ಮುಸ್ಲಿಮರ ವಿಶ್ವಾಸಕ್ಕೆ ಪಡೆ​ಯಲು ಮೋದಿ ಸಲ​ಹೆ: ಯಡಿಯೂರಪ್ಪ

By Kannadaprabha News  |  First Published Jan 19, 2023, 7:04 AM IST

ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಲು ಮುಸ್ಲಿಂ ಬಂಧುಗಳನ್ನು ನಮ್ಮ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. 


ಶಿವಮೊಗ್ಗ (ಜ.19): ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಲು ಮುಸ್ಲಿಂ ಬಂಧುಗಳನ್ನು ನಮ್ಮ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ನಗ​ರ​ದ​ಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನೆ ಮನೆಗೆ ಕಾರ್ಯಕರ್ತರು ಭೇಟಿ ಮಾಡಬೇಕು ಎನ್ನುವ ಸಲಹೆಯನ್ನು ನೀಡಿದ್ದಾರೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಈಗಾಗಲೇ ನಾವು ಕೆಲಸವನ್ನು ಪ್ರಾರಂಭಿಸಿದ್ದೇವೆ. ವಿಶೇಷವಾಗಿ ಮುಸ್ಲಿಂ ಬಂಧುಗಳನ್ನು ಕೂಡ ನಮ್ಮ ಜೊತೆ ಕರೆದುಕೊಂಡು ಹೋಗಬೇಕು ಎನ್ನುವ ಸಲಹೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದಾರೆ. 

ಈಗಾಗಲೇ ನಾವು ಮುಸ್ಲಿಂ ಬಾಂಧವರನ್ನು ವಿಶ್ವಾಸಕ್ಕೆ ಪಡೆಯುತ್ತಿದ್ದೇವೆ. ನಮ್ಮ ಬಗ್ಗೆ ಅವರಿಗೂ ಗೌರವವಿದೆ. ಮುಂಬರುವ ದಿನಗಳಲ್ಲಿ ಅವರನ್ನು ಇನ್ನಷ್ಟುಸಂಪರ್ಕ ಸಾಧಿಸುವ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು. ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ದೇಶದ ಮುಂದಿನ ಮುಂದಿನ ಪರಿಸ್ಥಿತಿ ಹಾಗೂ ಮುಂದಿನ ಚುನಾವಣೆ ಗೆಲ್ಲುವ ಕುರಿತು ಚರ್ಚೆ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿಯವರು ಒಂದು ಗಂಟೆಗಳ ಕಾಲ ನಮಗೆ ಮಾರ್ಗದರ್ಶನ ನೀಡಿದರು. ಸ್ಥಳೀಯ ಕಾರ್ಯಕರ್ತರು ಹಾಗೂ ಶಾಸಕರು ಹೆಚ್ಚಿನ ಕೆಲಸ ಮಾಡಬೇಕು ಎಂದು ಮೋದಿಯವರು ಸಲಹೆ ಕೊಟ್ಟಿದ್ದು, ಬಹಳ ಉತ್ಸಾಹದಿಂದ ನಾವೆಲ್ಲರೂ ವಾಪಸ್‌ ಬಂದಿದ್ದೇವೆ. 

Tap to resize

Latest Videos

ಸಾಮಾಜಿಕ ಜಾಲತಾಣಗಳ ಅತಿ ಬಳಕೆ ಬೇಡ: ಸಿಎಂ ಬೊಮ್ಮಾಯಿ

ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಪಕ್ಷದ ಗೆಲುವಿಗಾಗಿ ಮೋದಿಜಿ ಅವರು ಹಾಗೂ ಅಮಿತ್‌ ಶಾ ಅವರು ಹೆಚ್ಚಿನ ಸಮಯವನ್ನು ಕೊಡುತ್ತಾರೆ. ಅವರ ಸಮಯವನ್ನು ಸದುಪಯೋಗಪಡಿಸಿಕೊಂಡು 140ಕ್ಕೂ ಹೆಚ್ಚು ಸ್ಥಾನವನ್ನು ಗೆದ್ದು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವನ್ನು ತರುತ್ತೇವೆ ಎಂದು ಭರವಸೆಯನ್ನು ಕೊಟ್ಟು ಬಂದಿದ್ದೇವೆ. ಆ ವಿಶ್ವಾಸವೂ ನನಗಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಬಿ.ವೈ.ವಿಜಯೇಂದ್ರ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಅಷ್ಟುಸಮಯವೂ ಇರಲಿಲ್ಲ ಎಂದರು.

