ಮೋದಿ, ಶಾ, ಗಡ್ಕರಿ ಸೇರಿ 40 ಮಂದಿ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್

Published : Apr 19, 2023, 05:55 PM ISTUpdated : Apr 19, 2023, 06:01 PM IST
ಮೋದಿ, ಶಾ, ಗಡ್ಕರಿ ಸೇರಿ 40 ಮಂದಿ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್

ಸಾರಾಂಶ

ಬಿಜೆಪಿ ತನ್ನ  ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ರಿಲೀಸ್ ಮಾಡಿದೆ ಒಟ್ಟು 40 ಮಂದಿಯ ಪಟ್ಟಿಯಲ್ಲಿ ಮುಖ್ಯವಾಗಿ ಕೇಂದ್ರದಿಂದ ಮೋದಿ, ಅಮಿತ್ ಶಾ ಸೇರಿ ಹಲವು ಮಂದಿ ಭಾಗವಹಿಸಲಿದ್ದಾರೆ.

ಬೆಂಗಳೂರು (ಏ.19): ಕರ್ನಾಟಕದಲ್ಲಿ ಚುನಾವಣಾ ಕಾವು ರಂಗೇರಿದೆ. ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಇವೆಲ್ಲದರ ನಡುವೆ ಬಿಜೆಪಿ ತನ್ನ  ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ರಿಲೀಸ್ ಮಾಡಿದೆ ಒಟ್ಟು 40 ಮಂದಿಯ ಪಟ್ಟಿಯಲ್ಲಿ ಮುಖ್ಯವಾಗಿ ಕೇಂದ್ರದಿಂದ ಮೋದಿ, ಅಮಿತ್ ಶಾ ಸೇರಿ ಹಲವು ಮಂದಿ ಭಾಗವಹಿಸಲಿದ್ದಾರೆ. ಮಾತ್ರವಲ್ಲ ಇತರ ರಾಜ್ಯಗಳಿಂದಲೂ ಮುಖ್ಯಮಂತ್ರಿಗಳು, ಗಣ್ಯರು ಬರುತ್ತಿದ್ದಾರೆ. ಜೊತೆಗೆ ಸಿನೆಮಾ ತಾರೆಯರು ಕೂಡ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಇಂತಿದೆ.
ಪ್ರಧಾನಿ ನರೇಂದ್ರ ಮೋದಿ.
ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ.
ರಕ್ಷಣಾ ಸಚಿವ ರಾಜನಾಥ್ ಸಿಂಗ್.
ಗೃಹಸಚಿವ ಅಮಿತ್ ಶಾ.
ರಾಷ್ಟ್ರೀಯ ಹೆದ್ದಾರಿ ಸಚಿವ ನಿತೀನ್ ಗಡ್ಕರಿ.
ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್.
ಸಹ ಉಸ್ತುವಾರಿ ಅಣ್ಣಾಮಲೈ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್.
ಕೇಂದ್ರ ಸಚಿವೆ ಸ್ಮೃತಿ ಇರಾನಿ.
ಆರೋಗ್ಯ ಸಚಿವ ಮನ್ಸೂಕ್ ಮಾಂಡವೀಯ.
ರಾಜ್ಯ ಉಸ್ತುವಾರಿ ಅರುಣ್ ಸಿಂಗ್.
ರಾಜ್ಯ ಸಹ ಉಸ್ತುವಾರಿ ಡಿ.ಕೆ ಅರುಣಾ.
ಯು.ಪಿ ಸಿಎಂ ಯೋಗಿ ಆದಿತ್ಯನಾಥ್.
ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್.
ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್.
ಅಸ್ಸಾಂ ಸಿಎಂ ಹಿಮಂತ್ ಬಿಸ್ವಾಸ್ ಶರ್ಮ.
ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ.
ಕೇಂದ್ರ ರಾಜ್ಯಖಾತೆ ಸಚಿವರಾದ ಶೋಭಾ ಕರಂದ್ಲಾಜೆ, ನಾರಾಯಣಸ್ವಾಮಿ, ಭಗವಂತ ಖೂಬಾ.
ಮಾಜಿ ಸಿಎಂ ಯಡಿಯೂರಪ್ಪ 
ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ 
ಸಿಎಂ ಬಸವರಾಜ್ ಬೊಮ್ಮಾಯಿ 
ಮಾಜಿ ಸಿಎಂ ಸದಾನಂದಗೌಡ 
ಮಾಜಿ ಡಿಸಿಎಂ ಈಶ್ವರಪ್ಪ
ಸಚಿವ ಗೋವಿಂದ ಕಾರಜೋಳ 
ಆರ್ ಅಶೋಕ್,‌ ಸಚಿವ.
ಶ್ರೀರಾಮುಲು, ಸಚಿವ.
ಕೋಟಾ ಶ್ರೀನಿವಾಸ್ ಪೂಜಾರಿ, ಸಚಿವ.
ಅರವಿಂದ್ ಲಿಂಬಾವಳಿ, ಮಾಜಿ ಸಚಿವ.
ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ.
ಉಮೇಶ್ ಜಾದವ್, ಸಂಸದ.
ಛಲವಾದಿ ನಾರಾಯಣಸ್ವಾಮಿ, ಎಸ್ಸಿ ಮೋರ್ಚಾ ಅಧ್ಯಕ್ಷ.
ಎನ್ ರವಿಕುಮಾರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ.
ಜಿ.ವಿ ರಾಜೇಶ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ.
ಜಗ್ಗೇಶ್, ನಟ, ರಾಜ್ಯಸಭಾ ಸದಸ್ಯ.
ನಟಿಯರಾದ ಶೃತಿ, ತಾರಾ ಅನುರಾಧ.

