'ಎಚ್ಡಿಕೆ ಸಿಎಂ ಆಗಿದ್ದಾಗ ಫೋನ್‌ ಕದ್ದಾಲಿಕೆ'; ರಾಜ್ಯ ಸರ್ಕಾರ ಫೋನ್ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು!

Published : May 23, 2024, 08:14 AM ISTUpdated : May 23, 2024, 08:24 AM IST
'ಎಚ್ಡಿಕೆ ಸಿಎಂ ಆಗಿದ್ದಾಗ ಫೋನ್‌ ಕದ್ದಾಲಿಕೆ'; ರಾಜ್ಯ ಸರ್ಕಾರ ಫೋನ್ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು!

ಸಾರಾಂಶ

ಫೋನ್‌ ಕದ್ದಾಲಿಕೆ ವಿಚಾರವಾಗಿ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ನಮ್ಮ ಸರ್ಕಾರದ ವಿರುದ್ಧ ಫೋನ್‌ ಕದ್ದಾಲಿಕೆ ಆರೋಪ ಮಾಡುತ್ತಿರುವವರು ಅಧಿಕಾರದಲ್ಲಿದ್ದಾಗ ಯಾವ ರೀತಿ ಪ್ರಕರಣ ನಡೆದಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.

ಬೆಂಗಳೂರು (ಮೇ.23): ಫೋನ್‌ ಕದ್ದಾಲಿಕೆ ವಿಚಾರವಾಗಿ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ನಮ್ಮ ಸರ್ಕಾರದ ವಿರುದ್ಧ ಫೋನ್‌ ಕದ್ದಾಲಿಕೆ ಆರೋಪ ಮಾಡುತ್ತಿರುವವರು ಅಧಿಕಾರದಲ್ಲಿದ್ದಾಗ ಯಾವ ರೀತಿ ಪ್ರಕರಣ ನಡೆದಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಫೋನ್‌ ಕದ್ದಾಲಿಕೆ ವಿಚಾರವಾಗಿ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವವರು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದರು. ಅದೇ ರೀತಿ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಗೃಹ ಸಚಿವರಾಗಿದ್ದರು. ಇವರೆಲ್ಲ ಇದೀಗ ಫೋನ್‌ ಕದ್ದಾಲಿಕೆ ಬಗ್ಗೆ ಆರೋಪಿಸುತ್ತಿದ್ದಾರೆ. ಸುಮ್ಮನೇ ಮಾತನಾಡುವ ಬದಲು ಫೋನ್‌ ಕದ್ದಾಲಿಕೆ ಕುರಿತು ಗೃಹ ಸಚಿವರಿಗೆ ಲಿಖಿತ ದೂರು ನೀಡಲಿ. ಯಾರ್‍ಯಾರ ಕಾಲದಲ್ಲಿ ಏನೆಲ್ಲ ಆಗಿತ್ತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.

News Hour: ಪ್ರಜ್ವಲ್‌ ರೇವಣ್ಣಗೆ ಡೆಡ್‌ಲೈನ್‌ ನೀಡಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ!

 

ಫೋನ್ ಕದ್ದಾಲಿಕೆ ವಿಚಾರವಾಗಿ ಸಿಎಂ, ಡಿಸಿಎಂ ಜತೆಯಲ್ಲಿರುವವರೇ ಮಾಹಿತಿ ನೀಡಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ, ಅವರಿಗೆ ಯಾರೆಲ್ಲ ಮಾಹಿತಿ ನೀಡಿದ್ದಾರೆ ಎಂಬ ಬಗ್ಗೆ ಒಂದು ಪಟ್ಟಿ ಮಾಡಿ ಅಫಿಡವಿಟ್‌ ಸಲ್ಲಿಸಲಿ ಎಂದು ವ್ಯಂಗ್ಯವಾಡಿದರು.

ಸಚಿವರಿಗೆ ಔತಣ ಕೂಟ ಏರ್ಪಡಿಸಿದ ಬಗ್ಗೆ ಮಾತನಾಡಿ, ಸಚಿವರಿಗೆ ಭೋಜನಕೂಟ ಏರ್ಪಡಿಸಿದ್ದರಲ್ಲಿ ಬೇರೆ ಯಾವುದೇ ಅರ್ಥವಿಲ್ಲ. ಲೋಕಸಭೆ ಚುನಾವಣೆಯ ನಿರ್ವಹಣೆ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಚರ್ಚೆ ಮಾಡುವ ಉದ್ದೇಶದಿಂದ ಔತಣಕೂಟ ಏರ್ಪಡಿಸಿದ್ದೇನೆ ಎಂದರು.

ಹೆಚ್‌ಡಿಡಿ, ಕಾರ್ಯಕರ್ತರ ಮೇಲೆ ಗೌರವ ಇದ್ದರೆ, ಪ್ರಜ್ವಲ್ ತಕ್ಷಣ ಬಂದು ತನಿಖೆ ಎದುರಿಸಲಿ: ಹೆಚ್‌ಡಿಕೆ

ಲೋಕಸಭೆ ಚುನಾವಣೆ ನಂತರ ಸಚಿವರ ತಲೆದಂಡವಾಗುತ್ತದೆಯೇ ಎಂಬ ಪ್ರಶ್ನೆಗೆ, ಇಂತಹ ವಿಚಾರವನ್ನೆಲ್ಲ ಮಾಧ್ಯಮಗಳ ಮುಂದೆ ಮಾತನಾಡುವುದಕ್ಕೆ ಸಾಧ್ಯವಿಲ್ಲ ಎಂದುತ್ತರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಯಾಕೆ ಕೇಸ್ ಇಲ್ಲ? ಕೇಂದ್ರದ ವಿರುದ್ಧ ಪ್ರಿಯಾಂಕ್ ಪ್ರಶ್ನೆಗಳ ಸುರಿಮಳೆ!
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್