
ಬಂಗಾರಪೇಟೆ(ನ.11): ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನೇ ದಿವಾಳಿ ಮಾಡಿದೆ ಎಂದು ಅಸಂಬದ್ಧವಾಗಿ ಟೀಕಿಸುವ ಪ್ರಧಾನಿ ಮೋದಿ ದೇಶವನ್ನೇ ದಿವಾಳಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದರು. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ಯರಗೋಳ್ ಅಣೆಕಟ್ಟನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಪ್ರಧಾನಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ನಮ್ಮ ದೇಶದ ಸಾಲ ₹53.11 ಲಕ್ಷ ಕೋಟಿ ಅಷ್ಟೇ ಇತ್ತು. ಆದರೆ ಇದೀಗ ಅದು 125 ಲಕ್ಷ ಕೋಟಿ ರು.ವರೆಗೂ ಮುಟ್ಟಿದೆ ಎಂದರು.
ಸಿದ್ದರಾಮಯ್ಯ ಅಲ್ಲ ಸುಳ್ಳಿನರಾಮಯ್ಯ: ಈಶ್ವರಪ್ಪ
ಹಗಲುಗನಸು:
ಇನ್ನು, ಪದೇ ಪದೇ ಕಾಂಗ್ರೆಸ್ ಹೆಚ್ಚು ದಿನ ಇರುವುದಿಲ್ಲ ಎಂದು ಮೋದಿ ಅಲ್ಲಲ್ಲಿ ಭವಿಷ್ಯ ನುಡಿಯುತ್ತಾರೆ. ಅದು ಕೇವಲ ಅವರ ಹಗಲುಗನಸು ಎಂದೂ ತಿರುಗೇಟು ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.