್ಣ, ಶ್ರೇಯಸ್‌ ಎಂ.ಪಟೇಲ್‌, ಗೀತಾ ಶಿವಸ್ವಾಮಿ, ಬಿ.ಕೆ.ನಾಗರಾಜ, ಎಚ್‌.ಎಸ್‌.ತಾರೇಶ್‌, ಡಿ.ಆರ್‌.ರಂಗಸ್ವಾಮಿ ಸೇರಿದಂತೆ ಎಲ್ಲ ಪ್ರತಿವಾದಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಸೆ.4ಕ್ಕೆ ಮುಂದೂಡಿತು.

ಸುಳ್ಳು ಜಾತಿ, ಶೈಕ್ಷಣಿಕ ಪ್ರಮಾಣಪತ್ರ ಆರೋಪ; ಪ್ರಿಯಾಂಕ್‌ ಖರ್ಗೆ ಆಯ್ಕೆ ರದ್ದತಿ ಕೋರಿ ಹೈಕೋರ್ಟ್‌ಗೆ ಅರ್ಜಿ

ಚುನಾವಣೆಯಲ್ಲಿ ಎಚ್‌.ಡಿ.ರೇವಣ್ಣ ಹೊಳೆನರಸೀಪುರ ಕ್ಷೇತ್ರದಿಂದ 88,103 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಅದನ್ನು ಪ್ರಶ್ನಿಸಿರುವ ಅರ್ಜಿದಾರರು, ರೇವಣ್ಣ ವ್ಯಾಪಕ ಚುನಾವಣಾ ಅಕ್ರಮಗಳನ್ನು ಎಸಗಿದ್ದಾರೆ. ಅವರ ಬೆಂಬಲಿಗರು ಅಣ್ಣೆಹಳ್ಳಿಯಲ್ಲಿ ಮತದಾರರಿಗೆ ಎರಡು ಕೋಳಿ ಮತ್ತು ಎರಡು ಸಾವಿರ ನಗದು ಹಂಚಿದ್ದಾರೆ. ಶಾಂತಿಗ್ರಾಮದ ಬಳಿ ಜನರಿಗೆ ಅಮಿಷವೊಡ್ಡುತ್ತಿದ್ದುದನ್ನು ತಡೆಯಲು ಹೋದಾಗ ರೇವಣ್ಣ ಅವರ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಬಗ್ಗೆ ಮಿಥುನ್‌, ಮೋಹನ್‌, ಮಂಜು ಮತ್ತು ಶಂಕರ್‌ ಸೇರಿ 30 ಮಂದಿ ವಿರುದ್ಧ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಅಲ್ಲದೆ, ರೇವಣ್ಣ ಅವರು ಸಲ್ಲಿಸಿರುವ ನಾಮಪತ್ರವೇ ದೋಷಪೂರಿತವಾಗಿದೆ. ಅವರು ತಮ್ಮ ಆಸ್ತಿ ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿಲ್ಲ ಎಂದೂ ಆರೋಪಿಸಿದ್ದಾರೆ.

ಕುಮಾರಸ್ವಾಮಿ ಜೊತೆ ಕುಸ್ತಿ..ರೇವಣ್ಣ ಜೊತೆ ದೋಸ್ತಿ: ದೇವೇಗೌಡರ ದೊಡ್ಡ ಮಗ ಅಂದ್ರೆ ಸಿದ್ದರಾಮಯ್ಯಗೆ ಬಲು ಪ್ರೀತಿ..!

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