ಪ್ರಧಾನಿ ಮೋದಿ ನನ್ನ ಪ್ರಾಜೆಕ್ಟ್ ಹೈಜಾಕ್ ಮಾಡಿದ್ದಾರೆ: ಕುಮಾರಸ್ವಾಮಿ ಗಂಭೀರ ಆರೋಪ

Published : Oct 31, 2020, 04:20 PM ISTUpdated : Oct 31, 2020, 04:36 PM IST
ಪ್ರಧಾನಿ ಮೋದಿ ನನ್ನ ಪ್ರಾಜೆಕ್ಟ್ ಹೈಜಾಕ್ ಮಾಡಿದ್ದಾರೆ: ಕುಮಾರಸ್ವಾಮಿ ಗಂಭೀರ ಆರೋಪ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಪ್ರಾಜೆಕ್ಟ್ ಹೈಜಾಕ್ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಗಾದ್ರೆ ಮೋದಿ ಯಾವ ಪ್ರಾಜೆಕ್ಟ್ ಹೈಜಾಕ್ ಮಾಡಿದ್ದಾರೆ.

ಬೆಂಗಳೂರು, (ಅ.31): ಆರ್.ಆರ್.ನಗರ ಕ್ಷೇತ್ರದಲ್ಲಿ ಪ್ರಾಮಾಣಿಕ ಅಭ್ಯರ್ಥಿ ಹಾಕಿದ್ದೇವೆ, ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಹೇಳುತ್ತಾರೆ ಇದಕ್ಕೆ ಜನ ಚುನಾವಣೆ ದಿನ ಉತ್ತರ ಕೊಡುತ್ತಾರೆ ಎಂದು ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನ ಪೀಣ್ಯದ ಕೈಗಾರಿಕೆ ಸಂಘದ ಸಭೆಯಲ್ಲಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಕೈಗಾರಿಕೆಗೆ ಒತ್ತು ನೀಡಿದ್ದೆ. ಕಾಂಪೀಟ್ ವಿತ್ ಚೀನಾ ಯೋಜನೆ ಜಾರಿ ಮಾಡಿದ್ದೆ. ಇದೀಗ ಪ್ರಧಾನಿ ಮೋದಿ ನನ್ನ ಪ್ರಾಜೆಕ್ಟ್ ಹೈಜಾಕ್ ಮಾಡಿದ್ದಾರೆ ಎಂದರು.

ನಾಮಪತ್ರ ವಾಪಸ್ ಪಡೆದು ಚುನಾವಣಾ ಅಖಾಡದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ

ಲೂಟಿ ಹೊಡೆಯುವವರನ್ನ ಆಯ್ಕೆ ಮಾಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿಯ ಮಾತು ರಾಜ್ಯದಲ್ಲಿ ಪಾಲಿಸಬೇಕು. ಕಳಪೆ ಕಾಮಗಾರಿಯಿಂದ ಹಣ ಮಾಡಿದ್ದಾರೆ. ಲೂಟಿ ಮಾಡಿದ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಎಂದು ಕುಮಾರಸ್ವಾಮಿ ಹೇಳಿದರು.

ಕೈಗಾರಿಕೋದ್ಯಮ ಸಂಘದ ಮುಖಂಡರ ಜೊತೆ ಸಭೆಯಲ್ಲಿ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣ ಮೂರ್ತಿ, ಮಾಜಿ ಶಾಸಕ ಶರವಣ ಹಾಗೂ ಜೆಡಿಎಸ್ ನಗರ ಅಧ್ಯಕ್ಷ ಪ್ರಕಾಶ್ ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