ಪ್ರಧಾನಿ ಮೋದಿ, ಬಿಜೆಪಿಯಿಂದ ಕಾಂಗ್ರೆಸ್ ಗ್ಯಾರಂಟಿ ನಕಲು: ಸಚಿವ ಎಂ.ಬಿ.ಪಾಟೀಲ್

Published : Feb 22, 2025, 12:21 AM ISTUpdated : Feb 22, 2025, 07:07 AM IST
ಪ್ರಧಾನಿ ಮೋದಿ, ಬಿಜೆಪಿಯಿಂದ ಕಾಂಗ್ರೆಸ್ ಗ್ಯಾರಂಟಿ ನಕಲು: ಸಚಿವ ಎಂ.ಬಿ.ಪಾಟೀಲ್

ಸಾರಾಂಶ

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿ ಹಾಗೂ ಬಿಜೆಪಿ ನಕಲು ಮಾಡಿದ್ದಾರೆ. ಅನ್ಯ ರಾಜ್ಯಗಳ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆ ಘೋಷಿಸಿದ್ದಾರೆ. 

ವಿಜಯಪುರ (ಫೆ.21): ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿ ಹಾಗೂ ಬಿಜೆಪಿ ನಕಲು ಮಾಡಿದ್ದಾರೆ. ಅನ್ಯ ರಾಜ್ಯಗಳ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆ ಘೋಷಿಸಿದ್ದಾರೆ. ಬಿಜೆಪಿ ಹಾಗೂ ಮೋದಿ ಘೋಷಿಸಿದರೆ ನಡೆಯುತ್ತದೆ. ಕಾಂಗ್ರೆಸ್‌ನ ಯೋಜನೆ ಏಕೆ ನಡೆಯಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಪ್ರಶ್ನಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಕೇಳಿ, ಮೋದಿ ಹಾಗೂ ಬಿಜೆಪಿಯವರು ಬೇರೆ ಬೇರೆ ರಾಜ್ಯಗಳ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆ ಘೋಷಿಸಿದ್ದಾರೆ. 

ಬಿಜೆಪಿ ಹಾಗೂ ಮೋದಿ ಘೋಷಿಸಿದರೆ ನಡೆಯುತ್ತದೆ. ಕಾಂಗ್ರೆಸ್‌ನ ಯೋಜನೆ ಏಕೆ ನಡೆಯಬಾರದು? ಅದು ಬಡವರಿಗೆ, ಮಹಿಳೆಯರಿಗೆ ಸಶಕ್ತರನ್ನಾಗಿ ಮಾಡಲು ನಾವು ಗ್ಯಾರಂಟಿ ಕೊಟ್ಟಿದ್ದೇವೆ. ಅವು ಮುಂದುವರಿಯಲಿದ್ದು, ಅಭಿವೃದ್ಧಿ ಕೂಡ ಆಗಲಿದೆ ಎಂದು ಸಚಿವೆ ಕರಂದ್ಲಾಜೆ ವಿರುದ್ಧ ವಾಗ್ದಾಳಿ ನಡೆಸಿದರು. ಗೃಹ ಲಕ್ಷ್ಮಿ ಯೋಜನೆಯನ್ನು ಉಳ್ಳವರು ತೆಗೆದುಕೊಳ್ಳಬಾರದು. ಬಡವರಿಗೆ ಹೋಗಬೇಕು. ಶ್ರೀಮಂತರು ಸ್ವಯಂ ಪ್ರೇರಿತವಾಗಿ ಯೋಜನೆ ಬಿಟ್ಟು ಕೊಡಬೇಕು. ಇಲ್ಲವೇ ಸರ್ಕಾರವೇ ಅಂಥವರನ್ನು ತೆಗೆದು ಹಾಕಬೇಕು ಎಂದರು. ರಾಜ್ಯದಲ್ಲಿ ಗುತ್ತಿಗೆದಾರರ ಬಾಕಿ ಹಣ ವಿಚಾರ ಬಗ್ಗೆ ಪ್ರತಿಕ್ರಿಯಿಸಿ, ಗುತ್ತಿಗೆದಾರರ ಸಮಸ್ಯೆಗೆ ಯಾರು ಕಾರಣ? 

