
ಹುಬ್ಬಳ್ಳಿ, [ಫೆ.10]: ಇಂದು [ಭಾನುವಾರ] ಪ್ರಧಾನಿ ಮೋದಿ ಅವರು ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಿಂದ ಲೋಕಸಭಾ ಸಮರಕ್ಕೆ ರಣಕಹಳೆ ಮೊಳಗಿಸಿದರು.
ಹುಬ್ಬಳ್ಳಿಯ ಗಬ್ಬೂರ ಬಳಿಯಿರುವ ಕೆಎಲ್ಇ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಮಾವೇಶದಲ್ಲಿ ಸುಮಾರು 25 ನಿಮಿಷಗಳ ಭಾಷಣ ಮಾಡಿದರು.
ಶೌರ್ಯ, ಇತಿಹಾಸಕ್ಕೆ ಈ ಭೂಮಿ ಹೆಸರುವಾಸಿಯಾಗಿದೆ ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿಗಳನ್ನು ನೆನಪಿಸಿಕೊಂಡು ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ರಾಜ್ಯ ಕಾಂಗ್ರೆಸ್ ಹಾಗೂ ಜೆಡಿಎಸ್ ದೋಸ್ತಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಧಾರವಾಡದಲ್ಲಿ IIT, ರಾಯಚೂರಿನಲ್ಲಿ IIIT ನಿರ್ಮಾಣ ಕಾಮಗಾರಿಗೆ ಮೋದಿ ಚಾಲನೆ
ಕರ್ನಾಟಕದ ಮುಖ್ಯಮಂತ್ರಿ ಎಲ್ಲರ ಪಾಲಿಗೆ ಪಂಚಿಂಗ್ ಬ್ಯಾಗ್ ಆಗಿದ್ದಾರೆ. ಸಿಎಂಗೆ ಪ್ರತಿದಿನ ಧಮ್ಕಿಗಳು ಬರುತ್ತಿದ್ದು, ಅವರು ಪ್ರತಿದಿನ ಅಸಹಾಯಕತೆಯಿಂದ ಕಣ್ಣೀರು ಹಾಕುತ್ತಿದ್ದಾರೆ.
ಇಂತಹ ಅಸಹಾಯಕ ಮುಖ್ಯಮಂತ್ರಿಗೆ ಯಾರ್ ಯಾರೋ ಸವಾಲು ಹಾಕುತ್ತಿದ್ದು, ಕರ್ನಾಟಕದ್ದು ಅನಿವಾರ್ಯ ಮಾದರಿ. ಇದನ್ನೇ ದೇಶದ ಮೇಲೆ ಹೇರಲು ಹೊರಟಿದ್ದಾರೆ ಎಂದು ಮೈತ್ರಿ ಸರ್ಕಾರದ ಕಾರ್ಯವೈಖರಿ ಬಗ್ಗೆ ಮೋದಿ ಲೇವಡಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.