ಹಿಂದು ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ತಪ್ಪಿತಸ್ಥರ ಮೇಲೆ ಕ್ರಮಕ್ಕೆ ನಳಿನ್‌ ಆಗ್ರಹ

Published : May 18, 2023, 09:34 AM ISTUpdated : May 18, 2023, 09:51 AM IST
ಹಿಂದು ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ತಪ್ಪಿತಸ್ಥರ ಮೇಲೆ ಕ್ರಮಕ್ಕೆ ನಳಿನ್‌ ಆಗ್ರಹ

ಸಾರಾಂಶ

ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್‌ ದೌರ್ಜನ್ಯ ವಿಚಾರದ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಉನ್ನತ ಪೊಲೀಸ್‌ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮಂಗಳೂರು (ಮೇ.18) : ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್‌ ದೌರ್ಜನ್ಯ ವಿಚಾರದ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಉನ್ನತ ಪೊಲೀಸ್‌ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್‌ ಇಲಾಖೆಗೆ ಕಪ್ಪುಚುಕ್ಕೆ. ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ ಎಂದಿದ್ದಾರೆ.

ಪೊಲೀಸರ ಥರ್ಡ್ ಡಿಗ್ರಿ ಶಿಕ್ಷೆಗೆ ಗಂಭೀರ ಗಾಯಗೊಂಡ ಹಿಂದು ಕಾರ್ಯಕರ್ತರು : ಶಾಸಕ ಹರೀಶ್ ಪೂಂಜಾ, ಪುತ್ತಿಲ ಆಸ್ಪತ್ರೆಗೆ ಭೇಟಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಹಾಗೂ ಡಿವಿ ಸದಾನಂದ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಬ್ಯಾನರ್‌ ಹಾಕಿದ ಆರೋಪಿಗಳಿಗೆ ಪೊಲೀಸರು ಚಿತ್ರಹಿಂಸೆ ನೀಡಿರುವ ಆರೋಪ ವ್ಯಕ್ತವಾಗಿತ್ತು.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಹಿನ್ನೆಲೆ ಬೇಸರಗೊಂಡು ಹಿಂದು ಕಾರ್ಯಕರ್ತರು ನಳಿನ್ ಕುಮಾರ ಕಟೀಲ್, ಡಿವಿ ಸದಾನಂದಗೌಡ ಬ್ಯಾನರ್ ಗೆ ಚಪ್ಪಲಿಹಾರ ಹಾಕಿ ಆಕ್ರೋಶ ಹೊರಹಾಕಿದ್ದರು. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಿಸಲಾಗಿತ್ತು. ಬ್ಯಾನರ್ ಕಟ್ಟಿದ್ದ ಹಿಂದು ಕಾರ್ಯಕರ್ತನ್ನು ಬಂಧಿಸಿದ್ದ ಪೊಲಿಸರು ಥರ್ಡ್‌ ಡಿಗ್ರಿ ಶಿಕ್ಷೆ ಕೊಟ್ಟು ಅಮಾನವೀಯವಾಗಿ ವರ್ತಿಸಿದ್ದಾರೆ. ಗಂಭೀರ ಗಾಯಗೊಂಡಿರುವ ಹಿಂದು ಕಾರ್ಯಕರ್ತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಆಸ್ಪತ್ರೆ ಬೆಳ್ತಂಗಡಿ ಶಾಸಕ ಹರೀಶ್  ಪೂಂಜಾ, ಹಿಂದು ಮುಖಂಡ ಅರುಣ್ ಪುತ್ತಿಲ ಸೇರಿದಂತೆ ಹಲವು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಪುತ್ತೂರಿನಲ್ಲಿ ನಡೆದ ಪೊಲೀಸರ ದೌರ್ಜನ್ಯಕ್ಕೆ ರಾಜ್ಯಾದ್ಯಂತ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಹಿಂದೂ ಕಾರ್ಯಕರ್ತರ ಚರ್ಮ ಸುಲಿದ ಪೊಲೀಸರಿಗೆ ಶಿಕ್ಷೆ ಗ್ಯಾರಂಟಿ: ಇಲಾಖಾ ತನಿಖೆಗೆ ಆದೇಶ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದತ್ತಪೀಠ ವಿಚಾರದಲ್ಲಿ ರಾಜ್ಯ ಸರ್ಕಾರ ನ್ಯಾಯ ಒದಗಿಸಲಿ: ಸಿ.ಟಿ.ರವಿ ಆಗ್ರಹ
ಕರಾವಳಿಯಲ್ಲಿ ಶಿವಗಿರಿ ಮಠ ಶಾಖೆಗೆ 5 ಎಕರೆ: ಸಿಎಂ ಸಿದ್ದರಾಮಯ್ಯ ಭರವಸೆ