ರಾಷ್ಟ್ರಪತಿ ಮುರ್ಮು ಭೇಟಿ ಮಾಡಿದ ಮೋದಿ, ಶಾ : ಪ್ರತ್ಯೇಕ ಚರ್ಚೆ

Kannadaprabha News   | Kannada Prabha
Published : Aug 04, 2025, 02:26 AM IST
MODI_MURMU

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಭಾನುವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ, ಕೆಲ ಕಾಲ ಮಾತುಕತೆ ನಡೆಸಿದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಭಾನುವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ, ಕೆಲ ಕಾಲ ಮಾತುಕತೆ ನಡೆಸಿದರು.

ಈ ಬಗ್ಗೆ ರಾಷ್ಟ್ರಪತಿ ಭವನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಉಭಯ ನಾಯಕರು ಒಂದೇ ದಿನ ಭೇಟಿ ಮಾಡಿರುವುದರ ಹಿಂದಿನ ಕಾರಣ ಸ್ಪಷ್ಟವಾಗಿಲ್ಲ. ಆದರೆ ಸದ್ಯ ನಡೆಯುತ್ತಿರುವ ಮುಂಗಾರು ಅಧಿವೇಶನ, ಬಿಹಾರ ಮತಪಟ್ಟಿ ಪರಿಷ್ಕರಣೆ ವಿವಾದ, ಟ್ರಂಪ್ ತೆರಿಗೆ ನೀತಿ ಕಾವೇರಿರುವ ನಡುವೆ ನಡೆದಿರುವ ಈ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ.

ಸ್ವಾತಂತ್ರ್ಯ ದಿನಕ್ಕೆ ಥೀಮ್‌ ಸೂಚಿಸಿ : ಸಾರ್ವಜನಿಕರಿಗೆ ಪ್ರಧಾನಿ ಮೋದಿ ಆಹ್ವಾನ

ಸ್ವಾತಂತ್ರ್ಯೋತ್ಸವಕ್ಕೆ ಇನ್ನು 2 ವಾರವಷ್ಟೇ ಬಾರಿ ಇದೆ. ಈ ಹಿನ್ನೆಲೆಯಲ್ಲಿ, ಈ ಬಾರಿಯ ಸ್ವಾತಂತ್ರ್ಯ ದಿನದಂದು ಯಾವ ವಿಷಯದ ಬಗ್ಗೆ ತಾವು ಮಾತನಾಡಬಹುದು ಎಂಬ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋದಿ, ‘ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ನೀವು ಯಾವ ವಿಷಯ ಅಥವಾ ವಿಚಾರಗಳ ಮೇಲೆ ಬೆಳಕು ಚೆಲ್ಲಬೇಕು ಎಂದು ಬಯಸುತ್ತೀರಿ?’ ಎಂದು ಕೇಳಿದ್ದಾರೆ. ಜನರು ಮೈಗೌ ಅಥವಾ ನಮೋ ಆ್ಯಪ್‌ಗಳ ಮೂಲಕ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಬಹುದಾಗಿದೆ.

₹ 1ಕ್ಕೆ 1 ತಿಂಗಳು 4ಜಿ ಸೇವೆ : ಬಿಎಸ್ಸೆನ್ನೆಲ್‌ ಹೊಸ ಪ್ಲ್ಯಾನ್‌

ನವದೆಹಲಿ: ಗ್ರಾಹಕರನ್ನು ಸೆಳೆಯುವ ಸಲುವಾಗಿ, ಒಂದೊಮ್ಮೆ ಮನೆಮಾತಾಗಿದ್ದ ಬಿಎಸ್‌ಎನ್‌ಎಲ್‌ ಇದೀಗ 1 ತಿಂಗಳ 4ಜಿ ಸೇವೆಯನ್ನು ಕೇವಲ 1 ರು.ಗೆ ಒದಗಿಸುವ ಹೊಸ ಯೋಜನೆಯನ್ನು ಘೋಷಿಸಿದೆ. ಸ್ವಾತಂತ್ರ್ಯ ದಿನದ ಅಂಗವಾಗಿ ಬಿಡುಗಡೆಯಾಗಿರುವ ಇದಕ್ಕೆ, ‘ಫ್ರೀಡಂ ಪ್ಲ್ಯಾನ್‌’ ಎಂದು ಹೆಸರಿಡಲಾಗಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ
ಬಂಗಾರಪ್ಪ ಅವರ ಹೆಸರಿಗೆ ತಕ್ಕ ರೀತಿ ಮಧು ಮಾತನಾಡಲಿ: ಆರಗ ಜ್ಞಾನೇಂದ್ರ ತಿರುಗೇಟು