ಪೆಟ್ರೋಲ್ ಡೀಸೆಲ್ ದರ ಏರಿಕೆ: ಸಿಎಂ ಆಡಳಿತ ನಡೆಸಲು ಆಗದಿದ್ರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ: ಯತ್ನಾಳ್ ಕಿಡಿ

Published : Jun 22, 2024, 02:55 PM IST
ಪೆಟ್ರೋಲ್ ಡೀಸೆಲ್ ದರ ಏರಿಕೆ: ಸಿಎಂ ಆಡಳಿತ ನಡೆಸಲು ಆಗದಿದ್ರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ: ಯತ್ನಾಳ್ ಕಿಡಿ

ಸಾರಾಂಶ

ಪೆಟ್ರೋಲ್ ಡೀಸೆಲ್ ದರ ಏರಿಕೆ ಖಂಡಿಸಿ ವಿಜಯಪುರ ಹೊರವಲಯದಲ್ಲಿ ಹೆದ್ದಾರಿ ತಡೆದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ವಿಜಯಪುರ (ಜೂ.22): ಬ್ರಿಟಿಷ್ ಮಾದರಿಯಲ್ಲಿ ಉಪ್ಪಿನ ಮೇಲೆ ಕರ ವಿಧಿಸಿದಂತೆ ದರ ಏರಿಕೆ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳನ್ನೇ ಸರಿಯಾಗಿ ನೀಡುತ್ತಿಲ್ಲ. ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ಲಾಭ ಎಂದು ಅಧಿಕಾರಿಗಳು ಹೇಳಿದ್ದಾರೆ. ಹಾಗಾದರೆ ಕೇವಲ ಮಹಿಳೆಯರಿಗೆ ಮಾತ್ರ ಗ್ಯಾರಂಟಿ ನೀಡಿದರೆ ಸಾಲದು. ಬಿಪಿಎಲ್ ಕಾರ್ಡಿನ ಪುರುಷರಿಗಾದರೂ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡಲಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದರು.

ಪೆಟ್ರೋಲ್, ಡಿಸೇಲ್ ದರ ಏರಿಕೆ ಖಂಡಿಸಿ ವಿಜಯಪುರನಗರದ ಹೊರವಲಯದ ಹೈವೇಯಲ್ಲಿ ಇಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಸಿಎಂ ಡಿಸಿಎಂ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು. ಈ ವೇಳೆ  ಶಾಸಕ ಯತ್ನಾಳ್ ಮಾತನಾಡಿದ ಯತ್ನಾಳ್, ಗ್ಯಾರಂಟಿ ಯೋಜನೆ ಜಾರಿಗೆ ತಂದು ಸರ್ಕಾರದ ಖಜಾನೆ ಖಾಲಿಯಾಗಿದೆ. ಇದೀಗ ಗ್ಯಾರಂಟಿ ಯೋಜನೆ ಅರ್ಧಕ್ಕೆ ಬಂದ್ ಮಾಡಿದರೆ ಅಪಾಯ ಎಂದು ಮುಂದುವರಿಸಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನಾನು, ಪ್ರಿಯಾಂಕ್ ಖರ್ಗೆ ಅಭಿವೃದ್ಧಿ ಬಗ್ಗೆ ಮಾತ್ರ ಮಾತಾಡ್ತೇವೆ: ಸಚಿವ ಶರಣ್ ಪ್ರಕಾಶ್ ಪಾಟೀಲ್

