ನಾಳೆ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಮೋದಿ ಸಂವಾದ

By Kannadaprabha News  |  First Published Apr 26, 2023, 10:04 AM IST

ಎಲ್‌ಇಡಿ ಸ್ಕ್ರೀನ್‌ ಇರುವ ಕಡೆ ಸುಮಾರು 58 ಸಾವಿರ ಕಾರ್ಯಕರ್ತರು ಹಾಗೂ ಬೂತ್‌ಗಳಲ್ಲಿ 200 ಕಾರ್ಯಕರ್ತರನ್ನು ಈ ಕಾರ್ಯಕ್ರಮಕ್ಕಾಗಿ ಸಂಯೋಜಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ಸಾವಿರ ನಮೋ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳ 15 ಕಡೆ ಪ್ರಧಾನಿ ಮೋದಿ ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. 


ಬೆಂಗಳೂರು(ಏ.26): ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಬೆಳಿಗ್ಗೆ 9.30ಕ್ಕೆ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚ್ಯುವಲ್‌ ಆಗಿ ಸಂವಾದ ನಡೆಸಲಿದ್ದಾರೆ. ರಾಜ್ಯದ 58,112 ಬೂತ್‌ಗಳು ಹಾಗೂ 1,680 ಜಿಲ್ಲಾ ಪಂಚಾಯತಿ ಮಟ್ಟದಲ್ಲಿ ಈ ಸಂವಾದ ಹಮ್ಮಿಕೊಳ್ಳಲಾಗಿದೆ. ಬೂತ್‌ಗಳಲ್ಲಿ ಟೀವಿಗಳು ಹಾಗೂ ಜಿಲ್ಲಾ ಪಂಚಾಯತಿ ಮಟ್ಟದಲ್ಲಿ ಎಲ್‌ಇಡಿ ಸ್ಕ್ರೀನ್‌ ಅಳವಡಿಸಲಾಗುವುದು. ಈ ಸಂವಾದಕ್ಕಾಗಿ ಈಗಾಗಲೇ 24 ಲಕ್ಷ ಕಾರ್ಯಕರ್ತರು ಮೋದಿ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ.

ಹೊಸ ತಂತ್ರಜ್ಞಾನ ಬಳಸಿಕೊಂಡು ಇದೇ ಮೊದಲ ಬಾರಿಗೆ ನೇರ ಸಂವಾದ ಏರ್ಪಡಿಸಲಾಗಿದ್ದು, ಬೂತ್‌ ಮಟ್ಟದಲ್ಲಿ 58 ಸಾವಿರ ಸ್ಥಳಗಳಲ್ಲಿ ಈ ಆ್ಯಪ್‌ಗಳ ಮುಖಾಂತರ ಕಾರ್ಯಕರ್ತರು ಸಂವಾದ ವೀಕ್ಷಿಸಲಿದ್ದಾರೆ ಎಂದು ಮಂಗಳವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರೂ ಆಗಿರುವ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ತಿಳಿಸಿದ್ದಾರೆ.

Tap to resize

Latest Videos

ದೊಡ್ಡಬಳ್ಳಾಪುರ: ಅಮೆರಿಕಾದ ಉದ್ಯೋಗ ಬಿಟ್ಟು ರಾಜ್ಯ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಎಂಎಸ್‌ ಪದವೀಧರ..!

ಎಲ್‌ಇಡಿ ಸ್ಕ್ರೀನ್‌ ಇರುವ ಕಡೆ ಸುಮಾರು 58 ಸಾವಿರ ಕಾರ್ಯಕರ್ತರು ಹಾಗೂ ಬೂತ್‌ಗಳಲ್ಲಿ 200 ಕಾರ್ಯಕರ್ತರನ್ನು ಈ ಕಾರ್ಯಕ್ರಮಕ್ಕಾಗಿ ಸಂಯೋಜಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 ಸಾವಿರ ನಮೋ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳ 15 ಕಡೆ ಪ್ರಧಾನಿ ಮೋದಿ ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ ಎಂದು ಹೇಳಿದರು.

ಮಂಗಳವಾರದಿಂದ ಎರಡು ದಿನ ವಿಶೇಷ ಮಹಾ ಪ್ರಚಾರ ಅಭಿಯಾನ ಆರಂಭವಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಬೆಳಗ್ಗೆಯಿಂದ ಮಠ-ಮಂದಿರಗಳಿಗೆ ಭೇಟಿ ನೀಡಿ ಬಳಿಕ ರಾಷ್ಟ್ರ ನಾಯಕರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ್ದಾರೆ. ಮನೆ-ಮನೆಗೂ ಭೇಟಿ ನೀಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳು ಮತ್ತು ಯೋಜನೆಗಳ ಬಗ್ಗೆ ತಿಳಿಸುತ್ತಿದ್ದಾರೆ. ಅಭಿಯಾನದ ಭಾಗವಾಗಿ ಸುದ್ದಿಗೋಷ್ಠಿಗಳು, ವಿವಿಧ ಸಮುದಾಯಗಳ ಮುಖಂಡರೊಂದಿಗೆ ಸಂವಾದ, ರೋಡ್‌ ಶೋಗಳು, ಸಾರ್ವಜನಿಕ ಸಭೆಗಳನ್ನು ಆಯೋಜಿಸಲಾಗಿದೆ ಎಂದು ವಿವರಿಸಿದರು.

ರಾಜೀವ್‌ ಚಂದ್ರಶೇಖರ್‌ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ನವ ಕರ್ನಾಟಕ ನಿರ್ಮಾಣದ ಸಂಕಲ್ಪವನ್ನು ಹೊಂದಿದ್ದಾರೆ. ಆದರೆ ಕಾಂಗ್ರೆಸ್‌ ಸುಳ್ಳು, ಒಡೆದಾಳುವ, ದಾರಿತಪ್ಪಿಸುವ ಒಂದು ಸಮುದಾಯವನ್ನು ಓಲೈಸುವ ಕೆಲಸವನ್ನು ಮಾಡುತ್ತಿದೆ. ಜನರು ಕಾಂಗ್ರೆಸ್‌ ಪಕ್ಷವನ್ನು ಸಂಪೂರ್ಣ ತಿರಸ್ಕರಿಸಲಿದ್ದಾರೆ ಎಂದರು.

click me!