* ಮೈಸೂರು ಜಿಲ್ಲಾ ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್
* ಜಿಲ್ಲೆಯ ಹಲವು ಕಾಂಗ್ರೆಸ್ ನಾಯಕರ ವಿರುದ್ಧ ಕೇಸ್ ಬುಕ್
* ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ನಾಯಕರು
ಮೈಸೂರು, (ಜ.15): ಕೊರೋನಾ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ (Congress Mekedatu Padayatra) ಅರ್ಧದಲ್ಲಿಯೇ ಸ್ಥಗಿತಗೊಳಿಸಿದ್ದು, ಕೋವಿಡ್ ಕಡಿಮೆಯಾದ ಬಳಿಕ ಮತ್ತೆ ರಾಮನಗರದಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಯಲಿದೆ.
ಇನ್ನು ಕೊರೋನಾ ನಿಯಮಗಳನ್ನು ಮೀರಿ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮೈಸೂರು(Mysuru) ಜಿಲ್ಲೆಯಿಂದ ತೆರಳಿದ್ದ ಕಾಂಗ್ರೆಸ್ ನಾಯಕ (Mysuru Congress Leaders) ವಿರುದ್ದ ಕೇಸ್ ಬುಕ್ ಆಗಿದೆ.
undefined
Congress Padayatra ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಕೈ ನಾಯಕರಿಗೆ ಬಿಗ್ ಶಾಕ್!
ಹೌದು...ಮೈಸೂರಿನ ಕಾಂಗ್ರೆಸ್ಸಿನ ಶಾಸಕರು, ಮಾಜಿ ಶಾಸಕರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಮೇಲೆ ದಾಖಲಾಗಿದೆ.
ಮೇಕೆದಾಟು ಪಾದಯಾತ್ರೆಗೆ ಸಂಬಂಧಿಸಿದಂತೆ ದಿನಾಂಕ.11.01.2022 ರಂದು ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ ಹಾಗೂ ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆಕ್ಟ್ -2020 ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಆರೋಪಿಗಳ ವಿವರ ಇಂತಿದೆ
A1- ಹುಣಸೂರು ಶಾಸಕರ ಎಚ್ ಪಿ ಮಂಜುನಾಥ್
A2 - ಮೈಸೂರು ಮಾಜಿ ಶಾಸಕ ವಾಸು.
A3 - ನಂಜನಗೂಡು- ಮಾಜಿ ಶಾಸಕ ಕಳಲೆ ಕೇಶವಮೂರ್ತಿ.
A4 - ಮಾಜಿ ವಿಧಾನ ಪರಿಷತ್ ಸದಸ್ಯ ಆರ್. ಧರ್ಮಸೇನ
A5- ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿಜೆ ವಿಜಯ್ ಕುಮಾರ್.
A6. ಕಾಂಗ್ರೆಸ್ ಮುಖಂಡ ಶ್ರೀನಾಥ್ ಬಾಬು. ಹಾಗೂ ಇತರೆ 20 ಮಂದಿ ವಿರುದ್ಧ ದೂರು ದಾಖಲಾಗಿದೆ.
ಸೆಕ್ಷನ್ 5 (4) ಸೆಕ್ಷನ್ 6, ಸೆಕ್ಷನ್ 4, ಸೆಕ್ಷನ್ 51, ಸೆಕ್ಷನ್ 188 ಐಪಿಸಿ ಅಡಿಯಲ್ಲಿ ಮೈಸೂರಿನ ಲಸ್ಕರ್ ಪೊಲೀಸ್ ಠಾಣೆಯಲ್ಲಿ
ಕೇಸು ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಹಾಸನ ಕಾಂಗ್ರೆಸ್ ನಾಯಕರ ವಿರುದ್ಧವೂ ಕೇಸ್ ಬುಕ್
ಯೆಸ್..ಮೈಸೂರು ಮಾತ್ರವಲ್ಲದೇ ಹಾಸನ ಜಿಲ್ಲಾ ಕಾಂಗ್ರೆಸ್ ನಾಯಕರ ವಿರುದ್ಧವೂ ಸಹ ದೂರು ದಾಖಲಾಗಿದೆ.
ಜನವರಿ 12ರಂದು ಜಿಲ್ಲೆಯಿಂದ 6 ಸಾವಿರ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪಾದಯಾತ್ರೆಗೆ ತೆರಳಿದ್ದರು. ಪೊಲೀಸರು ಕೋವಿಡ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಕೇಸ್ ದಾಖಲಿಸಿದ್ದು, ಹಾಸನ ನಗರ, ಬಡಾವಣೆ, ಪೆನ್ಷನ್ ಮೊಹಲ್ಲಾ, ಹೊಳೆನರಸೀಪುರ, ಚನ್ನರಾಯಪಟ್ಟಣ ತಾಲೂಕಿನ ಠಾಣೆಗಳಲ್ಲಿ ಕೇಸ್ ದಾಖಲಿಸಿದ್ದಾರೆ.
