ಏ.30ಕ್ಕೆ ಚನ್ನಪಟ್ಟಣದಲ್ಲಿ ಪ್ರಧಾನಿ ಮೋದಿ ಪ್ರಚಾರ: 2 ಲಕ್ಷ ಜನ ಭಾಗಿ

Published : Apr 22, 2023, 08:01 AM IST
ಏ.30ಕ್ಕೆ ಚನ್ನಪಟ್ಟಣದಲ್ಲಿ ಪ್ರಧಾನಿ ಮೋದಿ ಪ್ರಚಾರ: 2 ಲಕ್ಷ ಜನ ಭಾಗಿ

ಸಾರಾಂಶ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಸ್ಪರ್ಧೆಯಿಂದಾಗಿ ಹೈವೋಲ್ಟೇಜ್‌ ಕ್ಷೇತ್ರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನಿಸಲಿದ್ದು, ಏ.30ರಂದು ಮೋದಿ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿ ನಡೆಸಲಿದ್ದಾರೆ. 

ಚನ್ನಪಟ್ಟಣ (ಏ.22): ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಸ್ಪರ್ಧೆಯಿಂದಾಗಿ ಹೈವೋಲ್ಟೇಜ್‌ ಕ್ಷೇತ್ರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನಿಸಲಿದ್ದು, ಏ.30ರಂದು ಮೋದಿ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿ ನಡೆಸಲಿದ್ದಾರೆ. ಚನ್ನಪಟ್ಟಣದಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರಕ್ಕೆ ದೆಹಲಿಯ ಬಿಜೆಪಿ ಉನ್ನತ ತಂಡ ಹಸಿರು ನಿಶಾನೆ ತೋರಿಸಿದ್ದು, ಏ.30ಕ್ಕೆ ಕಾರ್ಯಕ್ರಮ ನಿಗದಿಗೊಳಿಸಲಾಗಿದೆ. ಈ ಹಿಂದೆ ಮೋದಿ ಮೇ 3ಕ್ಕೆ ಆಗಮಿಸಲಿದ್ದಾರೆಂದು ಹೇಳಲಾಗಿತ್ತಾದರೂ, ಇದೀಗ ಮೋದಿ ಸಮಾವೇಶವನ್ನು ಏ.30ಕ್ಕೆ ನಿಗದಿಪಡಿಸಲಾಗಿದೆ. 

ಅಂದು ಮಧ್ಯಾಹ್ನ ಸುಮಾರು 2 ಗಂಟೆಗೆ ಪ್ರಧಾನಿ ಮೋದಿ ಸಮಾವೇಶ ನಡೆಯುವ ಸ್ಥಳಕ್ಕೆ ಹೆಲಿಕಾಪ್ಟರ್‌ ಮೂಲಕ ಆಗಮಿಸಲಿದ್ದು, ಇಲ್ಲಿನ ಸಮಾವೇಶದ ನಂತರ ಮೈಸೂರಿನಲ್ಲಿ ನಡೆಯುವ ರಾರ‍ಯಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಬಿಜೆಪಿ ಮೂಲಗಳಿಂದ ಲಭ್ಯವಾಗಿದೆ. ಮೋದಿ ಆಗಮನದ ಹಿನ್ನೆಲೆಯಲ್ಲಿ ಸಮಾವೇಶ ನಡೆಯುವ ಸ್ಥಳದಲ್ಲಿ ವೇದಿಕೆ ನಿರ್ಮಾಣಕ್ಕೆ ನೀಲನಕ್ಷೆ ರೂಪಿಸಲಾಗಿದೆ. ಇದಲ್ಲದೇ ಪ್ರಧಾನಿ ಹೆಲಿಕಾಪ್ಟರ್‌ ಇಳಿಸಲು ಹೆಲಿಪ್ಯಾಡ್‌ ನಿರ್ಮಾಣ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಯಶವಂತಪುರ ಕ್ಷೇತ್ರ ಜೆಡಿಎಸ್‌ ಅಭ್ಯರ್ಥಿ ಜವರಾಯಿಗೌಡ ವಿರುದ್ಧ ಬಿಜೆಪಿ ದೂರು

