ಮಹಿಳೆಯರಿಗೆ ಉಚಿತ ಬಸ್‌ ವಿರುದ್ಧ ಮೋದಿ ಮೊದಲ ಸಲ ವಾಗ್ದಾಳಿ

By Kannadaprabha News  |  First Published May 19, 2024, 7:23 AM IST

ದೀರ್ಘಕಾಲೀನ ಚುನಾವಣಾ ಪ್ರಚಾರದುದ್ದಕ್ಕೂ ಉಚಿತ ಯೋಜನೆಗಳ ವಿರುದ್ಧ ಮೋದಿ ಆಕ್ರೋಶ ವ್ಯಕ್ತಪಡಿಸುತ್ತಾ ಬಂದಿದ್ದರೂ, ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಯೋಜನೆ ವಿರುದ್ಧ ನಿರ್ದಿಷ್ಟವಾಗಿ ಅವರು ಎಲ್ಲೂ ಮಾತನಾಡಿರಲಿಲ್ಲ. ಇದೇ ಮೊದಲ ಬಾರಿ ಉಚಿತ ಬಸ್ ಪ್ರಯಾಣದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 


ನವದೆಹಲಿ(ಮೇ.19): ಚುನಾವಣೆ ಗೆಲ್ಲುವ ಸಲುವಾಗಿ ರಾಜ್ಯಗಳಲ್ಲಿ ಜಾರಿಗೆ ತರಲಾಗುತ್ತಿರುವ ಉಚಿತ ಬಸ್ ಪ್ರಯಾಣದ ಯೋಜನೆಗಳು ಪ್ರಗತಿಗೆ ಮಾರಕ. ಅದರಿಂದ ಆರ್ಥಿಕ ಪ್ರಗತಿ ಕುಂಠಿತ ವಾಗುತ್ತದೆ. ಇಂಥ ಯೋಜನೆಗಳು ಅಡ್ಡಪರಿಣಾಮಗಳನ್ನು ಹೊಂದಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಸಿದ್ದಾರೆ.

ತೆಲಂಗಾಣದ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಿಸಿದ ಬಳಿಕ ಹೈದರಾಬಾದ್ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಭಾರೀ ಇಳಿಕೆಯಾಗಿರುವ ವರದಿಗಳ ಬೆನ್ನಲ್ಲೇ ಟೀವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮೋದಿ ಈ ಹೇಳಿಕೆ ನೀಡಿದ್ದಾರೆ. 

Tap to resize

Latest Videos

‘ಇಂಡಿಯಾ’ ಗೆದ್ದರೆ ಮಂದಿರದ ಮೇಲೆ ಬುಲ್ಡೋಜರ್‌ ಹತ್ತಿಸುತ್ತಾರೆ: ಪ್ರಧಾನಿ ಮೋದಿ

ದೀರ್ಘಕಾಲೀನ ಚುನಾವಣಾ ಪ್ರಚಾರದುದ್ದಕ್ಕೂ ಉಚಿತ ಯೋಜನೆಗಳ ವಿರುದ್ಧ ಮೋದಿ ಆಕ್ರೋಶ ವ್ಯಕ್ತಪಡಿಸುತ್ತಾ ಬಂದಿದ್ದರೂ, ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಯೋಜನೆ ವಿರುದ್ಧ ನಿರ್ದಿಷ್ಟವಾಗಿ ಅವರು ಎಲ್ಲೂ ಮಾತನಾಡಿರಲಿಲ್ಲ. ಇದೇ ಮೊದಲ ಬಾರಿ ಉಚಿತ ಬಸ್ ಪ್ರಯಾಣದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲೂ 'ಶಕ್ತಿ' ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಕರ್ಯ ನೀಡಿರುವುದರಿಂದ ಈ ಹೇಳಿಕೆ ಮಹತ್ವ ಪಡೆದಿದೆ.

