ಸರ್ವರಿಗೂ ಸಮಪಾಲು, ಸಮಬಾಳು ಎಂಬ ಧ್ಯೇಯದೊಂದಿಗೆ ನರೇಂದ್ರ ಮೋದಿ ಅವರು ಆಡಳಿತ ನಡೆಸುತ್ತಿದ್ದು, ಅವರ ನೇತೃತ್ವದಲ್ಲಿ ಸ್ವಾಭಿಮಾನಿ ಭಾರತ ಎದ್ದು ನಿಲ್ಲುತ್ತಿದೆ ಎಂದ ಸುದರ್ಶನ ಮೂಡುಬಿದಿರೆ
ಮಂಗಳೂರು(ಸೆ.29): ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವ ಇಡೀ ದೇಶಕ್ಕೆ ಹೊಸ ಆಯಾಮ ಮತ್ತು ಹೊಸ ದಿಕ್ಕು ನೀಡಿದೆ. ನಮ್ಮ ದೇಶದ ಸಂಸ್ಕೃತಿ, ಆಚಾರ-ವಿಚಾರ, ಉಡುಗೆ, ಯೋಗ, ಜ್ಞಾನವನ್ನು ಜಗತ್ತು ಸ್ವೀಕಾರ ಮಾಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಹೇಳಿದ್ದಾರೆ. ಬಿಜೆಪಿ ದ.ಕ. ಜಿಲ್ಲೆ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಆಚರಣೆಯ ಸೇವಾ ಪಾಕ್ಷಿಕ ಅಂಗವಾಗಿ ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಬುಧವಾರ ‘ಏಕ್ ಭಾರತ್ ಶ್ರೇಷ್ಠ ಭಾರತ್’ ಪರಿಕಲ್ಪನೆಯಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ವರಿಗೂ ಸಮಪಾಲು, ಸಮಬಾಳು ಎಂಬ ಧ್ಯೇಯದೊಂದಿಗೆ ನರೇಂದ್ರ ಮೋದಿ ಅವರು ಆಡಳಿತ ನಡೆಸುತ್ತಿದ್ದು, ಅವರ ನೇತೃತ್ವದಲ್ಲಿ ಸ್ವಾಭಿಮಾನಿ ಭಾರತ ಎದ್ದು ನಿಲ್ಲುತ್ತಿದೆ ಎಂದರು.
ರಾತ್ರೋರಾತ್ರಿ ದಿಢೀರ್ ಕಾರ್ಯಾಚರಣೆ: ದ.ಕ. ಜಿಲ್ಲೆಯ 14 ಪಿಎಫ್‌ಐ ಮುಖಂಡರ ಬಂಧನ
ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ, ಮಂಗಳೂರು ನಗರದಲ್ಲಿ ಕೇರಳದ 8 ಸಾವಿರ ಮಂದಿ ಇದ್ದಾರೆ. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಉತ್ತರಪ್ರದೇಶ, ಪಂಜಾಬ್, ಈಶಾನ್ಯ ರಾಜ್ಯಗಳ ಅನೇಕ ಮಂದಿ ಉದ್ಯೋಗಿಗಳು, ವಿದ್ಯಾರ್ಥಿಗಳು ಇಲ್ಲಿ ನೆಲೆಸಿದ್ದಾರೆ. ಅವರೆಲ್ಲರ ಸಂಸ್ಕೃತಿಯ ವಿನಿಮಯ ದೃಷ್ಟಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ರಾಜ್ಯಗಳ ಜನರ ಸಮಾವೇಶ ಆಯೋಜಿಸಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಉಪಮೇಯರ್ ಪೂರ್ಣಿಮಾ, ಬಿಜೆಪಿ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ ಅತಿಥಿಗಳಾಗಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ರಾಮದಾಸ ಬಂಟ್ವಾಳ, ಮಂಗಳೂರು ದಕ್ಷಿಣ ಮಂಡಲ ಅಧ್ಯಕ್ಷ ವಿಜಯಕುಮಾರ್ ಶೆಟ್ಟಿ, ಪ್ರಮುಖರಾದ ಬಾಲಕೃಷ್ಣ ಭಟ್, ನಿತಿನ್‌ಕುಮಾರ್, ರವಿಶಂಕರ ಮಿಜಾರ್, ಹರಿಕೃಷ್ಣ ಬಂಟ್ವಾಳ ಇದ್ದರು.
ಬೆಂಗಳೂರಲ್ಲಿ ಗಲಭೆಗೆ ಮಂಗ್ಳೂರಲ್ಲಿ ಷಡ್ಯಂತರ?
ರೂಪಾ ಡಿ. ಬಂಗೇರ ವಂದೇ ಮಾತರಂ ಹಾಡಿದರು. ಕಾರ್ಯಾಲಯ ಕಾರ್ಯದರ್ಶಿ ಸುಕೇಶ್ ಶೆಟ್ಟಿಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿಕಣ್ಣೂರು ನಿರೂಪಿಸಿ, ವಂದಿಸಿದರು. ದೇವರಾಜ ಅರಸು ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಅಣ್ಯಯ್ಯ ಕುಲಾಲ್ ಅವರನ್ನು ಸನ್ಮಾನಿಸಲಾಯಿತು. ಆಳ್ವಾಸ್ ಸಂಸ್ಥೆಯ ಆದಶ್‌ರ್ ಅವರನ್ನು ಗೌರವಿಸಲಾಯಿತು. ಬಳಿಕ ಮೂಡುಬಿದಿರೆ ಆಳ್ವಾಸ್ ಎಜುಕೇಶನ್ ಫೌಂಡೇಶನ್ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ನಾರಾಯಣಗುರು ವೃತ್ತ ಅ.3ಕ್ಕೆ ಉದ್ಘಾಟನೆ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಲೇಡಿಹಿಲ್ ಶಾಲೆಯ ಬಳಿ ನೂತನವಾಗಿ ನಿರ್ಮಿಸಿದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಉದ್ಘಾಟನಾ ಸಮಾರಂಭ ಅ.3ರಂದು ಸಂಜೆ 6ಕ್ಕೆ ನಡೆಯಲಿದೆ. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ, ಮೇಯರ್ ಜಯಾನಂದ ಅಂಚನ್, ಮುಡಾ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರ್ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಮಂಗಳಾದೇವಿ ಬಳಿ ನಿರ್ಮಿಸಲಾದ ವೃತ್ತವನ್ನು ಸದ್ಯದಲ್ಲೇ ಉದ್ಘಾಟಿಸಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.