ಈ ಹಿಂದಿನ ಬಿಜೆಪಿ ಸರ್ಕಾರ ಅನಧಿಕೃತವಾಗಿ ಗುತ್ತಿಗೆ ನೀಡಿದೆ. ಬಜೆಟ್ ಇಲ್ಲದೆ ಟೆಂಡರ್ ಕರೆದು ಕಮೀಷನ್ ಹೊಡೆದು ಹೋಗಿದ್ದಾರೆ. ಅವರ ಪಾಪದ ಕೊಡವನ್ನು ನಾವು ಹೊರುತ್ತಿದ್ದೇವೆ ಎಂದು ಕಿಡಿಕಾರಿದರು. ಹಿಂದಿನ ಬಿಜೆಪಿ ಸರ್ಕಾರದ ಅವಾಂತರಗಳು ಒಂದೆರಡಲ್ಲ. ನೂರು ರೂಪಾಯಿ ಅನುದಾನ ಇದ್ದರೆ ಸಾವಿರ ರೂಪಾಯಿಯಷ್ಟು ಟೆಂಡರ್ ಕೊಟ್ಟಿದ್ದಾರೆ. ಬಜೆಟ್‌ಗಿಂತ ಹೆಚ್ಚಿನ ಕಾಮಗಾರಿ ಕೊಟ್ಟಿದ್ದಾರೆ. ಸಚಿವ ಸಂಪುಟದ ಅನುಮೋದನೆ ಪಡೆಯದೇ ಟೆಂಡರ್ ನೀಡಿದ್ದು ಯಾರ ತಪ್ಪು? ಅಷ್ಟೇ ಏಕೆ ವೈದ್ಯಕೀಯ ಇಲಾಖೆಯಲ್ಲಿಯೂ ಇಂಥದ್ದೇ ಹಗರಣ ಆಗಿದೆ. ಅದೆಲ್ಲದರ ತನಿಖೆಯಾಗುತ್ತಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಹೆಸರಿಗೆ ಕಳಂಕ ತರಲು ರಾಜಕೀಯ ಪಿತೂರಿ: ಸಚಿವ ಮಹದೇವಪ್ಪ

ಜಾತಿ ಗಣತಿ ವರದಿ ಜಾರಿಗೆ ವಿರೋಧವಿಲ್ಲ: ರಾಜ್ಯದಲ್ಲಿ ಜಾತಿ ಗಣತಿ ವರದಿ ಜಾರಿಗೆ ಯಾರ ವಿರೋಧವೂ ಇಲ್ಲ. ಆದರೆ, ಎಲ್ಲ ಜಾತಿಗಳ ಜನರಿಗೆ ನ್ಯಾಯ ಸಿಗಬೇಕು, ಯಾರಿಗೂ ಅನ್ಯಾಯವಾಗಬಾರದು. ಲಿಂಗಾಯತರಲ್ಲಿ ಅನೇಕ ಉಪ ಪಂಗಡಗಳಿವೆ. ಹಿಂದು ಸಾದರ, ಹಿಂದು ಬಣಜಿಗ ಹಾಗೂ ಇತರೆ ಕೆಲವು ಜಾತಿಯವರು 2 ಎಂದು ಬರೆಸಿದ್ದಾರೆ. ಹೀಗಾಗಿ ಪ್ರತ್ಯೇಕವಾಗಿ ಪರಿಗಣಿಸಿದರೆ ಲಿಂಗಾಯತರ ಸಂಖ್ಯೆ ಕಡಿಮೆ ಆಗಿದೆ. ನಾನು ವರದಿ ನೋಡಿಲ್ಲ. ನೋಡಿದ ಬಳಿಕ ಮಾತನಾಡುವೆ ಎಂದು ಸಮರ್ಥಿಸಿಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