ಕೋವಿಡ್ ಮಾರ್ಗಸೂಚಿಗೆ ವಿರುದ್ಧವಾಗಿ ಜನರನ್ನು ಸೇರಿಸಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಪಾಲಿಸದೆ, ನಿರ್ಲಕ್ಷ್ಯ ವಹಿಸಿರುವ ಕಾರ್ಯಕರ್ತರನ್ನು ಕರೆದೊಯ್ದ ನಾಯಕರ ವಿರುದ್ಧ ಪ್ರಕರಣಗಳು ದಾಖಲಾಗಿದೆ. ಮಾಜಿ ಎಂಎಲ್‍ಸಿ ಗೋಪಾಲಸ್ವಾಮಿ, ಮಾಜಿ ಶಾಸಕ ಪುಟ್ಟೇಗೌಡ, ಬಾಗೂರು ಮಂಜೇಗೌಡ, ಕೃಷ್ಣೇಗೌಡ ನೇತೃತ್ವದಲ್ಲಿ ಸುಮಾರು 300 ವಾಹನದಲ್ಲಿ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದವರು. ಸದ್ಯ ಎಲ್ಲರ ಮೇಲೆ ಕೇಸ್ ದಾಖಲಾಗಿದ್ದು, ಕೊರೊನಾ ನಿಯಮ ಮೀರಿ ವರ್ತಿಸಿದ್ದಾರೆಂದು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕೋವಿಡ್ ನಿಯಮ ಉಲ್ಲಂಘನೆ ಆರೋಪದಲ್ಲಿ ಕೇಸ್ ದಾಖಲಿಸಿದ ಪೊಲೀಸರ ವಿರುದ್ಧ ಕಾಂಗ್ರೆಸ್ ನಾಯಕರು ಅಸಮಾಧಾನ ಹೊರಹಾಕಿದ್ದಾರೆ.
ಖರ್ಗೆ, ಸಿದ್ದು, ಡಿಕೆಶಿ ಸೇರಿ 30 ಜನರ ವಿರುದ್ಧ ಎಫ್‍ಐಆರ್
ಕಾಂಗ್ರೆಸ್ ಪಕ್ಷದ ವತಿಯಿಂದ ಜ.9ರ ಭಾನುವಾರ ಪ್ರಾರಂಭವಾಗಿದ್ದ ಮೇಕೆದಾಟು ಅಣೆಕಟ್ಟು ಯೋಜನೆಯ ತ್ವರಿತ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಪ್ರಾರಂಭವಾದ ಸ್ಥಳ ಸಂಗಮದಲ್ಲಿ ಪಾಲ್ಗೊಂಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅದ್ಯಕ್ಷ ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ್ ಸೇರಿದಂತೆ 30 ಜನರ ಮೇಲೆ ರಾಮನಗರ ಪೊಲೀಸರು ಸೋಮವಾರ ಎಫ್‍ಐಆರ್ ದಾಖಲಿಸಿದ್ದಾರೆ.
ಮೇಕೆದಾಟು ಅಣೆಕಟ್ಟು ಯೋಜನೆಯ ತ್ವರಿತ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ರವಿವಾರದಿಂದ ಹಮ್ಮಿಕೊಂಡಿರುವ ಪಾದಯಾತ್ರೆ ವೇಳೆ ವಾರಾಂತ್ಯ ಕರ್ಫ್ಯೂ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಲ್ಲಿ ಈ ಎಫ್‍ಐಆರ್ ದಾಖಲಾಗಿದೆ.
ವೇದಿಕೆ ಕಾರ್ಯಕ್ರಮದಲ್ಲಿ ಆಸೀನರಾಗಿದ್ದವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಸರ್ಕಾರದ ಆದೇಶದಂತೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕನಕಪುರ ತಾಲ್ಲೂಕಿನ ಸಂಗಮ ಪ್ರದೇಶದ ಸುತ್ತಮುತ್ತ ವಾರಾಂತ್ಯದಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಹೇರಿತ್ತು. ಇದನ್ನು ಉಲ್ಲಂಘಿಸಿ, ಜನರನ್ನು ಸೇರಿಸಿ ಪಾದಯಾತ್ರೆ ಮಾಡಿದ ಕಾರಣ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಸಾತನೂರು ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೈಕೋರ್ಟ್ ಛೀಮಾರಿ ಹಾಕಿತ್ತು
ಕೊರೋನಾ ಆತಂಕದ ಮಧ್ಯೆ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಡೆಗೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ತೀವ್ರ ಅಸಮಾಧಾನ ಹೊರ ಹಾಕಿತ್ತು. ಸರ್ಕಾರದ ಮಾರ್ಗಸೂಚಿ ಪಾಲಿಸಲು ಕೆಪಿಸಿಸಿ ಏನು ಕ್ರಮ ಕೈಗೊಂಡಿದೆ ಎಂದೂ ಕಾಂಗ್ರೆಸ್ ಪಕ್ಷವನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಮತ್ತು ನ್ಯಾ. ಸೂರಜ್ ಗೋವಿಂದರಾಜ್ ನೇತೃತ್ವದ ಪೀಠ ಪ್ರಶ್ನಿಸಿತ್ತು. ಅಲ್ಲದೇ ಈ ಬಗ್ಗೆ ವರದಿ ನೀಡುವಂತೆ ತಿಳಿಸಿ ವಿಚಾರಣೆ ಜ.14ಕ್ಕೆ ಮುಂದೂಡಿತ್ತು.
ಕೆಪಿಸಿಸಿ ಲೀಗಲ್ ಸೆಲ್ ಅಧ್ಯಕ್ಷಗೆ ಬುಲಾವ್ ಹೋಗಿತ್ತು. ಲೀಗಲ್ ಸೆಲ್ ಅಧ್ಯಕ್ಷ ವಕೀಲ ಎ.ಎಸ್ ಪೊನ್ನಣ್ಣಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಿಂದ ಕರೆ ಹೋಗಿದ್ದು ರಾಮನಗರಕ್ಕೆ ಕರೆಸಿಕೊಂಡು ಮಾತನಾಡಿದ್ದರು. ಹೈಕೋರ್ಟ್ನಿಂದ ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೋರ್ಟ್ ವರದಿ ಕೇಳಿತ್ತು.