
ಬೆಂಗಳೂರು(ಮಾ.18): ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಅವರು ಕರ್ನಾಟಕದಿಂದ ಅದರಲ್ಲೂ ಕಲಬುರಗಿಯಿಂದ ಚುನಾವಣಾ ಪ್ರಚಾರ ಆರಂಭಿಸಲು ಖರ್ಗೆ ಅವರ ಬಗೆಗಿನ ಭಯ ಕಾರಣ. ಕಲಬುರಗಿ ಸೇರಿದಂತೆ ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Lok Sabha Election 2024: ಈಶ್ವರಪ್ಪ ಜೊತೆ ಬಿಜೆಪಿ ವರಿಷ್ಠರ ಸಂಧಾನ ವಿಫಲ
20ರಂದು 2ನೇ ಪಟ್ಟಿ ಅಂತಿಮ ಸಾಧ್ಯತೆ:
ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಯಾವಾಗ ಎಂಬ ಪ್ರಶ್ನೆಗೆ, ಮಾ. 19ರಂದು ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಮಾ. 20ರಂದು ಪಟ್ಟಿ ಅಂತಿಮವಾಗಬಹುದು ಎಂದು ತಿಳಿಸಿದರು.
21ರಂದು ಗ್ಯಾರಂಟಿ ಸಮಿತಿ ಸದಸ್ಯರ ಸಭೆ
ಇನ್ನು ರಾಜ್ಯದಲ್ಲಿ ತಾಲೂಕು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರುಗಳ ಸಭೆಯನ್ನು ಮಾ. 21ರಂದು ನಡೆಸಲಿದ್ದೇವೆ. ಇವರೆಲ್ಲರಿಗೂ ಲೋಕಸಭೆ ಚುನಾವಣೆಯ ಜವಾಬ್ದಾರಿ ನೀಡಲಾಗುವುದು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.