ಜಿಲ್ಲಾಧಿಕಾರಿ ಕಚೇರಿ ಬಳಿ ಖಾಲಿ ಕೊಡ, ಕಪ್ಪು ಬಟ್ಟೆ ಹಿಡಿದು ಪ್ರೊಟೆಸ್ಟ್‌ಗೆ ಮುಂದಾಗಿದ್ದ ಜೆಡಿಎಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಗೆ ಮುಂದಾಗಿದ್ದ 20 ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗದಗ(ಮೇ.04): ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ಕಪ್ಪು ಬಟ್ಟೆ ಪ್ರದರ್ಶನಕ್ಕೆ ಮುಂದಾಗಿದ್ದ ಜೆಡಿಎಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು(ಶನಿವಾರ) ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಕಪ್ಪು ಪಟ್ಟಿ, ಖಾಲಿ ಕೊಡ ಹಿಡಿದು ಬಂದಿದ್ದ ಜೆಡಿಎಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜೆಡಿಎಸ್ ವಕ್ತಾರ ವೆಂಕನಗೌಡ ಗೋವಿಂದಗೌಡರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿತ್ತು.. ಸಂಜೆ ಐದು ಗಂಟೆಗೆ ನಗರಕ್ಕೆ ಆಗಮಿಸುವ ಪ್ರಿಯಾಂಕಾ ಗಾಂಧಿಗೆ ಕಪ್ಪು ಬಟ್ಟೆ ಪ್ರದರ್ಶಿಸಲು ಜೆಡಿಎಸ್ ಕಾರ್ಯಕರ್ತರು ಪ್ಲಾನ್ ಮಾಡಿಕೊಂಡಿದ್ದರು.
undefined
ಚುನಾವಣೆ ನಂತ್ರ ಕಾಂಗ್ರೆಸ್ ಧೂಳಿಪಟ: ಯಡಿಯೂರಪ್ಪ ಭವಿಷ್ಯ
ಹುಬ್ಬಳ್ಳಿಯ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿದ್ದರು. ಹೀಗಾಗಿ ಕಾಂಗ್ರೆಸ್ ಕಾರ್ಯಕರ್ತರ ನಡೆ ಖಂಡಿಸಿ ಪ್ರಿಯಾಂಕಾ ಗಾಂಧಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಜೆಡಿಎಸ್ಪ್ಲಾ ನ್ ರೂಪಿಸಿತ್ತು.