ನಾಡಿದ್ದು ರಾಜ್ಯ ನಾಯಕರ ಜತೆ ಪ್ರಧಾನಿ ಮೋದಿ ಸಭೆ?

Published : Aug 31, 2022, 06:33 AM IST
ನಾಡಿದ್ದು ರಾಜ್ಯ ನಾಯಕರ ಜತೆ ಪ್ರಧಾನಿ ಮೋದಿ ಸಭೆ?

ಸಾರಾಂಶ

ಪಕ್ಷದ ಹಿರಿಯ ನಾಯಕರನ್ನು ಒಳಗೊಂಡ ಕೋರ್‌ ಕಮಿಟಿ ಸದಸ್ಯರೂ ಸೇರಿದಂತೆ ಹಲವು ಹಿರಿಯ ಮುಖಂಡರಿಗೆ ಮೌಖಿಕವಾಗಿ ಮಾಹಿತಿ ನೀಡಿದ ರಾಜ್ಯ ಘಟಕ 

ಬೆಂಗಳೂರು(ಆ.31):  ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಂಗಳೂರಿಗೆ ಆಗಮಿಸುತ್ತಿದ್ದು, ಬಿಜೆಪಿ ರಾಜ್ಯ ನಾಯಕರೊಂದಿಗೆ ಸಭೆ ನಡೆಸುವ ಸಾಧ್ಯತೆಯಿದೆ. ಈ ಬಗ್ಗೆ ಇದುವರೆಗೆ ಅಧಿಕೃತ ನಿರ್ಧಾರ ಹೊರಬಿದ್ದಿಲ್ಲವಾದರೂ ಸಭೆ ನಡೆಸುವ ಕುರಿತಂತೆ ಪಕ್ಷದ ರಾಜ್ಯ ಘಟಕದ ವತಿಯಿಂದ ಪ್ರಧಾನಿ ಕಚೇರಿಯನ್ನು ಸಂಪರ್ಕಿಸಿ ಪ್ರಯತ್ನ ನಡೆಸಲಾಗುತ್ತಿದೆ. ಬುಧವಾರ ಅಥವಾ ಗುರುವಾರ ಸ್ಪಷ್ಟಮಾಹಿತಿ ಹೊರಬೀಳಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಪಕ್ಷದ ಹಿರಿಯ ನಾಯಕರನ್ನು ಒಳಗೊಂಡ ಕೋರ್‌ ಕಮಿಟಿ ಸದಸ್ಯರೂ ಸೇರಿದಂತೆ ಹಲವು ಹಿರಿಯ ಮುಖಂಡರಿಗೆ ಮೌಖಿಕವಾಗಿ ರಾಜ್ಯ ಘಟಕ ಮಾಹಿತಿ ನೀಡಿದೆ. ಆದರೆ, ಇದು ಕೇವಲ ನಾಯಕರ ವಿಶೇಷ ಸಭೆಯೋ ಅಥವಾ ಕೋರ್‌ ಕಮಿಟಿ ಸದಸ್ಯರ ಸಭೆಯೋ ಎಂಬುದು ಇನ್ನೂ ತೀರ್ಮಾನವಾಗಿಲ್ಲ.

Mangaluru : ಮಂಗಳೂರು ಮೋದಿ ಸಮಾವೇಶದ ಸಿದ್ಧತೆ ಶೇ.80 ಪೂರ್ಣ

ಸಾಮಾನ್ಯವಾಗಿ ಪ್ರಧಾನಿ ಮೋದಿ ಅವರು ಅಧಿಕೃತ ಭೇಟಿಗೆ ಆಗಮಿಸಿದ ವೇಳೆ ಪಕ್ಷದ ನಾಯಕರ ಸಭೆ ನಡೆಸಿದ್ದು ತೀರಾ ಕಡಮೆ. ಚುನಾವಣಾ ಪ್ರಚಾರಕ್ಕೆ ಆಗಮಿಸಿದ ವೇಳೆ ನಾಯಕರೊಂದಿಗೆ ಸಭೆ ನಡೆಸಿದ ಉದಾಹರಣೆಗಳಿವೆ. ಹೀಗಾಗಿ, ಮಂಗಳೂರು ಭೇಟಿ ವೇಳೆ ಪಕ್ಷದ ನಾಯಕರೊಂದಿಗೆ ಸಭೆ ನಡೆಸುವ ಬಗ್ಗೆ ಅನುಮಾನವಿದೆ ಎನ್ನಲಾಗುತ್ತಿದೆ.

ಕಳೆದ ವಾರ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಅವರು, ಇದು ಚುನಾವಣಾ ವರ್ಷವಾಗಿದ್ದರಿಂದ ಪಕ್ಷ ಸಂಘಟನೆ ಹಿನ್ನೆಲೆ ತಾವು ಪ್ರತಿ ತಿಂಗಳಿಗೊಮ್ಮೆ ರಾಜ್ಯಕ್ಕೆ ಭೇಟಿ ನೀಡಬೇಕು ಎಂದು ಮನವಿ ಮಾಡಿದ್ದರು. ಹೀಗಾಗಿ, ಈ ಭೇಟಿಯ ವೇಳೆ ಅವರು ಪಕ್ಷ ಸಂಘಟನೆ ಕುರಿತಂತೆ ಪಕ್ಷದ ರಾಜ್ಯ ನಾಯಕರೊಂದಿಗೆ ಸಭೆ ನಡೆÜಸಬೇಕು ಎಂಬುದು ಯಡಿಯೂರಪ್ಪ ಸೇರಿದಂತೆ ರಾಜ್ಯ ಘಟಕದ ಅಭಿಪ್ರಾಯವಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