ಚುನಾವಣಾ ಫಲಿತಾಂಶದ ದಿನಾಂಕ ಮುಂದೂಡಿಕೆ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ
ಬೆಂಗಳೂರು (ನ.04): ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯ ಮತ ಎಣಿಕೆ ಹಾಗೂ ಫಲಿತಾಂಶ ಘೋಷಣೆ ದಿನಾಂಕ ಮುಂದೂಡಿರುವ ಕ್ರಮ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಈ ಕುರಿತು ‘ದಿ ನ್ಯೂಸ್ ಇಂಡಿಯಾ ವೋಟರ್ಸ್ ಫೋರಂ’ ಅರ್ಜಿ ಸಲ್ಲಿಸಿದ್ದು, ಸೋಮವಾರ ಅದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರ ನೇತೃತ್ವದ ವಿಭಾಗೀಯ ಪೀಠ, ಪ್ರತಿವಾದಿಗಳಾದ ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗ, ಚುನಾವಣಾಧಿಕಾರಿ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿತು.
ಬೈ ಎಲೆಕ್ಷನ್: BJP, JDS, ಕಾಂಗ್ರೆಸ್ ಸೋಲು-ಗೆಲುವಿಗೆ ಕಾರಣವಾಗಬಹುದಾದ ಅಂಶಗಳು..
ಅಲ್ಲದೆ, ಮತ ಪೆಟ್ಟಿಗೆಗಳಿರುವ ಸ್ಥಳದಲ್ಲಿರುವ ಭದ್ರತಾ ವ್ಯವಸ್ಥೆಯ ಕುರಿತು ಮಾಹಿತಿ ಒಳಗೊಂಡ ಪ್ರಮಾಣಪತ್ರ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿ, ವಿಚಾರಣೆಯನ್ನು ನ.5ಕ್ಕೆ ಮುಂದೂಡಿತು.