ಮೆಟ್ರೋಗೆ ಪ್ರಯಾಣಿಕರು ಕುಸಿತ: 

ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ರಾಜಕೀಯ ಪಕ್ಷಗಳು ಸರ್ಕಾರದ ಬೊಕ್ಕಸವನ್ನು ಖಾಲಿ ಮಾಡುವ ಯಾವುದೇ ಹಕ್ಕನ್ನು ಹೊಂದಿಲ್ಲ. ನೀವು ಒಂದು ನಗರದಲ್ಲಿ ಮೆಟ್ರೋ ರೈಲು ನಿರ್ಮಿಸುತ್ತೀರಿ. ಮತ್ತೊಂದೆಡೆ ಚುನಾವಣೆ ಗೆಲ್ಲಲು ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣದಭರವಸೆ ನೀಡುತ್ತೀರಿ. ಅದರರ್ಥ ನೀವು ಮೆಟ್ರೋದ ಅರ್ಧ ಪ್ರಯಾಣಿಕರನ್ನು ಕಸಿದಿದ್ದೀರಿ ಎಂದು ಹೆಸರು ಹೇಳದೆಯೇ ಹೈದ್ರಾಬಾದ್‌ ಮೆಟ್ರೋ ಯೋಜನೆಯಿಂದ ಹಿಂದೆ ಸರಿಯುವ ಎಲ್ ಆ್ಯಂಡ್ ಟಿ ಕಂಪನಿಯ ನಿರ್ಧಾರದ ಕುರಿತು ಮೋದಿ ಪ್ರತಿಕ್ರಿಯಿಸಿದರು. ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣದ ಯೋಜನೆ ಜಾರಿ ಬಳಿಕ ಹೈದರಾಬಾದ್‌ ಮೆಟ್ರೋ ಖಾಲಿ ಖಾಲಿಯಾಗಿ ಕಾಣುತ್ತಿವೆ. ಬಸ್‌ಗಳಲ್ಲಿ ಮಹಿಳೆಯರು ಮತ್ತು ಮಂಗಳಮುಖಿಯರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿದ್ದು, ಸಂಚಾರ ದಟ್ಟಣೆ ಉಂಟಾಗಿ ಜನರಿಗೆ ತೊಂದರೆಯಾಗುತ್ತಿದೆ. ಜೊತೆಗೆ ವಾಯು, ಶಬ್ದಮಾಲಿನ್ಯ ಉಂಟಾಗುತ್ತಿದೆ. ಇದರಿಂದ ಅಭಿವೃದ್ಧಿ ಕುಂಠಿತವಾಗಲಿದೆ ಎಂದು ಹೇಳಿದರು.

ಮೋದಿ ಮಾತಿನಿಂದ ನನಗೆ ಆಘಾತ: ಡಿಕೆಶಿ

ಶಕ್ತಿ ಯೋಜನೆಯಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ, ಆದಾಯ ಕುಸಿಯುತ್ತಿದೆ ಎಂಬ ಪ್ರಧಾನಿ ಮೋದಿ ಹೇಳಿಕೆ ಆಘಾತ ತಂದಿದೆ. ಕಳೆದ ಒಂದು ವರ್ಷದಲ್ಲಿ ಬೆಂಗಳೂರು ಮೆಟ್ರೋ 130 ಕೋಟಿ ರು. ಆದಾಯ ಗಳಿ ಸಿದ್ದು, ಪ್ರಯಾಣಿಕರ ಸಂಖ್ಯೆಯೂ ಶೇ.30ರಷ್ಟು ಹೆಚ್ಚಾಗಿದೆ. ಮೆಟ್ರೋ ಬೆಂಗಳೂರಲ್ಲಿ ಮಾತ್ರ ಇದೆ. ಮಹಿಳೆಯರಿಗೆ ಉಚಿತ ಬಸ್ ಸೌಕರ್ಯ ಇಡೀ ರಾಜ್ಯದಲ್ಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. 

click me!