ಚುನಾವಣೆ ಪೂರ್ವ ರಾಹುಲ್ ಗಾಂಧಿ ಟಕಟಕಾ ಎಂದು ಭರವಸೆ ನೀಡಿದ್ದರು. ಈಗ ಟಕಟಕ ಕೊಡ್ತಿರೋ ಪಟಾಪಟ್ ಕೊಡಬೇಕೋ ಎಂದು ಮಹಿಳೆಯರು ರಾಹುಲ್ ಗಾಂಧಿಯನ್ನ ಕೇಳಬೇಕು. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಹಗಲು ದರೋಡೆ ನಡೆಸುತ್ತಿದೆ. ಎಲ್ಲಾ ಇಲಾಖೆಗಳಲ್ಲೂ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ, ಜಮೀನು ಹಗರಣ ನಡೆಯುತ್ತಿದೆ. ಕಂದಾಯ ಇಲಾಖೆ ಸಚಿವರ ಕ್ಷೇತ್ರದಲ್ಲಿ ಕೋಟಿ ಕೋಟಿ ಬೆಲೆ ಜಮೀನು ನಕಲಿ ದಾಖಲೆ ಮೂಲಕ ಬೇರೆಯವರಿಗೆ ನೀಡಲಾಗಿದೆ. ಇದರಲ್ಲಿ ಇಬ್ಬರು ಸಚಿವರು ಭಾಗಿಯಾಗಿದ್ದಾರೆ. ಈ ಕುರಿತು ನಾನು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇನೆ. ನಕಲಿ ದಾಖಲೆ ಜಮೀನು ಕಬಳಿಕೆ ಕುರಿತು ತನಿಖೆ ಮಾಡಬೇಕ. ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಗಜಕೇಸರಿ ಯೋಗ ಎಂದು ಎಪಿಎಂಸಿ ಸಚಿವ ಶಿವಾನಂದ ಪಾಟೀಲ್ ಹಣ ವಸೂಲಿ ಮಾಡಿದ್ದಾರೆ. ಆದರೆ‌ ವ್ಯಾಪಾರಸ್ಥರು‌ ಹೆದರಿ ಬಾಯಿ ಬಿಡುತ್ತಿಲ್ಲ. ಜನರಲ್ಲಿ ಭಯ ಹುಟ್ಟಿಸಿ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
 
ಇನ್ನು ವಾಲ್ಮೀಕಿ ನಿಗಮದ ಹಗರಣ ಬಗ್ಗೆ ಹೇಳುವುದೇ ಬೇಡ 187 ಕೋಟಿ ರೂಪಾಯಿ ವಂಚನೆ ಆಗಿದೆ. ಎಸ್‌ಟಿ ಸಮುದಾಯದ ಅಭಿವೃದ್ಧಿಗೆ ಬಳಕೆಯಾಗಬೇಕಿದ್ದ ಹಣ ಆಂಧ್ರದಲ್ಲಿ ಚುನಾವಣೆ ಸಲುವಾಗಿ ಜಮಾ ಆಗಿದೆ. ಜ್ಯುವೆಲ್ಲರಿ, ಬಾರ್ ಹಾಗೂ ಪೆಟ್ರೋಲ್ ಬಂಕ್‌ನಲ್ಲಿ ಒಟ್ಟು 18 ಖಾತೆಗಳಿಗೆ ಜಮೆ ಆಗಿದೆ. ಕಾಂಗ್ರೆಸ್‌ನವರು ಲೂಟಿ ಹೊಡೆಯುವುದರಲ್ಲಿ ನಿಸ್ಸೀಮರು. ಇಷ್ಟೆಲ್ಲ ಲೂಟಿ ಹೊಡೆದರೂ ತಾವು ಹಿಂದೂಳಿದವರ ಪರ, ಬಡವರ ಪರ ಅಂತಾ ಹೇಳಿಕೊಳ್ತಿರೋ ನಾಚಿಕೆಯಾಗಬೇಕು. ಬಡವರು ರೈತರೇ ಇಂತಹ ಭ್ರಷ್ಟರಿಗೆ ಪಾಠ ಕಲಿಸಬೇಕು ಎಂದು ವಾಗ್ದಾಳಿ ನಡೆಸಿದರು.

ಇನ್ನು ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ ಎಂಬ ವಿಚಾರವನ್ನ ತಳ್ಳಿಹಾಕಿದ ಯತ್ನಾಳ್. ನಾವು ಸಂವಿಧಾನ ಬದಲಾವಣೆ ಮಾಡೊಲ್ಲ. ಸೂರ್ಯ ಚಂದ್ರರಿರೋವರೆಗೂ ಬದಲಾಗೊಲ್ಲ. ನಾವು ಅಧಿಕಾರಕ್ಕೆ ಬಂದಿರೋದು ಸಂವಿಧಾನ ಬದಲಾಯಿಸಲು ಅಲ್ಲ, ಅಂಬೇಡ್ಕರ್ ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆ ಎಂದು ಭರವಸೆ ನೀಡಿದರು.