ಯಾವುದೇ ಕಾರಣಕ್ಕೂ ಜಗದೀಶ್ ಶೆಟ್ಟರ್ ಗೆಲ್ಲಬಾರದು, ವರಿಷ್ಠರ ಸಭೆಯಲ್ಲಿ ಜೆಪಿ ನಡ್ಡಾ ಖಡಕ್

ಇನ್ನು ನಟ ಸುದೀಪ್ ಅವರು ಇಂದು ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ಅವರ ಪರವಾಗಿ ಪ್ರಚಾರ ನಡೆಸಿದರು. ಮೊದಲೇ ನಟ ಸುದೀಪ್ ಹೇಳಿದಂತೆ ಅವರು ಯಾವುದೇ ಪಕ್ಷದ ಪರ ಪ್ರಚಾರ ನಡೆಸುತ್ತಿಲ್ಲ. ಬದಲಾಗಿ ಬೊಮ್ಮಾಯಿ ಅವರಿಗೆ ಪರಮಾಪ್ತ ಆಗಿರುವುದರಿಂದ ಈ ಪ್ರಚಾರ ನಡೆಸುತ್ತಿದ್ದಾರೆ. ಜೊತೆಗೆ ಬೊಮ್ಮಾಯಿ ಯಾರಿಗೆ ಹೇಳುವರೋ ಅವರಿಗೆ ನಾನು ಪ್ರಚಾರ ಮಾಡುತ್ತೇನೆ ಎಂದು ಸುದೀಪ್ ಹೇಳಿದ್ದರು. ಅದರಂತೆ ಇಂದು ಶಿಗ್ಗಾಂವಿಯಲ್ಲಿ ಸುದೀಪ್ ಬೊಮ್ಮಾಯಿ ಪರ ಪ್ರಚಾರ ನಡೆಸಿದರು. ಜೆ.ಪಿ ನಡ್ಡಾ ಕೂಡ ಜೊತೆಗಿದ್ದರು.

ವರುಣಾದಲ್ಲಿ ಸಿದ್ದರಾಮಯ್ಯ ಹವಾ, ತಾತನ ಜೊತೆ ಮೊಮ್ಮಗನ ರಾಜಕೀಯ ಕ್ರೇಜ್ ನೋಡಿ!

ಏಪ್ರಿಲ್‌ 13 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ.  ಏಪ್ರಿಲ್‌ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್‌ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್‌ 24 ಆಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