ಶ್ರೇಯಸ್‌ ಪಟೇಲ್‌, ಪ್ರಭಾ ಮಲ್ಲಿಕಾರ್ಜುನ್ ಸಂಸದ ಸ್ಥಾನ ವಜಾ ಕೋರಿ ಹೈಕೋರ್ಟ್‌ಗೆ ಅರ್ಜಿ!

By Kannadaprabha News  |  First Published Jul 20, 2024, 3:31 PM IST

ಹಾಸನ ಸಂಸದ ಶ್ರೇಯಸ್‌ ನಾಮಪತ್ರ ಕ್ರಮಬದ್ಧವಾಗಿಲ್ಲವೆಂದು ಆಕ್ಷೇಪ. ಗ್ಯಾರಂಟಿ ಆಮಿಷ, ಪ್ರಭಾ ಮಲ್ಲಿಕಾರ್ಜುನ ವಿರುದ್ಧ ಗಾಯತ್ರಿ ದೂರು.


ಬೆಂಗಳೂರು (ಜು.20): ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಂಗ್ರೆಸ್‌ನ ಶ್ರೇಯಸ್‌ ಎಂ.ಪಟೇಲ್‌ ಮತ್ತು ದಾವಣಗೆರೆ ಕ್ಷೇತ್ರದಿಂದ ಚುನಾಯಿತರಾಗಿರುವ ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಚುನಾವಣಾ ತಕರಾರು ಅರ್ಜಿ ಸಲ್ಲಿಕೆಯಾಗಿವೆ.

ಶ್ರೇಯಸ್‌ ಪಟೇಲ್‌ ಆಯ್ಕೆ ಪ್ರಶ್ನಿಸಿ ಕೋರಿ ವಕೀಲ ದೇವರಾಜೇಗೌಡ ಪುತ್ರ ಡಿ.ಚರಣ್‌, ದಾವಣಗೆರೆ ಸಂಸದರಾಗಿ ಡಾ. ಪ್ರಭಾ ಮಲ್ಲಿಕಾರ್ಜುನ್‌ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜಿ.ಎಸ್‌. ಗಾಯತ್ರಿ ಸಿದ್ದೇಶ್ವರ್‌ ಪ್ರತ್ಯೇಕ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗಳು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಸುಪ್ರೀಂ ಕಟ್ಟುನಿಟ್ಟಿನ ಆದೇಶದ ಬೆನ್ನಲ್ಲೇ ನೀಟ್‌ ಫಲಿತಾಂಶ ಪ್ರಕಟ, ವಿದ್ಯಾರ್ಥಿಗಳ ಗುರುತು ಗೌಪ್ಯವಿಟ್ಟ ಎನ್‌ಟಿಎ

Tap to resize

Latest Videos

undefined

ಶ್ರೇಯಸ್‌ ಪಟೇಲ್‌ ಅವರ ನಾಮಪತ್ರ ಕ್ರಮಬದ್ಧವಾಗಿಲ್ಲ. ಅವರು ಹಿಂದಿನ ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸಿಲ್ಲ. ಪ್ರಮಾಣ ಪತ್ರದಲ್ಲಿ ಸಂಪೂರ್ಣ ಮಾಹಿತಿ ನೀಡಿಲ್ಲ. ಚುನಾವಣಾ ವೆಚ್ಚದ ಬಗ್ಗೆಯೂ ತಪ್ಪು ಮಾಹಿತಿ ನೀಡಿದ್ದಾರೆ. ನಿಗದಿಗಿಂತ ಹೆಚ್ಚಿನ ಹಣ ವ್ಯಯಿಸಿದ್ದು, ಸರಿಯಾದ ಲೆಕ್ಕವನ್ನು ಆಯೋಗಕ್ಕೆ ಸಲ್ಲಿಕೆ ಮಾಡಿಲ್ಲ. ಹಾಗಾಗಿ ಅವರ ಆಯ್ಕೆಯನ್ನೇ ರದ್ದುಗೊಳಿಸಬೇಕು ಎಂದು ಅರ್ಜಿದಾರ ಡಿ.ಚರಣ್‌ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.

ಕೊಲೆಗಾರನ ಬೆನ್ನಟ್ಟಲು ಮಳೆಯನ್ನೂ ಲೆಕ್ಕಿಸದೆ 8 ಕಿ.ಮೀ ಓಡಿ ಮಹಿಳೆಯ ಪ್ರಾಣ ಉಳಿಸಿದ ಕರ್ನಾಟಕ ಪೊಲೀಸ್ ಶ್ವಾನ!

ಪ್ರಭಾ ಮಲ್ಲಿಕಾರ್ಜುನ್‌ ಅವರು ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಕಾರ್ಡ್‌ ವಿತರಿಸಿ ಮತದಾರರಿಗೆ ಆಮಿಷವೊಡ್ಡಿದ್ದಾರೆ. ಬಡ ಮಹಿಳೆಯರಿಗೆ 1 ಲಕ್ಷ ರು. ಕೊಡುವುದಾಗಿ ಭರವಸೆ ನೀಡಿದ್ದರು. ಪ್ರತಿ ತಿಂಗಳು 8,500 ಹಣ ನೀಡುವುದಾಗಿ ತಿಳಿಸಿದ್ದರು. ಇದು ಪ್ರಜಾಪ್ರತಿನಿಧಿ ಕಾಯ್ದೆಗೆ ವಿರುದ್ಧವಾಗಿದೆ. ಮತದಾರರಿಗೆ ಲಂಚದ ಆಮಿಷ ಒಡ್ಡಿ ಮತ್ತು ಚುನಾವಣಾ ಅಕ್ರಮ ನಡೆಸಿ ಅವರು ಆಯ್ಕೆಯಾಗಿದ್ದಾರೆ. ಆದ್ದರಿಂದ ಅವರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಗಾಯತ್ರಿ ಸಿದ್ದೇಶ್ವರ್‌ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.

click me!