ವಕ್ಫ್ ಆಸ್ತಿ ಕುರಿತು ಗುಡುಗಿದ ಯತ್ನಾಳ್:

ಇದೇ ವೇಳೆ ವಕ್ಫ್ ಆಸ್ತಿ ಕುರಿತು ಪ್ರಸ್ತಾಪಿಸಿದ ಯತ್ನಾಳ್, ದೇಶದಲ್ಲಿ 12 ಲಕ್ಷ ಎಕರೆ ಜಮೀನು ವಕ್ಫ್ ಆಸ್ತಿ ಇದೆ. ಇದನ್ನು‌ ಮಾಜಿ   ಪ್ರಧಾನಿ ದಿ.ನೆಹರೂ ಮಾಡಿದ್ದಾರೆ. ವಕ್ಫ್‌ನವರು ಇದು ನಮ್ಮ ಆಸ್ತಿ ಎಂದರೆ ನ್ಯಾಯಾಲಯಕ್ಕೆ ಹೋಗಲಾಗೊಲ್ಲ. ವಿಶೇಷ ನ್ಯಾಯಾಲಯಕ್ಕೆ ಹೋಗಬೇಕು. ಅಲ್ಲಿ ನ್ಯಾಯವಾದಿಯೂ ಮುಸ್ಲಿಂ ಇರುತ್ತಾನೆ. ಎಲ್ಲರೂ ಅವರೇ ಅಲ್ಲಿ ನಮಗೆ ನ್ಯಾಯ ಸಿಗೊಲ್ಲ. ನಮಗೆ ನೆಹರು ಮಾಡೆಲ್ ಬೇಡ, ನಮಗೆ ಮೋದಿ ಯೋಜನೆ ಬೇಕು. ವಿಜಯಪುರದಲ್ಲಿ ವಕ್ಫ್ ಆಸ್ತಿ ಕುರಿತು ಹೈಕೋರ್ಟ್‌ಗೆ ಹೋಗುತ್ತೇನೆ. ದೇಶದ 12 ಲಕ್ಷ ಎಕರೆ ವಕ್ಫ್ ಆಸ್ತಿ ಬಡವರಿಗೆ ಹೋಗಬೇಕು. ಬಡವರಿಗೆ ಮನೆ ನಿರ್ಮಾಣ ಮಾಡಲು ಬಳಕೆಯಾಗಬೇಕು ಎಂದು ಆಗ್ರಹಿಸಿದರು.

ಶಿವಮೊಗ್ಗ: ಗೋವುಗಳ ತಲೆಬುರುಡೆ, ಮೂಳೆ ತುಂಬಿದ ಚೀಲಗಳು ನದಿಯಲ್ಲಿ ಪತ್ತೆ!

ಕಾಂಗ್ರೆಸ್ ದಿವಾಳಿಯಾಗಿದೆ. ಅನುದಾನ ಇಲ್ಲದೆ ಅಭಿವೃದ್ಧಿ ಇಲ್ಲದೇ ಆಡಳಿತ ಪಕ್ಷದ ಶಾಸಕರು ರೋಸಿಹೋಗಿದ್ದಾರೆ. ಸರ್ಕಾರದ ವಿರುದ್ಧ ಅವರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸಿಎಂ, ಡಿಸಿಎಂ ಹಣ ನೀಡುತ್ತಿಲ್ಲ. ಯಾವುದೇ ಅಭಿವೃದ್ಧಿ ಕಾಮಗಾರಿ ಇಲ್ಲ. ಸಿಎಂ ಸಿದ್ದರಾಮಯ್ಯಗೆ ಆಡಳಿತ ಮಾಡಲು ಆಗದಿದ್ರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹಿಂದೂಗಳ ಮೇಲೆ ಹಲ್ಲೆ, ಕೊಲೆಗಳಾಗುತ್ತಿವೆ. ಇಷ್ಟಾದರೂ ಮತಬ್ಯಾಂಕ್ ಆಸೆ ಕಣ್ಮುಚ್ಚಿ ಕುಳಿತಿದೆ ಎಂದು ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್