ಭಾರತದಲ್ಲಿರುವ ಜನರ ಬಡತನ ದೂರು ಮಾಡುವ ಸಂಕಲ್ಪ ಪ್ರಧಾನಿ ನರೇಂದ್ರ ಮೋದಿಯವರದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಪ್ರೇರಿತ ಕ್ಷಮತಾ ಸೇವಾ ಸಂಸ್ಥೆ ಹಾಗೂ ಎಸ್‌ಡಿಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನೆ ಮಾಡಿ ಮಾತನಾಡಿದರು.
ಧಾರವಾಡ (ಡಿ.25): ಭಾರತದಲ್ಲಿರುವ ಜನರ ಬಡತನ ದೂರು ಮಾಡುವ ಸಂಕಲ್ಪ ಪ್ರಧಾನಿ ನರೇಂದ್ರ ಮೋದಿಯವರದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಪ್ರೇರಿತ ಕ್ಷಮತಾ ಸೇವಾ ಸಂಸ್ಥೆ ಹಾಗೂ ಎಸ್‌ಡಿಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನೆ ಮಾಡಿ ಮಾತನಾಡಿದರು. ಭಾರತದ ಆರ್ಥಿಕ ಪ್ರಗತಿ ಜೊತೆಗೆ ಕ್ಷೇತ್ರದ ಅಭಿವೃದ್ಥಿಯೇ ಬಿಜೆಪಿಯ ಸಂಕಲ್ಪ.
ದೇಶದ ಸಾರ್ವಜನಿಕರಿಗೆ ಉಪಯುಕ್ತವಾಗುವ ಅನೇಕ ಯೋಜನೆಗಳು ಪ್ರಧಾನಿ ನರೇಂದ್ರ ಮೋದಿಯವರು ನೀಡುತ್ತಿರುವುದು ದೇಶದ ಆರ್ಥಿಕತೆಯನ್ನು ವೃದ್ಧಿಸುವುದರ ಜೊತೆಗೆ ದೇಶದ ಜನರ ಬಡತನ ದೂರು ಮಾಡುವ ನಿಟ್ಟಿನಲ್ಲಿ ಅನೇಕ ಉದೋಗಗಳ ಸೃಷ್ಟಿ ಮಾಡಲಾಗುತ್ತಿದೆ ಎಂದರು. ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಬಡವರಿಗೆ ಮನೆ, ಉಜ್ವಲಾ ಯೋಜನೆಗಳು ಜಾರಿಯಲ್ಲಿದ್ದು ಪ್ರಯೋಜನೆ ಪಡೆಯಬೇಕು ಎಂದರು. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಇರುವ 2024ರ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಪಾಲಿಕೆ ಸದಸ್ಯ ಶಿವು ಹಿರೇಮಠ, ರಾಜಣ್ಣ ಕೊರವಿ, ಶಕುಂತಲಾ ಕೊಟಬಾಗಿ, ಶಂಕರ ಮುಗದ, ಬಸವರಾಜ ಗರಗ, ಮೋಹನ ರಾಮದುರ್ಗ, ಸುರೇಶ್ ಬೆದರೆ ಮತ್ತಿತರರು ಇದ್ದರು.
ರಾಜ್ಯದಲ್ಲಿ ಟಿಪ್ಪು ನೇತೃತ್ವದ ತುಘಲಕ್ ಸರ್ಕಾರ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ
ತಮ್ಮನ್ನೂ ಸಸ್ಪೆಂಡ್ ಮಾಡುವಂತೆ ವಿಪಕ್ಷ ಸಂಸದರೇ ಕೇಳಿದ್ದರು: ಸಂಸತ್ತಿನ ಚಳಿಗಾಲದ ಅಧಿವೇಶನದಿಂದ ಉಭಯ ಸದನಗಳ 146 ಸಂಸದರನ್ನು ಅಮಾನತುಗೊಳಿಸಿರುವುದಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ವಿಪಕ್ಷಗಳ ಸಂಸದರೇ ತಮ್ಮನ್ನೂ ಸಸ್ಪೆಂಡ್ ಮಾಡುವಂತೆ ನಮ್ಮನ್ನು ಕೋರಿದ್ದರು ಎಂದು ಆರೋಪಿಸಿದ್ದಾರೆ.