ಫೆ.27ಕ್ಕೆ ವಿಮಾನ ನಿಲ್ದಾಣ ಉದ್ಘಾಟನೆ: ಶಿವಮೊಗ್ಗದ ಸೋಗಾನೆ ಗ್ರಾಮದಲ್ಲಿ ನಿರ್ಮಾಣ ಆಗುತ್ತಿರುವ ಶಿವಮೊಗ್ಗ ವಿಮಾನ ನಿಲ್ದಾಣ ಫೆಬ್ರವರಿ 27ರಂದು ಉದ್ಘಾಟನೆಗೊಳ್ಳಲಿದೆ. ಅಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಈಗಾಗಲೇ ವಿಮಾನ ನಿಲ್ದಾಣದಲ್ಲಿ ಶೇ.95ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಕೆಲವೊಂದು ಕ್ಲಿಯರೆನ್ಸ್‌ ಸಿಗಬೇಕಿದೆ. ಅದರ ಬಗ್ಗೆ ಮಾತನಾಡಿದ್ದೇವೆ. ಅದು ಸಹ ಆಗಲಿದೆ ಎಂದರು.

ಗಾರ್ಮೆಂಟ್ಸ್‌ ನೌಕರರ ವೇತನ ಶೇ.14 ಹೆಚ್ಚಳ: 8800ರಿಂದ 13200 ಕನಿಷ್ಠ ವೇತನ ನಿಗದಿ

ಯಡಿಯೂರಪ್ಪ ಕನಸು ನನಸಾಗುತ್ತಿದೆ: ಶಿವಮೊಗ್ಗ ವಿಮಾನ ನಿಲ್ದಾಣ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಅಭಿಲಾಷೆಯಂತೆ ನೇರವೇರುತ್ತಿದೆ. ಅವರ ಕನಸು ನನಸಾಗುತ್ತಿದೆ ಎಂದು ಸಂಸದ ಬಿ.ವೈ. ರಾಘ​ವೇಂದ್ರ ಹೇಳಿ​ದರು. ಉದ್ಘಾಟನೆಗೆ ಯಾವುದೇ ನ್ಯೂನತೆಯೂ ಕಂಡುಬರಬಾರದು ಎಂಬ ಹಿನ್ನೆಲೆ ಈಗಾಗಲೇ ಡಿಜಿಸಿಎ ಮತ್ತು ನಾಗರಿಕ ವಿಮಾನ ಯಾನ ಪ್ರಾಧಿಕಾರದ ತಂಡ ಅನಧಿಕೃತ ಬೇಟಿ ನೀಡಿ ಸಲಹೆ ನೀಡಿದ್ದಾರೆ. ಅದರಂತೆ ಕೆಲಸಗಳು ನಡೆಯುತ್ತಿದೆ. ಉದ್ಘಾಟನೆ ದಿನದಂದು ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರ ವಿಮಾನ ಇಲ್ಲೆ ನಿಲ್ಲಬೇಕು. ಈ ಸಂಬಂಧ ಎಲ್ಲ ತಯಾರಿಯೂ ಮಾಡಿಕೊಳ್ಳಲಾಗಿದೆ. ಈಗಾಗಲೇ ಸ್ವಾರ್‌ ಏರ್‌ಲೈನ್ಸ್‌ ಸೇರಿದಂತೆ ನಾಲ್ಕೈದು ವಿಮಾನ ಯಾನ ಸಂಸ್ಥೆಗಳು ಮುಂದೆ ಬಂದಿದ್ದಾರೆ. ಸದ್ಯಕ್ಕೆ ಶಿವಮೊಗ್ಗದಿಂದ ಬೆಂಗಳೂರು ನಡುವೆ ವಿಮಾನ ಆರಂಭ ಮಾಡಲಾಗುವುದು ಎಂದು ರಾಘವೆಂದ್ರ ತಿಳಿಸಿದರು.

click me!