ವೇದಿಕೆ ನಿರ್ಮಾಣಕ್ಕೆ ಸಿಪಿವೈ ಭೂಮಿಪೂಜೆ: ಪ್ರಧಾನಿ ಮೋದಿ ಚುನಾವಣಾ ಸಮಾವೇಶಕ್ಕೆ ಚನ್ನಪಟ್ಟಣದ ಮತ್ತೀಕೆರೆ ಬಳಿಯ ಖಾಸಗಿ ಜಮೀನನ್ನು ಗುರುತಿಸಲಾಗಿದೆ. ವಿಶಾಲವಾಗಿರುವ ಈ ಸ್ಥಳದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಶುಕ್ರವಾರ ಭೂಮಿ ಪೂಜೆ ಸಲ್ಲಿಸಿದ ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ ಮೋದಿ ಕಾರ್ಯಕ್ರಮದ ವೇದಿಕೆ ನಿರ್ಮಾಣ ಕಾರ್ಯ ಚಾಲನೆ ನೀಡಿದರು. ಭೂಮಿಯನ್ನು ಸಮತಟ್ಟು ಮಾಡಿ ವೇದಿಕೆ ನಿರ್ಮಾಣ ಮಾಡುವ ಕಾರ್ಯ ಶುಕ್ರವಾರದಿಂದಲೇ ಆರಂಭಗೊಂಡಿದೆ.

ಎರಡು ಜಿಲ್ಲೆ ಜನ ಸೇರಿಸಿ ಸಮಾವೇಶ: ರಾಮನಗರ ಮತ್ತು ಮಂಡ್ಯ ಜಿಲ್ಲೆಯ ಜನರನ್ನು ಒಂದೆಡೆ ಸೇರಿ ಮೋದಿ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಸಮಾವೇಶದಲ್ಲಿ ಎರಡು ಜಿಲ್ಲೆಗಳಿಂದ ಸುಮಾರು 2 ಲಕ್ಷ ಜನರನ್ನು ಸೇರಿಸಲು ಉದ್ದೇಶಿಸಲಾಗಿದ್ದು, ಎರಡು ಜಿಲ್ಲೆಯ ಜನರನ್ನು ಸಂಘಟಿಸಿ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದೆ. ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಜತೆಗೆ ಮಂಡ್ಯ ಜಿಲ್ಲೆಯ ಕೆಲವು ಕ್ಷೇತ್ರಗಳ ಜನರನ್ನು ಸೇರಿಸಿ ಒಕ್ಕಲಿಗರ ಕೋಟೆಯಲ್ಲಿ ಚುನಾವಣಾ ಕಹಳೆ ಮೊಳಗಿಸುವ ಕಾರ್ಯತಂತ್ರ ರೂಪಿಸಲಾಗಿದೆ ಎನ್ನಲಾಗಿದೆ.

ಬ್ರಾಹ್ಮಣರೇಕೆ ರಾಜಕಾರಣದಲ್ಲಿ ಮೇಲೆ ಬರುತ್ತಿಲ್ಲ?: ಅಶೋಕ ಹಾರನಹಳ್ಳಿ

ಒಕ್ಕಲಿಗರ ಕೋಟೆಯಲ್ಲಿ ಮೋದಿ ಕಹಳೆ: ಈ ಹಿಂದೆ ರಾಜ್ಯದ ಹಲವಾರು ಕಡೆ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಗಳನ್ನು ನಡೆಸಿದ್ದರಾದರೂ ಒಕ್ಕಲಿಗರ ಕೋಟೆ ಎನಿಸಿರುವ ರಾಮನಗರ ಹಾಗೂ ಮಂಡ್ಯದ ಕಡೆ ಚಿತ್ತ ಹರಿಸಿರಲಿಲ್ಲ. ಇದೇ ಮೊದಲ ಬಾರಿ ಒಕ್ಕಲಿಗರ ಕೋಟೆಗೆ ಲಗ್ಗೆ ಹಾಕಿ ಕಮಲ ಅರಳಿಸಲು ಬಿಜೆಪಿ ಕಾರ್ಯತಂತ್ರ ರೂಪಿಸಿದ್ದು, ಎರಡು ಜಿಲ್ಲೆಗಳ ಜನರನ್ನು ಸೇರಿಸಿ ಸಮಾವೇಶ ಆಯೋಜಿಸಲು ಮುಂದಾಗಿರುವುದು ಸಾಕಷ್ಟುಕುತೂಹಲ ಕೆರಳಿಸಿದೆ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!
ಸದನದಲ್ಲಿ ಆಡಳಿತ, ವಿಪಕ್ಷ ಭಾರೀ ಕದನ ಸಂಭವ!