‘ಸದನದಲ್ಲಿ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಅಶಿಸ್ತು ತೋರಿದ ಕೆಲ ಸಂಸದರನ್ನು ಮೊದಲಿಗೆ ಅಮಾನತು ಮಾಡಲಾಗಿತ್ತು. ಬಳಿಕ ವಿಪಕ್ಷಗಳ ಇನ್ನಷ್ಟು ಸಂಸದರು ಬಂದು ‘ನಾವೂ ಹಾಗೇ ಮಾಡುತ್ತೇವೆ. ನಮ್ಮನ್ನೂ ಅಮಾನತು ಮಾಡಿ’ ಎಂದು ಕೋರಿದರು. ವಿಪಕ್ಷಗಳ ಸಂಸದರನ್ನು ಅಮಾನತು ಮಾಡುವ ಇಚ್ಛೆ ನಮಗಿರಲಿಲ್ಲ. ಸದನದಲ್ಲಿ ಶಿಸ್ತಿನಿಂದ ನಡೆದುಕೊಳ್ಳುವಂತೆ ಅವರಿಗೆ ಮನವಿ ಮಾಡಿದೆವು. ಆದರೆ ಅವರು ಕೇಳಲಿಲ್ಲ. ಕಾಂಗ್ರೆಸ್ ಸಂಸದರು ಇಷ್ಟು ಕೆಳಕ್ಕೆ ಇಳಿಯುತ್ತಾರೆಂದು ಭಾವಿಸಿರಲಿಲ್ಲ’ ಎಂದು ಹೇಳಿದ್ದಾರೆ.
ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಜೊತೆ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೋಶಿ, ‘ಸದನದಲ್ಲಿ ಭಿತ್ತಿಫಲಕ ಪ್ರದರ್ಶಿಸಿದ್ದಕ್ಕೆ ಸಂಸದರನ್ನು ಅಮಾನತು ಮಾಡಲಾಗಿದೆ ಎಂದು ಇನ್ನುಳಿದವರಿಗೆ ತಿಳಿಸಿದ್ದೆವು. ಆಗ ಅವರು ತಾವೂ ಕೂಡ ಅಶಿಸ್ತು ಪ್ರದರ್ಶಿಸುತ್ತೇವೆ, ತಮ್ಮನ್ನೂ ಸಸ್ಪೆಂಡ್ ಮಾಡಿ ಎಂದು ಕೇಳಿದರು. ಇವುಗಳ ಮಧ್ಯೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಸಹವರ್ತಿ ಸಂಸದರು ಸಾಂವಿಧಾನಿಕ ಹುದ್ದೆಯಲ್ಲಿರುವವರನ್ನು ಅಣಕಿಸುತ್ತಿದ್ದುದನ್ನು ವಿಡಿಯೋ ಮಾಡುತ್ತ ಎಂಜಾಯ್ ಮಾಡುತ್ತಿದ್ದರು’ ಎಂದು ಕಿಡಿಕಾರಿದರು.
ಬಿಜೆಪಿಯವರು ಹಿಜಾಬ್ ವಿಚಾರದಲ್ಲಿ ಸಲ್ಲದ ಟೀಕೆ ಬಿಡಿ: ಸಚಿವ ಮಧು ಬಂಗಾರಪ್ಪ
ವಿಧಾನಸಭೆ ಚುನಾವಣೆಗಳಲ್ಲಿ ಅನುಭವಿಸಿದ ಸೋಲನ್ನು ಅರಗಿಸಿಕೊಳ್ಳಲಾಗದೆ ವಿಪಕ್ಷಗಳ ಸಂಸದರು ಕಲಾಪ ಹಾಳುಗೆಡವುವುದಕ್ಕೆ ನೆಪ ಹುಡುಕುತ್ತಿದ್ದರು. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗಲೂ ಜವಾಬ್ದಾರಿಯುತವಾಗಿ ನಡೆದುಕೊಂಡಿಲ್ಲ, ಅಧಿಕಾರದಲ್ಲಿ ಇಲ್ಲದಿದ್ದಾಗಂತೂ ಅತ್ಯಂತ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತದೆ. ಸಂಸತ್ತಿನಲ್ಲಿ ಅಂಗೀಕರಿಸಲಾದ ಮೂರು ಹೊಸ ಕ್ರಿಮಿನಲ್ ಮಸೂದೆಗಳ ಬಗ್ಗೆ ವಿಪಕ್ಷಗಳಿಗೆ ಆಕ್ಷೇಪವಿದ್ದರೆ ಅದನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಹೋಗುವುದಕ್ಕೆ ಅವುಗಳಿಗೆ ಸ್ವಾತಂತ್ರ್ಯವಿದೆ ಎಂದು ಜೋಶಿ ಹೇಳಿದರು.