
ಬೆಂಗಳೂರು (ಮಾ.25): ಬರಪರಿಹಾರ ನೀಡದಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಹೋಗಿರುವುದು ರಾಜಕೀಯ ಪ್ರೇರಿತವಾದುದು ಎಂದು ಎಚ್.ಡಿ.ದೇವೇಗೌಡ ಟೀಕಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಬರ ಪರಿಹಾರ ವಿಚಾರದಲ್ಲಿ ಸುಪ್ರೀಂಕೋರ್ಟ್ ಮೊರೆ ಹೋಗಿದೆ.
ಈ ಹಿಂದೆಯೂ ಹಲವು ಬಾರಿ ಕೇಂದ್ರ ಸರ್ಕಾರ ಬರ ಪರಿಹಾರ ನೀಡಿಲ್ಲ. ರಾಜ್ಯ ಸರ್ಕಾರವೇ ಸೂಕ್ತ ಕ್ರಮ ಕೈಗೊಂಡಿರುವ ನಿದರ್ಶನಗಳಿವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲವೇ? ಇದು ರಾಜಕೀಯ ಪ್ರೇರಿತ ಎಂದು ಹೇಳಿದರು. ಈ ನಡುವೆ, ಇದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಬರ ಪರಿಹಾರ ವಿಚಾರದಲ್ಲಿ ಸರ್ಕಾರ ನ್ಯಾಯಾಲಯಕ್ಕೆ ಹೋಗಿರುವುದು ಒಂದು ಸ್ಟಂಟ್ ಅಷ್ಟೇ ಎಂದು ಲೇವಡಿ ಮಾಡಿದರು.
10 ವರ್ಷದ ಅಭಿವೃದ್ಧಿಯಿಂದ ಮತ್ತೆ ಬರಲಿದೆ ಮೋದಿ ಸರ್ಕಾರ: ತೇಜಸ್ವಿ ಸೂರ್ಯ
ಬರದಿಂದ ಜನ ವಲಸೆ ಹೋಗುತ್ತಿದ್ದಾರೆ: ಕಾವೇರಿ ಕೊಳ್ಳದ 9 ಜಿಲ್ಲೆಯ 22 ತಾಲೂಕು ಮತ್ತು ಬೆಂಗಳೂರು ನಗರ ಸೇರಿ ಅನೇಕ ಕಡೆ ಕುಡಿಯುವ ನೀರಿನ ಸಮಸ್ಯೆ ತುಂಬಾ ಭೀಕರವಾಗಿದ್ದು, ಕಳೆದ ಐದು ದಿನಗಳಿಂದ ಕೆಲವರು ಮನೆಗಳಿಗೆ ಬೀಗ ಹಾಕಿ ವಲಸೆ ಹೋಗಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಕುಡಿಯಲು ನೀರಿಲ್ಲ, ಈ ಭೀಕರ ಸಮಸ್ಯೆಗೆ ಪರಿಹಾರ ಒದಗಿಸಲು ರಾಜ್ಯ ಸರ್ಕಾರದಿಂದ ಸಾಧ್ಯವಾಗಿಲ್ಲ. ಹೀಗಾಗಿ ಜನರು ತಮ್ಮ ಮನೆಗಳಿಗೆ ಬೀಗ ಹಾಕಿ ಬೇರೆ ಊರುಗಳಿಗೆ ಹೋಗುತ್ತಿದ್ದಾರೆ ಎಂದರು.
ಪ್ರಧಾನಿ ಅನುಮತಿ ಕೊಡಿಸಬೇಕು: ಇದು ಕಾಂಗ್ರೆಸ್, ಬಿಜೆಪಿ, ಡಿಎಂಕೆ ಅಥವಾ ಯಾವುದೇ ಪಕ್ಷದ ಯೋಜನೆಯಲ್ಲ, ಬದಲಿಗೆ ಜನಪರವಾದ ಯೋಜನೆಯಾಗಿದೆ. ಕುಡಿಯುವ ನೀರಿಗಾಗಿ ಜನತೆ ಸಮಸ್ಯೆಗೊಳಗಾಗಿದ್ದಾರೆ. ಕಾವೇರಿ ಕೊಳ್ಳದ ಒಂಬತ್ತು ಜಿಲ್ಲೆಗಳಲ್ಲಿ ಜಲ ಸಂಕಷ್ಟ ಎದುರಾಗಿದೆ. ಮೇಕೆದಾಟು ಯೋಜನೆಯಿಂದ ಐದು ಸಾವಿರ ಎಕರೆ ಮುಳುಗಡೆಯಾಗುವುದಿಲ್ಲ. ಈ ಅಂಶವನ್ನು ಪರಿಸರ ನಿಪುಣರು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಅಧಿಕಾರಿಗಳು, ನೀರಾವರಿ ತಜ್ಞರು ಮೇಕೆದಾಟು ಯೋಜನೆಯಿಂದ 30 ಟಿಎಂಸಿ ನೀರು ಬಳಕೆ ಮಾಡಿಕೊಳ್ಳಬಹುದು ಎಂದಿದ್ದಾರೆ.
ಬನ್ನೇರುಘಟ್ಟದಲ್ಲಿ ವಿಶ್ವ ಕರಡಿ ದಿನಾಚರಣೆ: ವಿಶೇಷ ಆಹಾರ ನೀಡಿ ಸಂಭ್ರಮಿಸಿದ ಪ್ರವಾಸಿಗರು!
2018ರಲ್ಲಿಯೆ ಕೇಂದ್ರ ಸರ್ಕಾರ ಈ ಯೋಜನೆಯ ಕಾರ್ಯಸಾಧ್ಯತೆಯ ವರದಿಯನ್ನು ಕೇಂದ್ರೀಯ ಜಲ ಆಯೋಗಕ್ಕೆ ಸಲ್ಲಿಸಿದ್ದು, ವರದಿಯನ್ನು ಒಪ್ಪಿದ ನಂತರ ಸಮಗ್ರ ಯೋಜನಾ ವರದಿ ಸಲ್ಲಿಸುವಂತೆ ರಾಜ್ಯಕ್ಕೆ ಸೂಚಿಸಿತ್ತು. ಅದರಂತೆ 2019ರಲ್ಲಿ ರಾಜ್ಯ ಸರ್ಕಾರ ಡಿಪಿಆರ್ ಸಲ್ಲಿಸಿದೆ. ಇದಕ್ಕೆ ಪ್ರಧಾನಮಂತ್ರಿಗಳು ಅನುಮತಿ ಕೊಡಿಸಬೇಕು ಹಾಗೂ ಮೇಕೆದಾಟು ಯೋಜನೆ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.